
ಮಂಡ್ಯ (ಜೂ.07): ನಾನು ಈಗ 24*7 ರಾಜಕಾರಣಿ, ಸಿನಿಮಾ ಮಾಡೋದನ್ನು ಬಂದ್ ಮಾಡಿದ್ದೇನೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. 2019ರ ನನ್ನ ಸೋಲು ಸೋಲಾಗಿರಲಿಲ್ಲ. ನಮ್ಮಲ್ಲಾದ ತಪ್ಪುಗಳಿಂದ ಹಿನ್ನಡೆ ಆಯ್ತು. ಮಂಡ್ಯ ಜನ ನನಗೆ ಹೃದಯದಲ್ಲಿ ಸ್ಥಾನ ನೀಡಿದ್ದಾರೆ. ಕುಮಾರಣ್ಣ ಸಿಎಂ ಆಗಿದ್ದಾಗ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ. ಕುಮಾರಣ್ಣ ಸ್ಪರ್ಧೆಗೆ ಕಾರ್ಯಕರ್ತರ ಆಪೇಕ್ಷೆ ಇತ್ತು. ಮಹಿಳೆಯರು, ರೈತರು, ಹಿರಿಯರು ಎಲ್ಲಾ ವರ್ಗದವರು ಕುಮಾರಣ್ಣ ಅವ್ರನ್ನ ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ಮುಂದಿನ 5 ವರ್ಷ ಪ್ರಮಾಣಿಕ ಕೆಲಸ ಮಾಡ್ತಾರೆ ಎಂದರು.
ಕುಮಾರಣ್ಣರ ಮೇಲೆ ಇಟ್ಟಿರುವ ಗೌರವ ಪ್ರೀತಿ, ವಿಶ್ವಾಸ ಉಳಿಸಿಕೊಳ್ತೀವಿ. ಕಾಂಗ್ರೆಸ್ಸಿಗರ ಟೀಕೆಗಳಿಗೆ ಮಂಡ್ಯ ಜನ ಉತ್ತರ ಕೊಟ್ಟಿದ್ದಾರೆ. ಅಧಿಕಾರದಲ್ಲಿದ್ದಾಗ ಏನು ಬೇಕಾದ್ರು ಮಾತನಾಡಿದ್ರೆ ಜನ ತಕ್ಕ ಪಾಠ ಕಲಿಸುತ್ತಾರೆ. ರಾಜ್ಯವನ್ನ ಕಟ್ಟುವ ಕಲ್ಪನೆ ಕುಮಾರಣ್ಣರದ್ದು. ದೂರದೃಷ್ಟಿ ಹೊಂದಿರುವ ಕುಮಾರಣ್ಣರ ನಾಯಕತ್ವವನ್ನ ಬಿಜೆಪಿ ಬಳಸಿಕೊಳ್ಳಲಿದೆ. ಕುಮಾರಣ್ಣ ಸಚಿವ ಸ್ಥಾನಕ್ಕಾಗಿ ಡಿಮ್ಯಾಂಡ್ ಮಾಡಲ್ಲ. ಕುಮಾರಸ್ವಾಮಿ ಹಿರಿತನ ಆಧಾರದ ಮೇಲೆ ಸ್ಥಾನ ಸಿಗಲಿದೆ. ರಾಜ್ಯದಲ್ಲಿ ಎರಡು ಉಪ ಚುನಾವಣೆ ನಡೆಯಬೇಕಿದೆ. ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಬೇಕು. ಮೈತ್ರಿ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡ್ತಾರೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೋರಿ ಗೌರ್ನರ್‌ಗೆ ಬಿಜೆಪಿ ದೂರು
ನನ್ನ ಆಸಕ್ತಿ ಪಕ್ಷ ಸಂಘಟನೆಯಲ್ಲಿದೆ. ಚನ್ನಪಟ್ಟಣ ಉಪಚುನಾವಣೆ ವಿಚಾರ ಮಾತನಾಡುವುದು ಈಗ ಅಪ್ರಸ್ತುತ. ಸುಮಲತಾರವರು ಬಿಜೆಪಿ ಸದಸ್ಯರು. ಕುಮಾರಸ್ವಾಮಿ ಗೆಲುವನ್ನ ಅವರೂ ಬಯಸಿದ್ದರು. ಪ್ರಚಾರ ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದಿದ್ದರೂ ಅವರ ಬೆಂಬಲಿಗರಿಗೆ ಹೇಳಿದ್ದಾರೆ. ನಾನೇ ಸ್ವತಃ ಕಾಲ್ ಮಾಡಿ ಮಾತನಾಡಿ ಧನ್ಯವಾದ ಹೇಳ್ತೀನಿ. ಈಗ ನಾನು 24/7 ರಾಜಕಾರಣಿ ಎಂದರಲ್ಲದೇ ನಾನು ಇನ್ನೂ ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡ್ತೀನಿ. ನಾನು ಇನ್ನೂ ಮುಂದೆ ಸಿನಿಮಾ ಮಾಡೋದು ಬಂದ್ ಮಾಡಿದ್ದೇನೆ. ನಾನು ಇನ್ನೂ ಫುಲ್ ಟೈಮ್ ರಾಜಕಾರಣಿ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.