ನಾನು, ನನ್ನ ಕುಟುಂಬ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಸಚಿವ ಸತೀಶ್ ಜಾರಕಿಹೊಳಿ

Published : Jan 05, 2024, 07:34 PM IST
ನಾನು, ನನ್ನ ಕುಟುಂಬ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಸಚಿವ ಸತೀಶ್ ಜಾರಕಿಹೊಳಿ

ಸಾರಾಂಶ

‘ನನಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ನಾನಾಗಲಿ ಅಥವಾ ನಮ್ಮ ಕುಟುಂಬದ ಸದಸ್ಯರಾಗಲಿ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ. ಹೀಗಾಗಿ ಈ ಬಾರಿ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು (ಜ.05): ‘ನನಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ನಾನಾಗಲಿ ಅಥವಾ ನಮ್ಮ ಕುಟುಂಬದ ಸದಸ್ಯರಾಗಲಿ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ. ಹೀಗಾಗಿ ಈ ಬಾರಿ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಇದು ನಮ್ಮ ನಿರ್ಧಾರ. ಮುಂದೆ ಹೈಕಮಾಂಡ್‌ ಏನು ಹೇಳುತ್ತದೆಯೋ ನೋಡೋಣ. ಪಕ್ಷದೊಳಗೆ ಚರ್ಚೆಯಾಗಿಯೇ ಅಂತಿಮ ನಿರ್ಧಾರ ಆಗಲಿದೆ ಎಂದು ಹೇಳಿದರು. ನಾನು ಇಲ್ಲವೇ ಪುತ್ರ ಅಥವಾ ಪುತ್ರಿ ಯಾರೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬೆಳಗಾವಿ, ಚಿಕ್ಕೋಡಿ ಎರಡೂ ಕ್ಷೇತ್ರಗಳಿಗೂ ನಾವು ಸ್ಪರ್ಧಿಸುವುದಿಲ್ಲ. ಹೀಗಾಗಿ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ ಎಂದರು.

ಬೆಳಗಾವಿಯದು ವೈಯಕ್ತಿಕ ವಿಚಾರದ ಗಲಾಟೆ: ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಥಳಿಸಿದ್ದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ವೈಯಕ್ತಿಕ ವಿಚಾರಗಳಿಗೆ ಆದ ಗಲಾಟೆ. ಈಗಾಗಲೇ ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ. ಬೆಳಗಾವಿ ಜಿಲ್ಲೆ ದೊಡ್ಡದಿದೆ ಎಂಬುದು ಸತ್ಯ. ಆದರೆ ಹಾಗಂತ ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ. ಈ ಪ್ರಕರಣದಲ್ಲಿ ಏನೆಲ್ಲಾ ಕಠಿಣ ಕ್ರಮ ಕೈಗೊಳ್ಳಬೇಕೋ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕೊಡಗಿನಲ್ಲಿ 2 ದಿನಗಳಿಂದ ಅಕಾಲಿಕ ಮಳೆ: ಕಾಫಿ, ಭತ್ತ ಸೇರಿದಂತೆ ವಿವಿಧ ಬೆಳೆಗಳು ಹಾಳು, ಸಂಕಷ್ಟದಲ್ಲಿ ರೈತರು!

ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯ: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸೇರಿದಂತೆ ಇತರ ದಲಿತ ಸಮುದಾಯದ ಮುಖಂಡರು  ಒತ್ತಾಯಿಸಿದರು. ಮಾಧ್ಯಮದವರೊಂದಿಗೆ ಮುಖಂಡ ರಮೇಶ ಮಾದರ ಮಾತನಾಡಿ, ಸತೀಶ ಜಾರಕಿಹೊಳಿ ಸಮಾಜ ಮೌಢ್ಯದ ವಿರುದ್ಧ ಕಾರ್ಯಕ್ರಮಗಳನ್ನು ರೂಪಿಸಿ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿದ್ದು, ನಿಷ್ಪಕ್ಷಪಾತ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಗತಿಪರ ಚಿಂತನೆಗಳನ್ನು ಮೈಗೂಡಿಸಿಕೊಂಡು ಶೋಷಣೆಗೊಳಗಾದ ಸಮುದಾಯ ಎಸ್ಸಿ - ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ. ಇಂತಹವರಿಗೆ ಸಮಾಜದಲ್ಲಿ ಹೆಚ್ಚಿನ ಸೇವೆ ಮಾಡಲು ಕಾಂಗ್ರೆಸ್ ಪಕ್ಷ ಡಿಸಿಎಂ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಊರಿನ ದೇವಸ್ಥಾನಕ್ಕೆ ಬಂದ ಎಂದು ದಲಿತ ಯುವಕನ ಮೇಲೆ ಹಲ್ಲೆ ಪ್ರಕರಣ: ನಾಲ್ವರು ವಶಕ್ಕೆ!

ವೃತ್ತಿಯಲ್ಲಿ ಕೌಶಲ್ಯ ಬೆಳೆಸಿಕೊಳ್ಳಿ: ಹೊಸದಾಗಿ ನೇಮಕಗೊಂಡ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರಗಳಿಗೆ ಸುವರ್ಣ ವಿಧಾನ ಸೌಧದಲ್ಲಿ ಅಯೋಜಿಸಲಾಗಿರುವ ಎರಡು ದಿನಗಳ ಓರಿಯಂಟೇಶನ್ ತರಬೇತಿ ಶಿಬಿರವನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿದರು. ಜ. 2 ಹಾಗೂ ಜ.3 ರಂದು ನಡೆಯಲಿರುವ ತರಬೇತಿಯ ಸದುಪಯೋಗವನ್ನು ಹೊಸದಾಗಿ ನೇಮಕಗೊಂಡ ಇಂಜಿನಿಯರಗಳು ಪಡೆದುಕೊಳ್ಳಬೇಕು. ಈ ತರಬೇತಿಯ ಅಂಶಗಳನ್ನು ತಮ್ಮ ಕಾರ್ಯನಿರ್ವಹಣೆಯಲ್ಲಿ ಅಳವಡಿಸಿಕೊಳಬೇಕು. ಅದರಂತೆ ಇಂಜಿನಿಯರ್‌ಗಳು ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ತಲುಪಿಸುವ ಮಹತ್ವದ ಪಾತ್ರ ವಹಿಸಿಕೊಳ್ಳಬೇಕು ಸೂಚಿಸಿದರು. ಮುಖ್ಯ ಇಂಜಿನಿಯರ್ ಸುರೇಶ್ ಎಚ್, ಬೆಳಗಾವಿ ವಿಭಾಗದ ಅಧೀಕ್ಷಕ ಎಂಜಿನಿಯರ್ ಅರುಣಕುಮಾರ ಪಾಟೀಲ, ಧಾರವಾಡ ವಿಭಾಗದ ಅಧೀಕ್ಷಕ ಇಂಜಿನಿಯರ್ ಸಂಜೀವ ಹುಲಿಕಾಯಿ, ಚಿಕ್ಕೋಡಿ ಕಾರ್ಯ ನಿರ್ವಾಹಕ ಇಂಜಿನಿಯರ್ ಬಲೊಲ್, ಬೆಳಗಾವಿ ಕಾರ್ಯನಿರ್ವಹಕ ಎಸ್.ಎಸ್ ಸೊಬರದ ಸೇರಿದಂತೆ ಮತ್ತಿತರ ಅಧಿಕಾರಿಗಳು ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

‘ನೆಕ್ಸ್ಟ್‌ ಸಿಎಂ’ ಬೆಟ್ಟಿಂಗ್‌ ನಿಯಂತ್ರಿಸಿ: ವಿ.ಸುನೀಲ್‌ ಕುಮಾರ್‌ ಆಗ್ರಹ
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