ಕೇಂದ್ರ ಮಂತ್ರಿಗಿರಿ ಕೈ ತಪ್ಪಿದ್ದಕ್ಕೆ ಬೇಸರ ಇಲ್ಲ: ಹಾವೇರಿ ಸಂಸದ ಬೊಮ್ಮಾಯಿ

Published : Jun 10, 2024, 07:19 AM IST
ಕೇಂದ್ರ ಮಂತ್ರಿಗಿರಿ ಕೈ ತಪ್ಪಿದ್ದಕ್ಕೆ ಬೇಸರ ಇಲ್ಲ: ಹಾವೇರಿ ಸಂಸದ ಬೊಮ್ಮಾಯಿ

ಸಾರಾಂಶ

ನನಗೆ ಸಚಿವ ಸ್ಥಾನ ಸಿಗದ ಬಗ್ಗೆ ಬೇಸರ ಇಲ್ಲ. ಮೋದಿ ಅವರು ಪ್ರಧಾನಿ ಆಗುವುದೇ ನನಗೆ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ನವದೆಹಲಿ (ಜೂ.10): ನನಗೆ ಸಚಿವ ಸ್ಥಾನ ಸಿಗದ ಬಗ್ಗೆ ಬೇಸರ ಇಲ್ಲ. ಮೋದಿ ಅವರು ಪ್ರಧಾನಿ ಆಗುವುದೇ ನನಗೆ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಎಲ್ಲ ಕೋನಗಳಲ್ಲೂ ಯೋಚನೆ ಮಾಡಿ ಅವರು ಸಚಿವ ಸ್ಥಾನದ ವಿಚಾರವಾಗಿ ತೀರ್ಮಾನ ಮಾಡಿರುತ್ತಾರೆ. ನನಗೆ ನರೇಂದ್ರ ಮೋದಿ ಪ್ರಧಾನಿ ಆಗುವುದೇ ಮುಖ್ಯ. ಈಗ ಕೇಂದ್ರ ಸಚಿವರಾಗುವ ಅವಕಾಶ ಪಡೆದವರು ಅನುಭವಿಗಳು, ಅಖಂಡ ರಾಜ್ಯದ ಪರಿಕಲ್ಪನೆಯಲ್ಲಿ ಕೆಲಸ ಮಾಡುವ ವಿಶ್ವಾಸ ಇದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ತಿಳಿಸಿದರು.

ತಂದೆ ಹಾದಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ: ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ 43,513 ಮತಗಳ ಅಂತರದಿಂದ ಕಾಂಗ್ರೆಸ್‌ ವಿರುದ್ಧ ಜಯಭೇರಿ ಬಾರಿಸುವ ಮೂಲಕ ರಾಷ್ಟ್ರರಾಜಕಾರಣಕ್ಕೆ ಇದೇ ಮೊದಲ ಬಾರಿ ಪ್ರವೇಶಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ತಂದೆ ದಿವಂಗತ ಎಸ್‌.ಆರ್‌.ಬೊಮ್ಮಾಯಿ ಅವರು ಕೂಡ ಮುಖ್ಯಮಂತ್ರಿಯಾದ ಬಳಿಕ ರಾಷ್ಟ್ರ ರಾಜಕಾರಣಕ್ಕೆ ಹೋಗಿದ್ದರು. ಕೇಂದ್ರ ಸಚಿವರೂ ಆಗಿದ್ದರು. ಇದೀಗ ಪುತ್ರ ಬಸವರಾಜ ಕೂಡ ತಂದೆಯ ಹಾದಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ಅಡಿ ಇಟ್ಟಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ 43,513 ಮತಗಳ ಅಂತರದಿಂದ ಕಾಂಗ್ರೆಸ್‌ ವಿರುದ್ಧ ಜಯಭೇರಿ ಬಾರಿಸುವ ಮೂಲಕ ರಾಷ್ಟ್ರರಾಜಕಾರಣಕ್ಕೆ ಇದೇ ಮೊದಲ ಬಾರಿ ಪ್ರವೇಶಿದ್ದಾರೆ. ಸತತ ನಾಲ್ಕನೇ ಬಾರಿಗೆ ಕ್ಷೇತ್ರದಲ್ಲಿ ಕಮಲ ಅರಳಿದ್ದು, ತೀವ್ರ ಪೈಪೋಟಿ ನಡುವೆಯೂ ಮತ್ತೊಮ್ಮೆ ಗೆಲುವಿನ ಪತಾಕೆ ಹಾರಿಸಿದ್ದಾರೆ. ತೀವ್ರ ಹಣಾಹಣಿಯಿಂದ ಕೂಡಿದ್ದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 7,02,189 ಮತ ಪಡೆದಿದ್ದರೆ, ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಆನಂದಸ್ವಾಮಿ ಗಡ್ಡದೇವರಮಠ 6,60,191 ಮತ ಪಡೆದಿದ್ದಾರೆ.

ನನ್ನ ಬಳಿ ಮೊಬೈಲೇ ಇಲ್ಲ: ಪ್ರಜ್ವಲ್ ರೇವಣ್ಣ ಹೊಸ ವರಸೆ!

ಸತತ ಐದನೇ ಗೆಲುವು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಎದುರಿಸಿ ಅದರಲ್ಲಿ ಯಶಸ್ವಿಯಾಗಿದ್ದಾರೆ. 4 ಬಾರಿ ಶಿಗ್ಗಾಂವಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಬೊಮ್ಮಾಯಿ ಲೋಕಸಭೆ ಚುನಾವಣೆಯಲ್ಲೂ ಗೆಲ್ಲುವ ಮೂಲಕ ಸತತ 5ನೇ ಗೆಲುವು ದಾಖಲಿಸಿದರು. ಬಸವರಾಜ ಬೊಮ್ಮಾಯಿ ಅವರ ತಂದೆ ದಿವಂಗತ ಎಸ್‌.ಆರ್‌.ಬೊಮ್ಮಾಯಿ ಅವರು ಕೂಡ ಮುಖ್ಯಮಂತ್ರಿಯಾದ ಬಳಿಕ ರಾಷ್ಟ್ರ ರಾಜಕಾರಣಕ್ಕೆ ಹೋಗಿದ್ದರು. ಕೇಂದ್ರ ಸಚಿವರೂ ಆಗಿದ್ದರು. ಇದೀಗ ಪುತ್ರ ಬಸವರಾಜ ಬೊಮ್ಮಾಯಿ ಕೂಡ ತಂದೆಯ ಹಾದಿಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ಅಡಿ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ಹಾಗೂ ಸಚಿವ ಎಚ್‌.ಕೆ.ಪಾಟೀಲ ಪ್ರತಿನಿಧಿಸುತ್ತಿರುವ ಗದುಗಿನಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!