ಅಭಿವೃದ್ಧಿ ಕೆಲಸ, ಕೋವಿಡ್‌ನಲ್ಲಿ ಜೀವದ ಹಂಗು ತೊರೆದರೂ ಜನರು ಸೋಲಿಸಿದರು ಎಂದು ರೇಣುಕಾಚಾರ್ಯ ನೋವು ತೋಡಿಕೊಂಡಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರೋದಿಲ್ಲ: ರೇಣುಕಾಚಾರ್ಯ
ದಾವಣಗೆರೆ(ಮೇ.14): ಇನ್ನು ಮುಂದೆ ಯಾವುದೇ ಕಾರಣಕ್ಕೂ ಚುನಾವಣೆಗೆ ಬರೋದಿಲ್ಲ ಅಂತ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಎಂ.ಪಿ. ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.
ರೇಣುಕಾಚಾರ್ಯ ನಿವಾಸದ ಮುಂದೆ ಕಳೆದ ಸಾವಿರಾರು ಬೆಂಬಲಿಗರು ರಾತ್ರಿ ಜಮಾಯಿಸಿದ್ದರು. ಬೆಂಬಲಿಗರನ್ನು ನೋಡಿ ರೇಣುಕಾಚಾರ್ಯ ಕಣ್ಣೀರಿಟ್ಟಿದ್ದರು. ರೇಣುಕಾಚಾರ್ಯ ಅವರಿಗೆ ಅಭಿಮಾನಿಗಳು ಧೈರ್ಯವನ್ನು ತುಂಬಿದ್ದಾರೆ. ಹರಿಹರದ ಶಾಸಕ ಬಿ.ಪಿ. ಹರೀಶ್ ಕೂಡ ಎಂಪಿ ರೇಣುಕಾಚಾರ್ಯ ಅವರಿಗೆ ಸಮಾಧಾನ ಮಾತುಗಳನ್ನಾಡಿದ್ದಾರೆ.
ಬಿಜೆಪಿ ಸೃಷ್ಟಿಸಿದ ಸಮಸ್ಯೆ ಪರಿಹಾರಕ್ಕೆ ನಮಗೆ ಮತ: ಪ್ರಿಯಾಂಕ್ ಖರ್ಗೆ
ಅಭಿವೃದ್ಧಿ ಕೆಲಸ, ಕೋವಿಡ್‌ನಲ್ಲಿ ಜೀವದ ಹಂಗು ತೊರೆದರೂ ಜನರು ಸೋಲಿಸಿದರು ಎಂದು ರೇಣುಕಾಚಾರ್ಯ ನೋವು ತೋಡಿಕೊಂಡಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರೋದಿಲ್ಲ ರೇಣುಕಾಚಾರ್ಯ ತಿಳಿಸಿದ್ದಾರೆ.