
ಬೆಂಗಳೂರು(ಫೆ.12): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿಗಳನ್ನು ತಳ್ಳಿ ಹಾಕಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ‘ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ’ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಇದನ್ನು ಹಿಂದೆಯೂ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಜೆಡಿಎಸ್‌ನಿಂದ ಸ್ಪರ್ಧಿಸಲು ಮಂಡ್ಯದಲ್ಲಿ ಗಂಡಸರಿಲ್ವಾ ಎಂದ ಕದಲೂರು; ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿಯಾದ ಸುಮಲತಾ!
2019ರಲ್ಲಿ ನಾನು ಕ್ಷೇತ್ರದ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗ ಸ್ಪರ್ಧೆಗೆ ಮಂಡ್ಯ ಜನರ ಒತ್ತಾಯವಿದೆ. ಅವರ ಪ್ರೀತಿ, ವಿಶ್ವಾಸ ಹಾಗೂ ಒತ್ತಡದ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಪಕ್ಷ ಸಂಘಟನೆಗಾಗಿ ಓಡಾಡಿದ್ದೆ ಅಷ್ಟೇ. ಆದರೆ, ಸ್ಪರ್ಧೆ ಇಲ್ಲ, ರಾಜ್ಯಾದ್ಯಂತ ಓಡಾಡಿ, ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.