
ಬೈಲಹೊಂಗಲ (ಏ.17): ನಮ್ಮ ತಂದೆ ಮುಖ್ಯಮಂತ್ರಿ ಇರುವವರೆಗೆ ಸಚಿವ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಹಿರಿಯರು ಹಾಗೂ ಅನುಭವಿಗಳಿಗೆ ಅವಕಾಶ ಸಿಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ಶಾಸಕರು ಸಚಿವ ಸ್ಥಾನ ಕೇಳುವುದು ಸಹಜ. ಯಾವುದೇ ಸಚಿವ ಸಂಪುಟದಲ್ಲಿ ಹೊಸಬರು ಹಾಗೂ ಅನುಭವಿಗಳಿರುತ್ತಾರೆ ಎಂದರು. ತಮ್ಮ ತಂದೆ ಮುಂದಿನ ಐದು ವರ್ಷ ರಾಜ್ಯವನ್ನು ಮುನ್ನಡೆಸಲಿ ಎಂಬುದು ನನ್ನ ವೈಯಕ್ತಿಕ ಆಶಯ ಮಾತ್ರ. ಐದು ವರ್ಷ ಆಡಳಿತದ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಸಿಎಂ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸಹಜ. ರಾಜ್ಯದ ಜನರಿಗೆ ಒಳ್ಳೆಯದಾಗುವುದೇ ಮುಖ್ಯ ಎಂದು ಹೇಳಿದರು.
136 ಶಾಸಕರಿದ್ದರೂ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲ ಸರ್ಕಾರಗಳಲ್ಲಿಯೂ ಇಂತಹ ಚರ್ಚೆಗಳು ನಡೆಯುತ್ತವೆ. ಬಿಜೆಪಿ ಸರ್ಕಾರದಲ್ಲಿಯೂ ಮುಖ್ಯಮಂತ್ರಿಗಳ ಬದಲಾವಣೆ ನಡೆದಿತ್ತು. ಎಲ್ಲ ಪಕ್ಷಗಳಲ್ಲಿಯೂ ಸಿಎಂ ಆಕಾಂಕ್ಷಿಗಳು ಇರುವುದು ಸಾಮಾನ್ಯ ಎಂದರು. ಬಾಗಲಕೋಟೆ ಹಾಗೂ ದಾವಣಗೆರೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.