ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವಂತೆ ನಾನು ಹೇಳಿಲ್ಲ: ಸುನಿಲ್‌ ಬೋಸ್‌

By Kannadaprabha News  |  First Published Jul 23, 2023, 3:57 PM IST

ಟಿ. ನರಸೀಪುರದಲ್ಲಿ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುವಲ್ಲಿ ತಮ್ಮ ಕೈವಾಡವಿದೆ ಎಂಬ ಆರೋಪವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಪುತ್ರ ಹಾಗೂ ಕಾಂಗ್ರೆಸ್‌ ಮುಖಂಡ ಸುನಿಲ್‌ ಬೋಸ್‌ ತಳ್ಳಿ ಹಾಕಿದರು. 


ಮೈಸೂರು (ಜು.23): ಟಿ. ನರಸೀಪುರದಲ್ಲಿ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುವಲ್ಲಿ ತಮ್ಮ ಕೈವಾಡವಿದೆ ಎಂಬ ಆರೋಪವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಪುತ್ರ ಹಾಗೂ ಕಾಂಗ್ರೆಸ್‌ ಮುಖಂಡ ಸುನಿಲ್‌ ಬೋಸ್‌ ತಳ್ಳಿ ಹಾಕಿದರು. ಈ ಕುರಿತು ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರನ್ನೂ ಕೆಲಸದಿಂದ ತೆಗೆಯುವಂತೆ ಹೇಳಿಲ್ಲ. ಅಧಿಕಾರಿ ಯಾಕಾಗಿ ನನ್ನ ಹೆಸರು ಬಳಸಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಅಧಿಕಾರಿಗೆ ಸ್ಪಷ್ಟನೆ ಕೇಳುತ್ತೇನೆ ಎಂದರು.

ಗುತ್ತಿಗೆ ನೌಕರರನ್ನು ಕೆಲಸಕ್ಕೆ ತೆಗೆದುಕೊಳ್ಳಲು ಅವಧಿಯ ಮಾನದಂಡ ಇರುತ್ತದೆ. ನಂತರ ಅವರನ್ನು ಉಳಿಸಿಕೊಳ್ಳಲೂಬಹುದು, ತೆಗೆಯಲೂಬಹುದು. ಈ ಪ್ರಕರಣದಲ್ಲಿ ಆ ವ್ಯಕ್ತಿಯನ್ನು ಉಳಿಸಿಕೊಳ್ಳೋದು ಅಧಿಕಾರಿಗೆ ಬಿಟ್ಟಿದ್ದು. ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅವರು ಹೇಳಿದರು. ತಂದೆಯ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಪ್ರತಿ ಮನೆಯನ್ನು ಸುತ್ತಾಡಿ ತಂದೆಯನ್ನು ಗೆಲ್ಲಿಸಿದ್ದೇನೆ. ಜನರ ಕೆಲಸ ಮಾಡಿಕೊಡುವುದು ನನ್ನ ಜವಾಬ್ದಾರಿ. ಅಷ್ಟನ್ನು ನಾನು ಮಾಡುತ್ತಿದ್ದೇನೆ ಎಂದರು.

Latest Videos

undefined

ಬಿ.ಕೆ.ಹರಿಪ್ರಸಾದ್ ಹೇಳಿಕೆ ಬಗ್ಗೆ ನನಗೆ ಏನು ಗೊತ್ತಿಲ್ಲ: ಶಾಮನೂರು ಶಿವಶಂಕರಪ್ಪ

ಪ್ರತಿಕ್ರಿಯೆಗೆ ಎಚ್‌ಸಿಎಂ ನಕಾರ: ಟಿ. ನರಸೀಪುರದಲ್ಲಿ ಜೆಡಿಎಸ್‌ ಬೆಂಬಲಿಗರು ಎಂಬ ಕಾರಣಕ್ಕೆ ಇಬ್ಬರನ್ನು ಕೆಲಸದಿಂದ ತೆಗೆಯಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಲು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ನಿರಾಕರಿಸಿದರು. ಅಲ್ಲದೆ, ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಚಿವರು ಸಿಡಿಮಿಡಿಗೊಂಡರು. ಇದೆಲ್ಲಾ ಬೇಸ್‌ ಲೆಸ್‌ ಆರೋಪ, ಅದನ್ನು ಬಿಟ್ಟು ಬೇರೆ ಕೇಳಿ. ಯಾವ್ಯಾವುದೋ ಪ್ರಶ್ನೆಗಳನ್ನು ಕೇಳಬೇಡಿ ಎಂದು ಹೇಳುತ್ತಾ, ಹೆಚ್ಚು ಮಾತನಾಡದೇ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ ಅವರು ಹೊರಟು ಹೋದರು.

