ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು ಇಲ್ಲ: ಸಚಿವ ರಾಜಣ್ಣ

By Girish GoudarFirst Published Jun 8, 2024, 10:54 PM IST
Highlights

ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು ಇಲ್ಲ. ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಎರಡು ಸಾವಿರ ಓಟು ಇರಲಿಲ್ಲ, ನಾನು ಅವರಿಗೆ ಎಂಭತ್ತು ಸಾವಿರ ಓಟು ಕೊಡಿಸಿದ್ದೆ. ಅದರಿಂದ ಅವರು ಸೋತರು, ದೇವೇಗೌಡರು ಸೋಲಲು ನಾನೇ ಕಾರಣ, ನಾನೇ ಸೋಲಿಸಿದ್ದು ಅದರಲ್ಲಿ ಅನುಮಾನ ಏನಿಲ್ಲ: ಸಚಿವ ಕೆ.ಎನ್.ರಾಜಣ್ಣ 
 

ಹಾಸನ(ಜೂ.08): ನನಗೆ ಹಾಸನದ ಚುನಾವಣೆ ಜವಾಬ್ದಾರಿ ಕೊಟ್ಟಿದ್ದರು. ಈ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ಕೊಟ್ಟೆ. ತುಮಕೂರು ಚುನಾವಣೆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ನನ್ನದೊಂದು ಮಧುಗಿರಿ ಕ್ಷೇತ್ರಕ್ಕೆ ಸೀಮಿತವಾಗಿದ್ದೆ. ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸದಿದ್ದರೆ ಹಾಸನಕ್ಕೆ ಬರಲ್ಲ ಅಂತ ಹೇಳಿದ್ದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಎಲ್ಲಾ ಪಕ್ಷ, ಜಾತಿಯವರು ಮತ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಹೆಚ್ಚಿನ ಬಹುಮತ ಬರಲು ಸಾಧ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು, ತುಮಕೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಶನಿವಾರ) ನಗರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎನ್.ರಾಜಣ್ಣ ಅವರು, ನಾನು ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಪರಮೇಶ್ವರ್, ನಾನು ತುಮಕೂರಿನ ಮಂತ್ರಿಗಳು. ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ ಎಂದು ಅವರಿಗೆ ಅಭಿನಂದನೆ ಸಲ್ಲಿಸಬೇಕು. ನಾನು ಗೆಲ್ಲಿಸಿದ್ದೀನಿ ಅಂತ ಹೇಳಿದ್ರೆ, ಅದು ದುರಂಹಕಾರದ ಮಾತಾಗುತ್ತದೆ ಎಂದು ತಿಳಿಸಿದ್ದಾರೆ.

Latest Videos

ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಿದ್ರೆ ಸಚಿವ ಸ್ಥಾನ ಬಿಡಲು ಸಿದ್ಧ: ಕೆಎನ್‌ ರಾಜಣ್ಣ

ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು ಇಲ್ಲ. ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಎರಡು ಸಾವಿರ ಓಟು ಇರಲಿಲ್ಲ, ನಾನು ಅವರಿಗೆ ಎಂಭತ್ತು ಸಾವಿರ ಓಟು ಕೊಡಿಸಿದ್ದೆ. ಅದರಿಂದ ಅವರು ಸೋತರು, ದೇವೇಗೌಡರು ಸೋಲಲು ನಾನೇ ಕಾರಣ, ನಾನೇ ಸೋಲಿಸಿದ್ದು ಅದರಲ್ಲಿ ಅನುಮಾನ ಏನಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ತುಮಕೂರಿನಲ್ಲಿ ನಡೆದ ಅನೇಕ ಸಭೆಗಳಲ್ಲಿ ನಾನು ಹೇಳಿದ್ದೀನಿ. ದೇವೇಗೌಡರು ತುಮಕೂರಿಗೆ ಬಂದು ನನ್ನನ್ನು ಸೋಲಿಸಿ ಎಂದು ಎದೆ ಬಡಿದುಕೊಂಡು ಕಣ್ಣೀರಿಟ್ಟರು. ನಾನು ಮುಚ್ಚು ಮರೆ ಮಾಡುವ ಅವಶ್ಯಕತೆ ನನಗೇನಿಲ್ಲ ಎಂದು ಹೇಳಿದ್ದಾರೆ. 

click me!