ವರಿಷ್ಠರ ಎಚ್ಚರಿಕೆ ಬಳಿಕವೂ ಸಿಎಂ ಬದಲು ಹೇಳಿಕೆ: ಸುರ್ಜೇವಾಲಾ ಎಚ್ಚರಿಕೆಗೂ ಇಲ್ಲ ಕಿಮ್ಮತ್ತು!

ಮುಖ್ಯಮಂತ್ರಿಯಾಗುವ ಆಸೆ ಯಾರಿಗಿರುವುದಿಲ್ಲ? ದಲಿತರು ಮುಖ್ಯಮಂತ್ರಿ ಆಗಬಾರದೇ? ನಾನು ಸಹ ದಲಿತನಾಗಿದ್ದು ಮುಖ್ಯಮಂತ್ರಿ ಆದರೆ ತಪ್ಪೇನು? ಎಂದು ಪ್ರಶ್ನಿಸಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ 


ಹುಬ್ಬಳ್ಳಿ(ಜ.15): ಮುಖ್ಯಮಂತ್ರಿ ಬದಲಾವಣೆ ಮತ್ತು ಡಿನ್ನ‌ರ್ ಮೀಟಿಂಗ್ ಸೇರಿದಂತೆ ಮಾಧ್ಯಮಗಳಿಗೆ ಯಾವುದೇ ರಾಜಕೀಯ ಹೇಳಿಕೆ ನೀಡಿದರೆ ಪಕ್ಷದಿಂದ ಶಿಸ್ತು ಕ್ರಮ ನಿಶ್ಚಿತ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೋಮವಾರ ಸಂಜೆ ಬೆಂಗಳೂರಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಸಚಿವರು - ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ ಮರುದಿನವೇ ಇಬ್ಬರು ನಾಯಕರು ಎಚ್ಚರಿಕೆ ಧಿಕ್ಕರಿಸಿ ಹೇಳಿಕೆ ಮುಂದುವರಿಸಿದ್ದಾರೆ. 

ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಮುಖ್ಯಮಂತ್ರಿಯಾಗುವ ಆಸೆ ಯಾರಿಗಿರುವುದಿಲ್ಲ? ದಲಿತರು ಮುಖ್ಯಮಂತ್ರಿ ಆಗಬಾರದೇ? ನಾನು ಸಹ ದಲಿತನಾಗಿದ್ದು ಮುಖ್ಯಮಂತ್ರಿ ಆದರೆ ತಪ್ಪೇನು? ಎಂದು ಪ್ರಶ್ನಿಸಿದ್ದಾರೆ. 
ಇನ್ನೊಬ್ಬ ನಾಯಕ ಮಾಜಿ ಸಚಿವ ಎಸ್.ಆರ್. ಪಾಟೀಲ, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಗಳಾದರೆ ಹೃತ್ತೂರ್ವಕವಾಗಿ ಸ್ವಾಗತಿಸುವೆ ಎಂದು ತಿಳಿಸಿದ್ದಾರೆ. 

Latest Videos

ಕಾರಜೋಳರವರೇ ನಿಮ್ಮ ಬಂಡವಾಳವೇ ಸಾಕಷ್ಟಿದೆ: ಸಚಿವ ತಿಮ್ಮಾಪೂರ

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಆರ್.ಬಿ.ತಿಮ್ಮಾಪುರ, 'ಸಚಿವ ಡಾ.ಜಿ.ಪರಮೇಶ್ವರ ನಿವಾಸದಲ್ಲಿ ನಡೆಯಬೇಕಾಗಿದ್ದ ದಲಿತರ ಸಭೆ ರದ್ದುಗೊಳಿಸಿಲ್ಲ, ಕಾರಣಾಂತರಗಳಿಂದ ಮುಂದೂಡಲಾಗಿದೆ. ದಲಿತ ಶಾಸಕರು ಹಾಗೂ ಸಚಿವರು ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ವಿಚಾರ ಹಾಗೂ ಸಮಸ್ಯೆ ಹೇಳಿಕೊಳ್ಳುವ ಉದ್ದೇಶದಿಂದ ಈ ಸಭೆ ಕರೆಯಲಾಗಿತ್ತು. ದೆಹಲಿಯಿಂದ ಸಭೆ ರದ್ದು ಮಾಡಿಸಲಾಗಿದೆ ಎನ್ನುವುದೆಲ್ಲವೂ ಮಾಧ್ಯಮ ಸೃಷ್ಟಿ' ಎಂದು ಹೇಳಿದರು. 

