ನಾನು ಬಿಜೆಪಿಯಿಂದ ದೂರ ಉಳಿಯುತ್ತಿಲ್ಲ: ಎಸ್.ಟಿ.ಸೋಮಶೇಖರ್

By Kannadaprabha NewsFirst Published Nov 16, 2023, 3:00 AM IST
Highlights

ಬಿಜೆಪಿ ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಅನುಭವ ಹೊಂದಿರುವ ವಿಜಯೇಂದ್ರ ಅವರಿಗೆ ಪಕ್ಷದ ಸಾರಥ್ಯ ವಹಿಸಿರುವುದು ನೂರಕ್ಕೆ ನೂರರಷ್ಟು ಸರಿಯಾಗಿದೆ. ವಿಜಯೇಂದ್ರ ಅವರಿಗೆ ಪಟ್ಟ ಕಟ್ಟಿರುವುದು ಕುಟುಂಬ ರಾಜಕೀಯ ಅಲ್ಲ. ಯಡಿಯೂರಪ್ಪ ಅವರು ಚುನಾವಣೆಗೆ ನಿಲ್ಲುವುದಿಲ್ಲ ಎಂದ ಮೇಲೆ ಅವರ ಮಗನಿಗೆ ಪಕ್ಷದ ಜವಾಬ್ದಾರಿ ನೀಡಿದ್ದಾರೆ. ಅವರಿಗೆ ಅನುಭವ ಇದ್ದು, ಎಲ್ಲ ನಾಯಕರ ಪರಿಚಯವೂ ಇದೆ. ಹೀಗಾಗಿ ಮುಂಬರುವ ಚುನಾವಣೆಗೆ ಬಿಜೆಪಿಗೆ ಒಳ್ಳೆಯ ಬೆಳವಣಿಗೆ ಎಂದ ಶಾಸಕ ಎಸ್.ಟಿ.ಸೋಮಶೇಖರ್ 

ರಾಮನಗರ(ನ.16): ನಾನು ಬಿಜೆಪಿಯಿಂದ ದೂರ ಉಳಿಯುತ್ತಿಲ್ಲ. ಕುಂಬಳಗೋಡು ಪೊಲೀಸ್ ಠಾಣೆ ನೂತನ ಕಟ್ಟಡದ ಉದ್ಘಾಟನೆ ಮೊದಲೇ ನಿಗದಿಯಾಗಿತ್ತು. ಗೃಹ ಸಚಿವರು ನನ್ನ ಕ್ಷೇತ್ರಕ್ಕೆ ಬಂದಿರುವ ಕಾರಣ ವಿಜಯೇಂದ್ರರವರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಅನುಭವ ಹೊಂದಿರುವ ವಿಜಯೇಂದ್ರ ಅವರಿಗೆ ಪಕ್ಷದ ಸಾರಥ್ಯ ವಹಿಸಿರುವುದು ನೂರಕ್ಕೆ ನೂರರಷ್ಟು ಸರಿಯಾಗಿದೆ. ವಿಜಯೇಂದ್ರ ಅವರಿಗೆ ಪಟ್ಟ ಕಟ್ಟಿರುವುದು ಕುಟುಂಬ ರಾಜಕೀಯ ಅಲ್ಲ. ಯಡಿಯೂರಪ್ಪ ಅವರು ಚುನಾವಣೆಗೆ ನಿಲ್ಲುವುದಿಲ್ಲ ಎಂದ ಮೇಲೆ ಅವರ ಮಗನಿಗೆ ಪಕ್ಷದ ಜವಾಬ್ದಾರಿ ನೀಡಿದ್ದಾರೆ. ಅವರಿಗೆ ಅನುಭವ ಇದ್ದು, ಎಲ್ಲ ನಾಯಕರ ಪರಿಚಯವೂ ಇದೆ. ಹೀಗಾಗಿ ಮುಂಬರುವ ಚುನಾವಣೆಗೆ ಬಿಜೆಪಿಗೆ ಒಳ್ಳೆಯ ಬೆಳವಣಿಗೆ ಎಂದರು.

