
ಬೆಳಗಾವಿ(ಜ.22): ಕಾಂಗ್ರೆಸ್ ಸಮಾವೇಶ ಬಳಿಕ ಅಭಿಮಾನಿಗಳು 'ಮುಂದಿನ ಸಿಎಂ ಡಿ.ಕೆ. ಶಿವಕುಮಾರ್' ಎಂದು ಘೋಷಣೆ ಕೂಗಿದ್ದಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ನನಗೆ ಯಾವುದೇ ಅವಸರ ಇಲ್ಲ. ನಾನು ಕಾಯೋದಕ್ಕೆ ರೆಡಿ ಎಂದು ಹೇಳಿದರು. ಅಭಿಮಾನಿಗಳ ಇಚ್ಛೆ. ಅವರು ಕೂಗುತ್ತಾರೆ. ಆದರೆ, ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಮಂಗಳವಾರ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಕಾರ್ಯಕ್ರಮ ಮುಗಿದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಹಿಂಭಾಗದಲ್ಲಿದ್ದ ಕಾರಿನತ್ತ ತೆರಳಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರು ಜೊತೆಗೆ ಹೋಗಿ ಬೀಳ್ಕೊಟ್ಟು ಬಂದರು. ನಂತರ ಡಿಕೆಶಿ ಬೆಂಬಲಿಗರು ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಎಂದು ಕೂಗಿದ ಘಟನೆ ನಡೆಯಿತು. ಈ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಅವರ ಇಚ್ಛೆ ಅವರು ಕೂಗುತ್ತಾರೆ. ಆದರೆ, ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಪ್ರತಿಕ್ರಿಯಿಸಿದರು.
ಅಧಿಕಾರ ಹಂಚಿಕೆ: ಮುಖ್ಯಮಂತ್ರಿ, ಡಿಸಿಎಂ ಇಬ್ಬರೂ ನಮಗೆ ಮುಖ್ಯ, ಸಚಿವ ಭೈರತಿ ಸುರೇಶ್
ಇಂದು, ಮುಂದೆ, ಎಂದೆಂದೂ ನಮ್ಮು ಗಾಂಧಿ ಮಂತ್ರ: ಡಿಕೆಶಿ
ಬೆಳಗಾವಿ: ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರ ಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಹಲವು ಬಾರಿ ತ್ಯಾಗ ಮಾಡಿದ್ದೇನೆ, ನನಗೆ ಹುದ್ದೆ ಅವಶ್ಯಕತೆ ಇಲ್ಲ: ಡಿ.ಕೆ. ಶಿವಕುಮಾರ್
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಮಾತನಾ ಡಿದ ಡಿಕೆಶಿ, ನೂರು ವರ್ಷಗಳ ಹಿಂದೆ ಗಾಂಧೀಜಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡು ದೇಶದ ಸ್ವಾತಂತ್ರ್ಯ ಹೋ ರಾಟ ಮುನ್ನಡೆಸಿದ್ದರು. ಈಗ 100 ವರ್ಷಗಳ ನಂತರ ಈ ಐತಿಹಾಸಿಕ ಕಾರ್ಯಕ್ರಮವನ್ನು ನಡೆಸಿ ಮುಂದಿನ ಪೀಳಿಗೆಗೆ ಗಾಂಧೀಜಿ ತತ್ವ, ಆದರ್ಶ ಸಾರಲು ಸಮಾವೇಶ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಈ ಸಮಾವೇಶ ಇಲ್ಲಿಗೆ ನಿಲ್ಲಬಾರದು. ನಮ್ಮ ಸರ್ಕಾರ ಹಾಗೂ ಪಕ್ಷದವತಿಯಿಂದ ಇಡೀ ವರ್ಷ ಗಾಂಧಿ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ದೇಶದ ಪ್ರತಿ ತಾಲೂಕು ಮಟ್ಟದಲ್ಲಿ ಈ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮವನ್ನು ಮಾಡಬೇಕು ಎಂದರು.
ಅಂದು ಹೇಗೆ ಗಾಂಧೀಜಿ ಸಮಾವೇಶ ನಡೆಸಿ ಜನರನ್ನು ಒಂದುಗೂಡಿಸಿದರೋ ಅದೇ ರೀತಿಯಲ್ಲೇ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡಿ ಮನಸುಗಳನ್ನು ಒಂದುಗೂಡಿಸಿದ್ದಾರೆ. ಜ.30 ರಂದು ಕೋಮುವಾದಿಗಳು ಗಾಂಧೀಜಿ ಅವರನ್ನು ಕೊಂದರು. ಆದರೆ ಅವರ ಮೌಲ್ಯಗಳನ್ನು ಕಾಂಗ್ರೆಸ್ ಮುಂದುವರೆಸಿಕೊಂಡು ಬಂದಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.