: ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ ನನಗೇನೂ ಗೊತ್ತಿಲ್ಲ. ಅದು ಪಕ್ಷಕ್ಕೆ ಬಿಟ್ಟ ವಿಚಾರ. ನಾನಂತೂ ಅಧ್ಯಕ್ಷ ಸ್ಥಾನದ ಸ್ಪರ್ಧಿಯಲ್ಲ. ಬದಲಾವಣೆ ಮಾಡುವುದಾದರೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವ ಸಾಮರ್ಥ್ಯ ಇರುವವರಿಗೆ ಅಧ್ಯಕ್ಷ ಸ್ಥಾನ ನೀಡಿ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರು (ಮೇ.23) : ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ ನನಗೇನೂ ಗೊತ್ತಿಲ್ಲ. ಅದು ಪಕ್ಷಕ್ಕೆ ಬಿಟ್ಟ ವಿಚಾರ. ನಾನಂತೂ ಅಧ್ಯಕ್ಷ ಸ್ಥಾನದ ಸ್ಪರ್ಧಿಯಲ್ಲ. ಬದಲಾವಣೆ ಮಾಡುವುದಾದರೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವ ಸಾಮರ್ಥ್ಯ ಇರುವವರಿಗೆ ಅಧ್ಯಕ್ಷ ಸ್ಥಾನ ನೀಡಿ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಮಾತು ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತೆ. ಅಧ್ಯಕ್ಷ ಸ್ಥಾನದ ಬದಲಾವಣೆ ಆಗಬೇಕೆಂದರೆ ಮೊದಲು ಆ ಸ್ಥಾನ ಖಾಲಿ ಆಗಬೇಕಲ್ವಾ? ಬದಲಾವಣೆ ಬದಲು ಅಧಿಕಾರ ವಿಸ್ತರಣೆಯೂ ಆಗಬಹುದಲ್ವಾ ಎಂದರು.
'ಎಚ್ಡಿಕೆ ಸಿಎಂ ಆಗಿದ್ದಾಗ ಫೋನ್ ಕದ್ದಾಲಿಕೆ'; ರಾಜ್ಯ ಸರ್ಕಾರ ಫೋನ್ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು!
ಕುಮಾಸ್ವಾಮಿಗೆ ತಿರುಗೇಟು: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಫೋನ್ ಕದ್ದಾಳಿಕೆ ಆರೋಪ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ, ಕೇಂದ್ರದಲ್ಲಿ ಅವರ ಮೈತ್ರಿ ಪಕ್ಷ ಬಿಜೆಪಿಯವರದ್ದೇ ಸರ್ಕಾರ ಇದೆಯಲ್ಲಾ. ತನಿಖೆ ಮಾಡಬಹುದಲ್ಲವಾ? ಇದರಲ್ಲಿ ರಾಷ್ಟ್ರೀಯ ಭದ್ರತಾ ವಿಚಾರ ಬರುತ್ತೆ. ಕದ್ದಾಲಿಕೆ ಮಾಡಿದ್ರೆ ತನಿಖೆ ನಡೆಸಲಿ, ಬೇಡ ಅಂದವರು ಯಾರು ಎಂದರು.