ಮೊದಲು ಜಾಮೂನು..ಆಮೇಲೆ ವಿಷ, ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು?: ಎಸ್‌ ಟಿ ಸೋಮಶೇಖರ್

ನನ್ನ ಕ್ಷೇತ್ರದಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ನನ್ನನ್ನು ಯಾರು ಬೇಕಿದ್ದರೂ ಕಡೆಗಣಿಸಲಿ ಬಿಡಲಿ. ಕ್ಷೇತ್ರದ ಜನ ನನ್ನನ್ನು ಕಡೆಗಣಿಸಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ 40 ಮಂದಿ ಮಹಿಳೆಯರ ಮೂಲಕ ಗ್ಯಾರಂಟಿ ತಲುಪುತ್ತಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ. ಇದು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸರ್ಕಾರಿ ಯೋಜನೆಗಳು ಜನರಿಗೆ ತಲುಪಬೇಕು ಎಂಬುದು ನನ್ನ ಉದ್ದೇಶವಾಗಿದೆ. ಈ ಹಿಂದೆ ಮೈಸೂರು ಉಸ್ತುವಾರಿ ಸಚಿವನಾಗಿದ್ದ ವೇಳೆ ಕೇವಲ ಮೂರು ಕ್ಷೇತ್ರದಲ್ಲಷ್ಟೆ ಬಿಜೆಪಿ ಇತ್ತು. ಹೀಗಿದ್ದರೂ, ಉಳಿದ ಕ್ಷೇತ್ರಗಳಲ್ಲಿಯು ಕೆಲಸ ಮಾಡುತ್ತಿದ್ದೆ. ಅದೇ ರೀತಿ ಈಗಲೂ ನಡೆಯುತ್ತಿದೆ. ಬಿಜೆಪಿಯಲ್ಲಿ ನಾನು ಗೆದ್ದಿದ್ದೇನೆ. ಹಾಗಾಗಿ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಮಾಡಬಾರದಾ ಎಂದು ಪ್ರಶ್ನಿಸಿದರು.

ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಸೇರಿದ್ದ ವೇಳೆ ಅವರಿಗೆ ನೀಡಿದ್ದ ಅಶ್ವಾಸನೆಗಳನ್ನು ಬಿಜೆಪಿ ಈಡೇರಿಸಿಲ್ಲ. ಹಿಂದೆ ಸಚಿವರಾಗಿದ್ದ ಶಂಕರ್, ಬಿ.ಸಿ.ನಾಗೇಶ್ ಸೇರಿದಂತೆ ಅನೇಕರಿಗೆ ಯಾವ ಸೌಲಭ್ಯ ನೀಡಿಲ್ಲ. ಮೊದಲು ಜಾಮೂನು ನೀಡಿ ಬಳಿಕ ವಿಷ ನೀಡುತ್ತಾರೆ ಎಂಬ ಹೇಳಿಕೆ ನನ್ನೊಂದಿಗೆ ಬಿಜೆಪಿ ಸೇರಿದ್ದ 17 ಮಂದಿಗೆ ಸೇರಿಸಿ ಹೇಳಿದ್ದು. ಈ ಹೇಳಿಕೆ ವೈಯಕ್ತಿಕವಾಗಿರಲಿಲ್ಲ. ನನಗೆ ಮಂತ್ರಿ ಸ್ಥಾನ ನೀಡಿದ್ದರು. ಏಳೆಂಟು ಜನರಿಗೆ ಸ್ಥಾನ ಸಿಕ್ಕಿರಲಿಲ್ಲ. ರಮೇಶ್ ಜಾರಕಿಯೊಳೆ ಬಿಟ್ಟು ಉಳಿದ ಎಲ್ಲ ಪಕ್ಷಾಂತರಿಗಳಿಗೂ ಮೋಸ ಆಗಿದೆ ಎಂದು ಸೋಮಶೇಖರ್ ಅಸಮಾಧಾನ ಹೊರ ಹಾಕಿದರು.

ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಮ್ಮ ಪುಸ್ತಕದಲ್ಲಿ ಸಮ್ಮಿಶ್ರ ಸರ್ಕಾರ ಉರುಳುವಾಗ ಕೆಲ ಶಾಸಕರು ಹಣ ಪಡೆದ ಬಗ್ಗೆ ಉಲ್ಲೇಖ ಮಾಡುವುದಾಗಿ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಎಸ.ಟಿ.ಸೋಮಶೇಖರ್, ಬುಕ್ ಏಕೆ ? ಧರ್ಮಸ್ಥಳ, ಚಾಮುಂಡಿ ಬೆಟ್ಟದಲ್ಲಿ ಕುಳಿತುಕೊಂಡು, ಆ ಬುಕ್ ಬರೆದು, ಓದಲಿ. ಅವರು ಚಾಮುಂಡಿ ಬೆಟ್ಟಕ್ಕೆ ಹೆಚ್ಚಾಗಿ ಹೋಗುತ್ತಾರಲ್ಲ. ಅಲ್ಲೆ ಕುಳಿತು ಬುಕ್ ಓದಲಿ. ಅವರಿಗೂ ಬಿಜೆಪಿಯಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲ ಅಲ್ಲವೇ ಎಂದು ವ್ಯಂಗ್ಯವಾಡಿದರು.

click me!