ಪಕ್ಷದಿಂದ ನನ್ನ ಉಚ್ಛಾಟಿಸಲಿ ಎಂದು ಕಾಯುತ್ತಿದ್ದೇನೆ: ಈಶ್ವರಪ್ಪ

By Kannadaprabha News  |  First Published Apr 12, 2024, 7:00 AM IST

ನಾಮಪತ್ರದ ಸಲ್ಲಿಸುವ ಠೇವಣಿ ಹಣವಾಗಿ ನಗರದ ಮಹಿಳೆಯರು ಮತ್ತು ಮುತ್ತೈದೆಯರು ಸೇರಿ 24 ಸಾವಿರ ರು. ಮತ್ತು ತೀರ್ಥಹಳ್ಳಿಯ ಭೀಮನಕಟ್ಟೆ ಮಠದ ಶ್ರೀಗಳು 1 ಸಾವಿರ ರು. ನೀಡಿದ್ದು, ನನ್ನ ಗೆಲುವಿಗೆ ಈ ನೆಲದ ಶ್ರೇಷ್ಠರಾದ ಸಾಧು ಸಂತರು ಮತ್ತು ತಾಯಂದಿರುವ ಹರಸಿ ಒಟ್ಟು 25 ಸಾವಿರ ರು. ನೀಡಿದ್ದಾರೆ. ಇದು ನನ್ನ ಗೆಲುವಿನ ಸಂಕೇತ ಎಂದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ 


ಶಿವಮೊಗ್ಗ(ಏ.12):  ಬಿಜೆಪಿ ವರಿಷ್ಠರ ಜೊತೆ ನನ್ನ ಮಾತುಕತೆ ಮುಗಿದಿದೆ. ಇನ್ನು ಯಾರ ಜೊತೆಗೂ ಮಾತುಕತೆಗೆ ಕೂರುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಬಿಜೆಪಿಯವರು ನನ್ನನ್ನು ಇನ್ನೂ ಪಕ್ಷದಿಂದ ಯಾಕೆ ಉಚ್ಚಾಟಿಸಿಲ್ಲ ಎಂಬುದು ನನಗೆ ಗೊತ್ತಾಗುತ್ತಿಲ್ಲ. ನನ್ನನ್ನು ಉಚ್ಛಾಟಿಸಲಿ ಎಂದು ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, ಪಕ್ಷದಿಂದ ನನ್ನನ್ನು ಉಚ್ಚಾಟಿಸಿದರೆ ಇನ್ನಷ್ಟು ಕಟುವಾಗಿ ಮಾತನಾಡಲು ಸಾಧ್ಯ. ಶುಕ್ರವಾರ ನಾಮಪತ್ರ ಸಲ್ಲಿಸುತ್ತೇನೆ. ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್‌ ಮೆರವಣಿಗೆ ನಡೆಸುತ್ತೇನೆ ಎಂದರು.

Tap to resize

Latest Videos

undefined

ಈಶ್ವರಪ್ಪರ ಬಂಡಾಯ ವಿಚಾರ ತಲೆಕೆಡಿಸಿಕೊಂಡಿಲ್ಲ: ಸಂಸದ ಬಿ.ವೈ.ರಾಘವೇಂದ್ರ

ಈ ಮಧ್ಯೆ, ನಾಮಪತ್ರದ ಸಲ್ಲಿಸುವ ಠೇವಣಿ ಹಣವಾಗಿ ನಗರದ ಮಹಿಳೆಯರು ಮತ್ತು ಮುತ್ತೈದೆಯರು ಸೇರಿ 24 ಸಾವಿರ ರು. ಮತ್ತು ತೀರ್ಥಹಳ್ಳಿಯ ಭೀಮನಕಟ್ಟೆ ಮಠದ ಶ್ರೀಗಳು 1 ಸಾವಿರ ರು. ನೀಡಿದ್ದು, ನನ್ನ ಗೆಲುವಿಗೆ ಈ ನೆಲದ ಶ್ರೇಷ್ಠರಾದ ಸಾಧು ಸಂತರು ಮತ್ತು ತಾಯಂದಿರುವ ಹರಸಿ ಒಟ್ಟು 25 ಸಾವಿರ ರು. ನೀಡಿದ್ದಾರೆ. ಇದು ನನ್ನ ಗೆಲುವಿನ ಸಂಕೇತ ಎಂದರು.

ಪ್ರಚಾರಕ್ಕೆಂದು ಬೇರೆ ಯಾವ ದೊಡ್ಡ ನಾಯಕರೂ ನನಗಿಲ್ಲ. ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅಂತಹವರು ಹಲವರಿದ್ದಾರೆ. ನನಗೆ ಸಾಮಾನ್ಯ ಕಾರ್ಯಕರ್ತರೇ ಸ್ಟಾರ್ ಪ್ರಚಾರಕರು ಎಂದು ಈಶ್ವರಪ್ಪ ಹೇಳಿದರು.

ಹಿಂದೂ ಭಕ್ತನಿಗೆ ರಾಷ್ಟ್ರಭಕ್ತ ಮುಸಲ್ಮಾನರ ಮತ ಕೂಡ ಬೀಳುತ್ತದೆ. ಪಕ್ಷದೊಳಗಿರುವ ಇನ್ನೂ ಅನೇಕ ನಾಯಕರಿಗೆ ತೀವ್ರ ಅಸಮಾಧಾನ ಇದೆ. ಕಾಲಕಾಲಕ್ಕೆ ಅದನ್ನು ಹೊರ ಹಾಕಿದ್ದಾರೆ. ನಾನು ಧೈರ್ಯವಾಗಿ ಪಕ್ಷದಿಂದ ಹೊರ ಬಂದು ಪಕ್ಷ ಶುದ್ಧೀಕರಣದ ಹೋರಾಟ ನಡೆಸಿದ್ದೇನೆ. ಅವರುಗಳು ಒಳಗಿದ್ದುಕೊಂಡೇ ಹೋರಾಟ ನಡೆಸುತ್ತಿದ್ದಾರೆ ಎಂದರು.

click me!