ಕೆಳಮಟ್ಟದ ರಾಜಕಾರಣದಿಂದ ನನಗೆ ಬೇಜಾರಾಗಿದೆ. ಇದೇ ಬಾರಿ ನಾನು ಸ್ಪರ್ಧೆ ಮಾಡುತ್ತಿರಲಿಲ್ಲ ವೈರಿಗಳಿಗೆ ತಕ್ಕ ಉತ್ತರ ನೀಡಲು ಈ ಬಾರಿ ಸ್ಪರ್ಧೆ ಮಾಡುತ್ತಿದ್ದೇನೆ. ಮುಂದಿನ ಬಾರಿ ಸ್ಪರ್ಧೆ ಮಾಡೋದಿಲ್ಲ ಎಂದು ಮಾಜಿ ಸಚಿವ ಹಾಗೂ ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ (ಏ.14): ಕೆಳಮಟ್ಟದ ರಾಜಕಾರಣದಿಂದ ನನಗೆ ಬೇಜಾರಾಗಿದೆ. ಇದೇ ಬಾರಿ ನಾನು ಸ್ಪರ್ಧೆ ಮಾಡುತ್ತಿರಲಿಲ್ಲ ವೈರಿಗಳಿಗೆ ತಕ್ಕ ಉತ್ತರ ನೀಡಲು ಈ ಬಾರಿ ಸ್ಪರ್ಧೆ ಮಾಡುತ್ತಿದ್ದೇನೆ. ಮುಂದಿನ ಬಾರಿ ಸ್ಪರ್ಧೆ ಮಾಡೋದಿಲ್ಲ ಎಂದು ಮಾಜಿ ಸಚಿವ ಹಾಗೂ ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದರು. ನಗರ ತಾಲೂಕಾಡಳಿತ ಸೌಧ(ತಹಸೀಲ್ದಾರ್ ಕಾರ್ಯಾಲಯ)ಕ್ಕೆ ಗುರುವಾರ ತೆರಳಿ ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ಸಾಂಕೇತಿಕ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ, ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೊಗುತ್ತಿದ್ದೇನೆ. ಕಾಂಗ್ರೆಸ್ ನಾಯಕರು ಮಾಡಿದ ಷಡ್ಯಂತ್ರ ನೋಡಿದರೇ ನಾನು ಮೇಲೆದ್ದು ಬರುತ್ತಿರಲಿಲ್ಲ. ಜನರ ಪ್ರೀತಿ, ವಿಶ್ಚಾಸದಿಂದ ಮತ್ತೆ ಎಲ್ಲರ ಎದುರು ನಿಂತಿದ್ದೇನೆ ಎಂದರು. ಗೋಕಾಕ ಮತಕ್ಷೇತ್ರದ ಜನತೆಯ ಆಶೀರ್ವಾದ, ಪ್ರೀತಿಯಿಂದ ನಾನು 6 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕ್ಷೇತ್ರದ ಜನ ಅಪಪ್ರಚಾರಕ್ಕೆ ಕಿವಿ ಕೊಟ್ಟಿಲ್ಲ, ಜಾತ್ಯಾತೀತ ವಾಗಿ ನನ್ನ ಬೆಂಬಲಿಸಿದ್ದಾರೆ ಎಂದರು.
ನಾನು ನೆಪಮಾತ್ರ, ಪಕ್ಷದ ಕಾರ್ಯಕರ್ತರೆ ದೊಡ್ಡ ಶಕ್ತಿ: ಸಚಿವ ಸೋಮಣ್ಣ
ಬೇಕಿದ್ದರೆ ನಾನೇ ಒಂದು ಹೆಜ್ಜೆ ಹಿಂದೆ ಸರಿಯುತ್ತೇನೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ನಾನು ನಿಜವಾಗಿಯೂ ನಾವಿಬ್ಬರೂ ಉತ್ತಮ ಸ್ನೇಹಿತರು, ಕೆಟ್ಟಗಳಿಗೆಯಲ್ಲಿ ನಾವಿಬ್ಬರೇ ಬೇರೆ ಬೇರೆಯಾಗಿದ್ದೇವೆ. ನಾನು ಕಾಂಗ್ರೆಸ್‌ನಲ್ಲಿದ್ದೆ, ಅವನು ಬಿಜೆಪಿಯಲ್ಲಿದ್ದ. ಅಚಾನಕ್ ನಾವಿಬ್ಬರೂ ಒಂದೇ ಪಕ್ಷದಲ್ಲಿದ್ದೇವೆ. ಲಕ್ಷ್ಮಣ ಸವದಿಗೆ ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ. ನಿಮ್ಮ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಿ. ಯಾವುದೇ ದುಡುಕಿನ ನಿರ್ಧಾರ ಬೇಡ. ನಾವಿಬ್ಬರೂ ಸೇರಿ 2023ಕ್ಕೆ ಜಿಲ್ಲೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರೋಣ, ಬಿಜೆಪಿ ಕಟ್ಟೋಣ ಬೇಕಿದ್ದರೆ ನಾನೇ ಒಂದು ಹೆಜ್ಜೆ ಹಿಂದೆ ಸರಿಯುತ್ತೇನೆ. ಮತ್ತೊಮ್ಮೆ ವಿಚಾರ ಮಾಡಿ ಬಿಜೆಪಿಯಲ್ಲಿ ಮುಂದುವರೆಯಬೇಕು ಎಂದು ಮನವಿ ಮಾಡಿದರು.
ಬಡವರ ವಿರೋಧಿ ಬಿಜೆಪಿ ಸರ್ಕಾರ ಕಿತ್ತೊಗೆಯಿರಿ: ಶಾಸಕ ಯತೀಂದ್ರ
ನಮ್ಮಿಬ್ಬರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇದ್ದರೆ ಕುಳಿತು ಬಗೆಹರಿಸಿಕೊಳ್ಳೋಣ. ಮಹೇಶ್ ಕುಮಠಳ್ಳಿ ಪರ ಬ್ಯಾಟಿಂಗ್ ಮಾಡೋದು ನನ್ನ ಧರ್ಮ, ನಾನು ಮಾಡಿದ್ದೇನೆ. ಆದರೆ, ಲಕ್ಷ್ಮಣ ಸವದಿ ವಿರುದ್ಧ ಅಲ್ಲ. ನಿನ್ನ ಸ್ಥಾನಮಾನ ಕಸಿದುಕೊಂಡಿಲ್ಲ. ಹಿಂದಿನ ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಕಾಂಗ್ರೆಸ್ ಗೆಲ್ಲಿಸುವುದು ನನ್ನ ಕರ್ತವ್ಯ ಮಾಡಿದ್ದೇನೆ. ಈಗ ಎಂಎಲ್‌ಸಿ ಇದ್ದೀರಿ 5 ವರ್ಷ ಅಧಿಕಾರ ಅವಧಿ ಇದೆ. ಕುಮಠಳ್ಳಿ ಎಂಎಲ್‌ಎ ಆಗಬೇಕು, ಮುಂದಿನ ದಿನದಲ್ಲಿ ಇಬ್ಬರೂ ಸೇರಿ ಬಿಜೆಪಿಗಾಗಿ ಕೆಲಸ ಮಾಡೋಣ ಎಂದು ತಿಳಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.