ನನಗೆ ಯಾವುದೇ ಅಧಿಕಾರದ ಆಸೆಯಿಲ್ಲ. ಮುಖ್ಯಮಂತ್ರಿಯಾಗುವುದು ಸೇರಿದಂತೆ ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಗೌರವದಿಂದ ನಡೆಸಿಕೊಂಡರೆ ಅಷ್ಟೇ ಸಾಕು. ಅದೇ ಬೇಡಿಕೆಯನ್ನಿಟ್ಟುಕೊಂಡು ಕಾಂಗ್ರೆಸ್‌ಗೆ ಸೇರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ (ಮೇ.6) : ನನಗೆ ಯಾವುದೇ ಅಧಿಕಾರದ ಆಸೆಯಿಲ್ಲ. ಮುಖ್ಯಮಂತ್ರಿಯಾಗುವುದು ಸೇರಿದಂತೆ ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಗೌರವದಿಂದ ನಡೆಸಿಕೊಂಡರೆ ಅಷ್ಟೇ ಸಾಕು. ಅದೇ ಬೇಡಿಕೆಯನ್ನಿಟ್ಟುಕೊಂಡು ಕಾಂಗ್ರೆಸ್‌ಗೆ ಸೇರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಇಲ್ಲಿನ ಲಿಂಗರಾಜನಗರದಲ್ಲಿನ ಸಮುದಾಯ ಭವನದಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಾನು ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂಬ ಕಾರಣಕ್ಕೆ ಕಾಂಗ್ರೆಸ್‌ಗೆ ಸೇರಿದ್ದೇನೆ. ನಾನಿಲ್ಲಿ ಮುಖ್ಯಮಂತ್ರಿಯಾಗಬೇಕು. ಅಥವಾ ಮತ್ಯಾವುದೋ ಉನ್ನತ ಸ್ಥಾನದ ಆಸೆಗಾಗಿ ಇಲ್ಲಿ ಬಂದಿಲ್ಲ. ಅದರ ಆಕಾಂಕ್ಷಿಯೂ ನಾನಲ್ಲ ಎಂದು ಸ್ಪಷ್ಟಪಡಿಸಿದರು.
ಎಲ್ಲರೂ ಸೇರಿ ಶೆಟ್ಟರ್ ಗೆಲ್ಲಿಸಿ, ಆದ ಅವಮಾನಕ್ಕೆ ಬಿಜೆಪಿಗೆ ತಕ್ಕ ಪಾಠ ಕಲಿಸಿ: ಶಾಮನೂರು
ಇದೇ ವೇಳೆ ಬಿಜೆಪಿ ಲಿಂಗಾಯತರನ್ನು ತುಳಿಯುವ ಕೆಲಸ ಮಾಡುತ್ತಲೇ ಬರುತ್ತಿದೆ. ಈಗಿನ ಕೇಂದ್ರ ಸಂಪುಟವನ್ನು ನೋಡಿದರೆ ಗೊತ್ತಾಗುತ್ತದೆ. ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ಪ್ರಹ್ಲಾದ ಜೋಶಿ ಸಚಿವರಿದ್ದಾರೆ. ಇವರಲ್ಲಿ ಜೋಶಿ ಮಾತ್ರ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಉಳಿದವರು ರಾಜ್ಯ ಸಚಿವರಾಗಿದ್ದಾರೆ. ಈ ಉಳಿದ ಮೂವರು ಯಾವ್ಯಾವ ಸಮುದಾಯಕ್ಕೆ ಸೇರಿದವರು ಎಂಬುದನ್ನು ನೋಡಿ. ಅಂದಾಗ ಬಿಜೆಪಿಯಲ್ಲಿ ಯಾವ ಸಮುದಾಯಕ್ಕೆ ಸೇರಿದವರಿಗೆ ಆದ್ಯತೆ ನೀಡಲಾಗುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು. ಹಿಂದೆ ಸುರೇಶ ಅಂಗಡಿ ಅವರನ್ನು ರಾಜ್ಯ ಸಚಿವರನ್ನಾಗಿ ಮಾಡಿದ್ದರು. ಉಳಿದವರನ್ನೇಕೆ ಸಂಪುಟ ದರ್ಜೆ ಸಚಿವರನ್ನಾಗಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಪಕ್ಷಕ್ಕಾಗಿ ಕೂಲಿಯಂತೆ ದುಡಿದಿದ್ದೇನೆ. ಎಲ್ಲ ಸ್ಥಾನಮಾನ ಸಿಕ್ಕಿದೆ ಎಂದೆಲ್ಲ ಹೇಳುತ್ತಾರೆ. ಆದರೆ, ನಾನು ಪಕ್ಷಕ್ಕಾಗಿ ದುಡಿದಿದ್ದೇನೆ ಅಲ್ಲ. ಜತೆಗೆ ನನಗೆ ಸ್ಥಾನಮಾನ ಸಿಕ್ಕಿರುವುದು ಅತ್ಯಲ್ಪ ಅವಧಿ ಮಾತ್ರ. ಪಕ್ಷ ಸಂಕಷ್ಟಕ್ಕೊಳಗಾದಾಗ ಪಕ್ಷವನ್ನು ಮುನ್ನೆಡೆಸಿದ್ದೇನೆ ಎಂದರು.
