ನಾನು ಲೋಕ​ಸಭಾ ಚುನಾ​ವಣೆ ಟಿಕೆಟ್‌ ಆಕಾಂಕ್ಷಿ ಅಲ್ಲ: ಎಂಟಿಬಿ ನಾಗರಾಜ್

By Govindaraj S  |  First Published Sep 11, 2023, 11:13 PM IST

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿರುವ ಎಂಟಿಬಿ ನಾಗರಾಜ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿರುವ ನಡುವೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. 


ಹೊಸಕೋಟೆ (ಸೆ.11): ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿರುವ ಎಂಟಿಬಿ ನಾಗರಾಜ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿರುವ ನಡುವೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇ ಆಗಲಿ, ನಮ್ಮ ಕುಟುಂಬದ ಸದಸ್ಯರಾಗಲಿ, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಅಲ್ಲ. ನಾವು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ. ಬಿಜೆಪಿ ಪಕ್ಷ ಇನ್ನು ಯಾರನ್ನು ಅಭ್ಯರ್ಥಿ ಮಾಡುತ್ತೋ ನೋಡೋಣ ಎಂದರು. ಮಾಜಿ ಸಚಿವ ಸುಧಾಕರ್ ಸ್ಪರ್ಧೆ ಮಾಡಿದರೆ ನೀವು ಬೆಂಬಲ ಕೊಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಲಿ, ಆಮೇಲೆ ನಾನು ಬೆಂಬಲ ಕೊಡ್ತೇನೋ? ಇಲ್ವೋ ಎಂದು ಪ್ರತಿಕ್ರಿಯೆ ಕೊಡ್ತೇನೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು.

Latest Videos

undefined

ರಾಜ್ಯ​ದಲ್ಲಿ ಸರ್ಕಾರ ಇದೆಯೋ, ಇಲ್ವೋ ಎಂಬ ಗೊಂದಲ ಉಂಟಾಗಿದೆ: ಎಂಟಿಬಿ ನಾಗರಾಜ್‌

ಕೆಲಸ ಮಾಡದವರು ಮಾತಾಡಬೇಡಿ: ಸಂಸದ ಬಿ.ಎನ್.ಬಚ್ಚೇಗೌಡರು ಚುನಾವಣೆ ಸಂದರ್ಭದಲ್ಲಿ ತನ್ನ ಮಗನ ಗೆಲುವಿಗಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿ ಈಗ ಬಿಜೆಪಿ ಪಕ್ಷ ಹಾಗೂ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಅವರಿಗಿಲ್ಲ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಕಿಡಿಕಾರಿದರು. 

ಸಂಸದ ಬಚ್ಚೇಗೌಡರು ಇತ್ತೀಚೆಗೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವ ಬಗ್ಗೆ ಹಾಗೂ ಹಿಂದಿನ ಸರ್ಕಾರದಲ್ಲಿ ಉಸ್ತುವಾರಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಅವರು ಪಕ್ಷದ ಕಾರ್ಯ ಚಟುವಟಿಕೆಗೆ ಬಳಕೆ ಮಾಡಿಕೊಂಡಿಲ್ಲ ಎಂಬ ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಶಿಷ್ಟಾಚಾರವಾಗಿ ಎಲ್ಲಾ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಿಸಿ ಆಹ್ವಾನ ಪ್ರತಿಕೆ ಕಳುಹಿಸುತ್ತಿದ್ದೆ. ಅವರಿಗೆ ಯಾವುದೇ ಕಾರ್ಯಕ್ರಮಕ್ಕೆ ಬರೋಕೆ ಮುಖ ಇರ್ತಿರಲಿಲ್ಲ ಎಂದು ಹೇಳಿದರು.

2024ಕ್ಕೆ ನರೇಂದ್ರ ಮೋದಿಯೇ ಪ್ರಧಾನಿ: ಎಂಟಿಬಿ ನಾಗರಾಜ್‌

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಸಕೋಟೆಯಲ್ಲಿ ತನ್ನ ಮಗನ ಗೆಲುವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡಿದ್ದು ಎರಡು ಜಿಲ್ಲೆಯಲ್ಲಿ ಒಬ್ಬ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ. ಪ್ರಮುಖವಾಗಿ ಸಂಸದರ 5 ಕೋಟಿ ಅನುದಾನ ಪಡೆದು ಜಿಲ್ಲೆಯ ಯಾವುದೇ ತಾಲೂಕಿಗೆ 1 ರುಪಾಯಿ ಅನುದಾನ ಕೊಟ್ಟಿಲ್ಲ. ಇದನ್ನು ಪ್ರಶ್ನೆ ಮಾಡಲು ಅಲ್ಲಿನ ಕಾರ್ಯಕರ್ತರು ಕಾಯುತ್ತಿದ್ದರು. ಕಾರ್ಯಕರ್ತರಿಂದ ತಪ್ಪಿಸಿಕೊಳ್ಳಲು ಸಭೆ, ಸಮಾರಂಭಗಳಿಗೂ ಬರುತ್ತಿರಲಿಲ್ಲ. ಅದನ್ನು ಬಿಟ್ಟು ವಿನಾಕಾರಣ ಬಿಜೆಪಿ ಪಕ್ಷ ಅಥವಾ ನನ್ನ ಮೇಲೆ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದರು.

click me!