ಇನ್ನೂ ಮೂರೂವರೆ ವರ್ಷ ನಾನೇ ಸಿಎಂ: ಸಿಬಿಐ, ಇ.ಡಿ, ಐಟಿ ಬಳಸಿ ನನ್ನ ವಿರುದ್ಧ ಷಡ್ಯಂತ್ರ ಎಂದ ಸಿದ್ದರಾಮಯ್ಯ

By Kannadaprabha News  |  First Published Nov 9, 2024, 4:28 AM IST

ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಐದು ವರ್ಷ ಮುಖ್ಯಮಂತ್ರಿಯಾಗಿ ನಾನೇ ಅಧಿಕಾರ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. 


ಸಂಡೂರು (ನ.09): ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಐದು ವರ್ಷ ಮುಖ್ಯಮಂತ್ರಿಯಾಗಿ ನಾನೇ ಅಧಿಕಾರ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಮುಹೂರ್ತ ಫಿಕ್ಸ್‌ ಆಗಿದೆ. ಈ ಮಾತನ್ನು ನಾನು ಹುಡುಗಾಟಕ್ಕೆ ಹೇಳುತ್ತಿಲ್ಲ. 

ಬೇಕಿದ್ದರೆ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಲಿ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದ್ದರು.  ಅದರ ಬೆನ್ನಲ್ಲೇ ಸಂಡೂರು ಉಪ ಚುನಾವಣೆ ಪ್ರಚಾರದ ವೇಳೆ ತಿರುಗೇಟು ನೀಡಿದರು.ಇನ್ನೂ ಮೂರೂವರೆ ವರ್ಷ ಕಾಂಗ್ರೆಸ್‌ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿರುತ್ತದೆ. ಮತದಾರರು ಯೋಚನೆ ಮಾಡಿ ಮತ ಹಾಕಬೇಕು. ನಾವೇನು ಮಾಡಿದ್ದೇವೆ, ಬಿಜೆಪಿಯವರು ಏನು ಮಾಡಿದ್ದಾರೆ ಎಂಬುದು ಈಗಾಗಲೇ ನಿಮ್ಮ ಅನುಭವಕ್ಕೆ ಬಂದಿದೆ ಎಂದರು.

Latest Videos

ಬಳ್ಳಾರಿಗೆ ಕಾಲಿಟ್ಟು ನೋಡಿ ಎಂದು ಜನಾರ್ದನ ರೆಡ್ಡಿ ಹಿಂದೆ ನನಗೆ ಸವಾಲು ಹಾಕಿದ್ದರು. ನಾನು ಆ ಸವಾಲು ಸ್ವೀಕರಿಸಿ ಪಾದಯಾತ್ರೆ ಮೂಲಕ ಬಳ್ಳಾರಿಗೆ ಬಂದು ಸಡ್ಡು ಹೊಡೆದೆ. ಅಲ್ಲಿಂದಲೇ ರೆಡ್ಡಿ ಅವನತಿ ಶುರುವಾಯಿತು. ಸಿದ್ದರಾಮಯ್ಯ ಇರೋವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿಯವರಿಗೆ ಗೊತ್ತಾಗಿದೆ. ಹೀಗಾಗಿ ನನ್ನನ್ನು ಮುಗಿಸಲು ಸಿಬಿಐ, ಇ.ಡಿ, ಐಟಿಯನ್ನು ಬಳಸಿಕೊಂಡು ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸಿದ್ದುಗೆ ತಾಕತ್ತಿದ್ದರೆ ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ಯಡಿಯೂರಪ್ಪ ಸವಾಲು

ಸಿದ್ದರಾಮಯ್ಯ ಇರೋವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿಯವರಿಗೆ ಗೊತ್ತಾಗಿದೆ. ಹೀಗಾಗಿ ನನ್ನನ್ನು ಮುಗಿಸಲು ಸಿಬಿಐ, ಇ.ಡಿ, ಐಟಿಯನ್ನು ಬಳಸಿಕೊಂಡು ಷಡ್ಯಂತ್ರ ಮಾಡಲಾಗುತ್ತಿದೆ
.- ಸಿದ್ದರಾಮಯ್ಯ ಮುಖ್ಯಮಂತ್ರಿ

click me!