ನಾನು ಚನ್ನಪಟ್ಟಣ ಅಭ್ಯರ್ಥಿ ಆಕಾಂಕ್ಷಿಯೇ ಅಲ್ಲ: ನಿಖಿಲ್‌ ಕುಮಾರಸ್ವಾಮಿ

By Kannadaprabha News  |  First Published Aug 2, 2024, 4:26 AM IST

ಎರಡು ಪಕ್ಷದ ಹೈಕಮಾಂಡ್ ನಾಯಕರು, ರಾಜ್ಯ ನಾಯಕರು ಚರ್ಚಿಸಿ ತಳಮಟ್ಟದ ಕಾರ್‍ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ
 


ಪಾಂಡವಪುರ(ಆ.02):  ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಜೆಡಿಎಸ್- ಬಿಜೆಪಿ ಪಕ್ಷದ ಕಾರ್‍ಯಕರ್ತರೊಂದಿಗೆ ಚರ್ಚಿಸಿ ಬಳಿಕ ತೀರ್ಮಾನಿಸಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಪಕ್ಷದ ಹೈಕಮಾಂಡ್ ನಾಯಕರು, ರಾಜ್ಯ ನಾಯಕರು ಚರ್ಚಿಸಿ ತಳಮಟ್ಟದ ಕಾರ್‍ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದರು.

Tap to resize

Latest Videos

ವಯನಾಡು ಭೂಕುಸಿತ ದುರಂತ: ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಖಿಲ್; ₹70,000 ಧನ ಸಹಾಯ

ಚನ್ನಪಟ್ಟಣದ ಜತನೆ ನಮ್ಮ ಕುಟುಂಬದ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಪಕ್ಷದ ನಾಯಕರು ನನಗೆ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿದ್ದಾರೆ. ಅದರಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ. ಹಾಗಾಗಿ ನಾನು ಅಭ್ಯರ್ಥಿ ಆಕಾಂಕ್ಷಿಯಲ್ಲ ಎಂದು ಸ್ಪಷ್ಟನೆ ನೀಡಿದರು.

click me!