ಸಿ.ಟಿ.ರವಿ ಹಿಂದೂ ಧರ್ಮದಲ್ಲಿ ಇರಲಿಕ್ಕೆ ಯೋಗ್ಯರಲ್ಲ: ಸಚಿವ ಆರ್.ಬಿ.ತಿಮ್ಮಾಪೂರ

ಮಾಜಿ ಸಚಿವ ಎಸ್.ಆರ್. ಪಾಟೀಲ ಮಾತನಾಡಿ, ಉತ್ತರ ಕರ್ನಾಟಕದವರು ಸಿಎಂ ಆದರೆ ಸ್ವಾಗತಿಸುವೆ. ಇನ್ನು ಸಿಎಂ ಬದಲಾವಣೆ ವರಿಷ್ಠರಿಗೆ ಬಿಟ್ಟ ವಿಚಾರ. ಇಲ್ಲಿ ಯಾರೂ ಕೂಡ ಸನ್ಯಾಸಿಗಳಲ್ಲ. ಪ್ರತಿಯೊಬ್ಬ ಶಾಸಕರಿಗೂ ಸಚಿವ ನಾಗುವ ಬಗ್ಗೆ ಆಸೆ ಇದ್ದೆ ಇರುತ್ತದೆ. ನಮಗೂ ಅವಕಾಶ ಮಾಡಿಕೊಡಿ ಎಂದು ಹೈಕಮಾಂಡ್‌ಗೆ ಸಹಜವಾಗಿ ಕೇಳು ತ್ತಾರೆ. ಇದರಲ್ಲಿ ತಪ್ಪೇನಿದೆ? ಅಧಿಕಾರ ಹಂಚಿಕೆ ಮಾತುಕತೆ ಕುರಿತು ನನಗೆ ಮಾಹಿತಿಯಿಲ್ಲ ಎಂದರು. ಶಾಸಕರು ಮಂತ್ರಿಯಾಗಬೇಕು, ಮಂತ್ರಿಗಳು ಸಿಎಂ ಆಗಬೇಕು ಎನ್ನುತ್ತಾರೆ. ಇದು ಸಹಜ ಪ್ರಕ್ರಿಯೆ ಎಂದರು.

ಉಸ್ತುವಾರಿ ಸುರ್ಜೇವಾಲಾ ಎಚ್ಚರಿಕೆಗೂ ಇಲ್ಲ ಕಿಮ್ಮತ್ತು 

• ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೂ ಹೇಳಿಕೆ ನೀಡಬೇಡಿ ಎಂದಿದ್ದ ಸುರ್ಜೇವಾಲಾ . ಆದರೂ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ ತಿಮ್ಮಾಪುರ, ಎಸ್ಸಾರ್ಪಿ 
• ದಲಿತರೇಕೆ ಸಿಎಂ ಆಗಬಾರದು? ನಾನು ಆದರೆ ತಪ್ಪೇನೆಂದು ಸಚಿವ ಆರ್.ಬಿ.ತಿಮ್ಮಾಪುರ ಪ್ರಶ್ನೆ 
• ಉತ್ತರ ಕರ್ನಾಟಕದವರು ಸಿಎಂ ಆದರೆ ಹೃತ್ತೂರ್ವಕವಾಗಿ ಸ್ವಾಗತಿಸುವೆ ಎಂದ ಪಾಟೀಲ 
• ಶಾಸಕರೇನೂ ಸನ್ಯಾಸಿಗಳಲ್ಲ, ಎಲ್ಲರಿಗೂ ಆಸೆ ಇರುತ್ತದೆ ಎಂದ ಎಸ್.ಆರ್.ಪಾಟೀಲ್

click me!