ಲೋಕಸಭೆ ಚುನಾವಣೆ ಟಿಕೆಟ್‌ ಆಕಾಂಕ್ಷಿ ನಾನಲ್ಲ: ಮಾಜಿ ಸಿಎಂ ಬೊಮ್ಮಾಯಿ

By Kannadaprabha News  |  First Published Dec 20, 2023, 10:26 AM IST

ಲೋಕಸಭೆ ಚುನಾವಣೆ ಟಿಕೆಟ್‌ ಆಕಾಂಕ್ಷಿಯೂ ನಾನಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.


ಹುಬ್ಬಳ್ಳಿ (ಡಿ.20): ಲೋಕಸಭೆ ಚುನಾವಣೆ ಟಿಕೆಟ್‌ ಆಕಾಂಕ್ಷಿಯೂ ನಾನಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಇಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಈ ಹಿಂದೆಯೂ ಹೇಳಿದ್ದೇನೆ. ನಾನು ಲೋಕಸಭೆ ಚುನಾವಣೆ ಟಿಕೆಟ್‌ ಆಕಾಂಕ್ಷಿ ಅಲ್ಲ ಎಂದರು.'

ನಾವು ಆರಂಭಿಸಿದ ಏಳು ವಿವಿ ಮುಚ್ಚಬೇಡಿ: ಹಿಂದಿನ ಸರ್ಕಾರದ ಅವಧಿಯಲ್ಲಿ ಆರಂಭವಾಗಿರುವ ಏಳು ವಿಶ್ವವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪದಲ್ಲಿ ಮುಚ್ಚುವ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಬೊಮ್ಮಾಯಿ, ಹೊಸ ಸರ್ಕಾರ ಬಂದು ಬೆಳಗಾವಿಯಲ್ಲಿ ಪ್ರಥಮ ಅಧಿವೇಶನ ನಡೆಸುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ಮತ್ತು ಸಮರ್ಪಕವಾಗಿ ಉತ್ತರವನ್ನು ಉತ್ತರ ಕರ್ನಾಟಕದ ಜನರು ನಿರೀಕ್ಷೆ ಮಾಡಿದ್ದರು. ಆದರೆ, ಯಾವುದೇ ವಿಶೇಷವಾಗಿರುವ ಅಭಿವೃದ್ಧಿ ಪರ ನಿರ್ಣಯಗಳನ್ನು ಸರ್ಕಾರ ಘೋಷಿಸದೇ ಈಗಾಗಲೇ ಇರುವಂತಹ ಕಾರ್ಯಕ್ರಮಗಳನ್ನು ಪುನಃ ಘೋಷಿಸಿ ಜನರ ನಿರೀಕ್ಷೆಯನ್ನು ಹುಸಿಗೊಳಿಸಿದ್ದೀರಿ ಎಂದಿದ್ದಾರೆ.

Tap to resize

Latest Videos

ಎಂಥ ವಿಚಾರಕ್ಕೆ ಪ್ರತಿಭಟಿಸಬೇಕೆಂದೂ ಬಿಜೆಪಿಗೆ ಗೊತ್ತಿಲ್ಲ: ಸಚಿವ ಪರಮೇಶ್ವರ್‌

ನಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಚಾಮರಾಜನಗರ, ಕೊಡಗು, ಹಾಸನ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಬೀದರ್, ಹಾವೇರಿ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಏಳು ನೂತನ ವಿಶ್ವವಿದ್ಯಾಲಯಗಳು ಕಾರ್ಯಾರಂಭ ಮಾಡಿವೆ. ಆದರೆ, ರಾಜ್ಯ ಸರ್ಕಾರ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನೂತನ ವಿಶ್ವವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪ ಹೇಳಿ ಮುಚ್ಚಲು ಮುಂದಾಗಿದೆ. ಇದರಿಂದ ಹಿಂದುಳಿದ ಜಿಲ್ಲೆಗಳು ಮತ್ತು ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದಂತಾಗುತ್ತದೆ. ತಕ್ಷಣ ಈ ಪ್ರಸ್ತಾಪ ಕೈಬಿಡಬೇಕು ಎಂದು ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಮೋದಿ ವರ್ಚಸ್ಸು ಹೆಚ್ಚಳ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಇದು ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆಗಿಂತ ಮೊದಲು ಬಂದಿರುವುದರಿಂದ ಸೆಮಿಫೈನಲ್ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲಿಂದ‌ ಮೇಲೆ ಹೇಳಿದ್ದಾರೆ. ಈ ಫಲಿತಾಂಶ ಲೋಕಸಭೆ ಚುನಾವಣೆಗೆ ಸ್ಪಷ್ಟ ಸಂದೇಶ ನೀಡಿದೆ. 

ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯಾಗಿದೆ. ದೇಶದಲ್ಲಿ ಈಗಿನ ವಾತಾವರಣ ನೋಡಿದರೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುತ್ತಾರೆ. ರಾಜ್ಯದಲ್ಲಿ 25 ಲೋಕಸಭಾ ಸ್ಥಾನ ಗೆಲ್ಲುತ್ತೇವೆ. ಜೆಡಿಎಸ್ ಜೊತೆಗಿನ ಹೊಂದಾಣಿಕೆ ನಮಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು. ರಾಜ್ಯ ಸರ್ಕಾರದ ಗ್ಯಾರಂಟಿಗಳು ಕೇವಲ ಶೇ.25ರಷ್ಟು ಜನರಿಗೆ ಮಾತ್ರ ತಲುಪಿವೆ. ಅಧಿವೇಶನ ಮುಗಿದ ಮೇಲೆ ಗ್ಯಾರಂಟಿಗಳ ಸರಿಯಾದ ಅನುಷ್ಠಾನಕ್ಕಾಗಿ ಬೃಹತ್ ಚಳವಳಿ ನಡೆಸಲು ತೀರ್ಮಾನ ಮಾಡಿದ್ದೇವೆ. ಗ್ಯಾರಂಟಿ ದೊರೆಯದ ಫಲಾನುಭವಿಗಳ ಮುಂದಾಳತ್ವದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

click me!