ಅಪಪ್ರಚಾರಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ:
ಓರ್ವ ಜನಪ್ರತಿನಿಧಿಯಾಗಿ ಅಭಿವೃದ್ಧಿ ಕೆಲಸ ಮಾಡಿರುವ ನಾನು ಅಧಿಕಾರಕ್ಕಾಗಿ ಪಕ್ಷ ಬಿಟ್ಟಿದ್ದೇನೆ ಎಂಬ ಅಪಪ್ರಚಾರ ಭರಾಟೆಯಿಂದ ಸಾಗಿದೆ. ಅದರ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹು-ಧಾ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ್(Jagadish shettar) ಹೇಳಿದರು.
ಈ ಚುನಾವಣೆ ಸ್ವಾಭಿಮಾನ ಮತ್ತು ಪರಿವರ್ತನೆಗಾಗಿ. ನೀವೆಲ್ಲರೂ ನನ್ನನ್ನು ಆಶೀರ್ವದಿಸಿ ದಾಖಲೆ ಮತಗಳ ಮೂಲಕ ಗೆಲ್ಲಿಸಬೇಕು ಮತ್ತು ಆ ಮೂಲಕ ಹೊಸ ಸಂದೇಶ ರವಾನಿಸಬೇಕು. ಈಗಾಗಲೇ ಹಲವಾರು ಬಾರಿ ತಿಳಿಸಿದಂತೆ ನಾನು ಎಂದೂ ಅಧಿಕಾರಕ್ಕೆ ದುಂಬಾಲು ಬಿದ್ದಿಲ್ಲ. ಆರಂಭದಿಂದಲೂ ತತ್ವ, ಸಿದ್ಧಾಂತ ಆಧಾರಿತ ರಾಜಕಾರಣ ಮಾಡಿಕೊಂಡು ಬಂದವನು. ಈಗ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕೂಡ ನಿರ್ದಿಷ್ಟಉದ್ದೇಶಕ್ಕಾಗಿ, ಕುಲಗೆಟ್ಟು ಹೋಗುತ್ತಿರುವ ವ್ಯವಸ್ಥೆಯಲ್ಲಿ ಪರಿವರ್ತನೆ ತರುವ ಕೆಲಸ ಮತ್ತೊಮ್ಮೆ ಆಗಬೇಕೆಂಬ ಉದ್ದೇಶ ನನ್ನದಾಗಿದೆ. ಜನರು ನನಗೆ ಬೆಂಬಲಿಸುವಂತೆ ತಿಳಿಸಿದರು.
Karnataka election 2023: ಬಿಜೆಪಿ ಎಷ್ಟೇ ಹೆದರಿಸಿ, ಬೆದರಿಸಿದ್ರೂ 141 ಕ್ಷೇತ್ರ ಗೆದ್ದೇ ಗೆಲ್ತೀವಿ: ಡಿಕೆಶಿ
ಈಗಾಗಲೇ ಮೆಗಾ ಸಿಟಿ ಆಗುವತ್ತ ದಾಪುಗಾಲು ಹಾಕುತ್ತಿರುವ ಹು-ಧಾವನ್ನು ಒಂದು ಅತ್ಯಾಧುನಿಕ ನಗರವನ್ನಾಗಿ ಬೆಳೆಸಬೇಕೆಂದು ಸಂಕಲ್ಪ ಮಾಡಿದ್ದೇನೆ. ಈ ನಿಟ್ಟಿನಲ್ಲಿ ಹಲವಾರು ಯೋಚನೆ ಯೋಜನೆಗಳನ್ನು ಹಮ್ಮಿಕೊಂಡಿದ್ದೇನೆ. ಅವೆಲ್ಲ ಸಾಕಾರಗೊಳ್ಳುವ ತನಕ ವಿಶ್ರಾಂತಿಯ ವಿಚಾರವಿಲ್ಲ. ಈ ಕನಸು ನನಸಾಗಲು ಇನ್ನೂ ಅನೇಕ ಜನೋಪಯೋಗಿ ಯೋಜನೆಗಳು ಕಾರ್ಯಗತಗೊಳ್ಳಬೇಕಾಗಿದೆ. ಅದಕ್ಕೆ ಮತದಾರರ ಆಶೀರ್ವಾದ ಮತ್ತು ಬೆಂಬಲ ಅವಶ್ಯಕವಾಗಿದೆ ಎಂದರು.