ನಾನು ಚಾ.ನಗರ ಸಂಸತ್‌ ಟಿಕೆಟ್‌ ಆಕಾಂಕ್ಷಿ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ನಾನೂ ಪ್ರಬಲ ಆಕಾಂಕ್ಷಿ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪುತ್ರ ಹಾಗೂ ಕಾಂಗ್ರೆಸ್‌ ಮುಖಂಡ ಸುನಿಲ್‌ ಬೋಸ್‌ ತಿಳಿಸಿದರು. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008ರಿಂದಲೂ ನಾನು ಸಕ್ರಿಯ ರಾಜಕಾರಣದಲ್ಲಿ ಇದ್ದೇನೆ. ಅಂದಿನಿಂದಲೂ ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಇದರ ಆಧಾರದ ಮೇಲೆ ಲೋಕಸಭಾ ಚುನಾವಣೆಗೆ ಟಿಕೆಟ್‌ ಕೇಳುತ್ತಿದ್ದೇನೆ ಎಂದು ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್‌ ಕೊಟ್ಟರೆ ಸಂತೋಷದಿಂದ ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ಟಿಕೆಟ್‌ ಸಿಗದಿದ್ದರೆ ಪಕ್ಷದ ಪರ ವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

ಚಕ್ರವರ್ತಿ ಸೂಲಿಬೆಲೆ ಆರೋಪ ರಾಜಕೀಯ ಷಡ್ಯಂತ್ರ: ಟಿ. ನರಸೀಪುರದ ಯುವ ಬ್ರಿಗೇಡ್‌ ಕಾರ್ಯಕರ್ತ ವೇಣುಗೋಪಾಲ್‌ ನಾಯಕ್‌ ಹತ್ಯೆಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್‌ ಬೋಸ್‌ ಅವಿರಗೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ಅವರು ಮಾಡುತ್ತಿರುವ ಆರೋಪಗಳು ರಾಜಕೀಯ ಷಡ್ಯಂತ್ರವಾಗಿದೆ ಎಂದು ದಲಿತ ಮಹಾಸಭಾ ಅಧ್ಯಕ್ಷ ಎಸ್‌. ರಾಜೇಶ್‌ ಕಿಡಿಕಾರಿದರು. ಸುನಿಲ್‌ ಬೋಸ್‌ ಅವರ ಬೆಂಬಲಿಗರಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಕ್ಷುಲ್ಲಕ ಕಾರಣಗಳಿಗಾಗಿ ಈ ಕೊಲೆ ನಡದಿದೆ. 

ನಾವು ಸಂವಿಧಾನದ ಬಲದಲ್ಲಿದ್ದೀವಾ, ನೆರಳಲ್ಲಿದ್ದೀವಾ ಎಂಬ ಅರಿವು ಅಗತ್ಯ: ಹಂಸಲೇಖ

ಈ ಹಿಂದೆಲ್ಲ ದಲಿತರ ಮೇಲೆ ಉತ್ತರ ಭಾರತ ಹಾಗೂ ರಾಜ್ಯದ ಇನ್ನಿತರ ಕಡೆ ದೌರ್ಜನ್ಯ ನಡೆದಾಗ ಚಕ್ರವರ್ತಿ ಸೂಲಿಬೆಲೆ ಏಕೆ ಸುಮ್ಮನಿದ್ದರು? ವೇಣುಗೋಪಾಲ್‌ ಕೊಲೆ ಪ್ರಕರಣ ಬಳಸಿಕೊಂಡು ಸುನಿಲ್‌ ಬೋಸ್‌ ಅವರ ದಮನಕ್ಕೆ ಬಿಜೆಪಿ ಯತ್ನಿಸುತ್ತಿದೆ. ಸತ್ಯಶೋಧನಾ ಸಮಿತಿ ಎಂಬ ಹೆಸರಿನಲ್ಲಿ ಈ ಪಿತೂರಿ ನಡೆಯುತ್ತಿದೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಕೊಲೆ ಆರೋಪಿಗಳಿಗೂ ಕೊಲೆಯಾದವರಿಗೂ ಬಹಳಷ್ಟುವರ್ಷಗಳಿಂದ ಸ್ನೇಹ ಸಂಬಂಧವಿತ್ತು. ಇದು ವೈಯಕ್ತಿಕ ವಿಚಾರದ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಆದರೆ, ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿಯವರು ಆರೋಪ ಮಾಡುತ್ತಿರುವುದು ರಾಜಕೀಯ ದ್ವೇಷದಿಂದ ಕೂಡಿದೆ ಎಂದು ಅವರು ದೂರಿದರು.

click me!