ಆರ್ ಅಶೋಕ್‌ ಕಾಲಜ್ಞಾನಿ ಎಂಬುದು ನನಗೆ ಗೊತ್ತಿರಲಿಲ್ಲ: ಎಚ್‌ಡಿಕೆ ವ್ಯಂಗ್ಯ

Published : Mar 18, 2023, 02:55 PM IST
ಆರ್ ಅಶೋಕ್‌ ಕಾಲಜ್ಞಾನಿ ಎಂಬುದು ನನಗೆ ಗೊತ್ತಿರಲಿಲ್ಲ: ಎಚ್‌ಡಿಕೆ ವ್ಯಂಗ್ಯ

ಸಾರಾಂಶ

ಕಂದಾಯ ಸಚಿವ ಆರ್‌.ಅಶೋಕ್‌ ಅವರು ಭವಿಷ್ಯ ಮತ್ತು ಸಂಖ್ಯಾಶಾಸ್ತ್ರವನ್ನು ಹೇಳುವ ಕಾಲಜ್ಞಾನಿ ಎಂದು ನನಗೆ ಗೊತ್ತಿರಲಿಲ್ಲ. ಗೊತ್ತಾಗಿದ್ದು ಈಗಲೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.


ಬೆಂಗಳೂರು (ಮಾ.18) : ಕಂದಾಯ ಸಚಿವ ಆರ್‌.ಅಶೋಕ್‌ ಅವರು ಭವಿಷ್ಯ ಮತ್ತು ಸಂಖ್ಯಾಶಾಸ್ತ್ರವನ್ನು ಹೇಳುವ ಕಾಲಜ್ಞಾನಿ ಎಂದು ನನಗೆ ಗೊತ್ತಿರಲಿಲ್ಲ. ಗೊತ್ತಾಗಿದ್ದು ಈಗಲೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಈ ಕುರಿತ ಟ್ವೀಟ್ ಮೂಲಕ ಕಿಚಾಯಿಸಿರುವ ಎಚ್‌ಡಿ ಕುಮಾರಸ್ವಾಮಿಯವರು, ಅವರಲ್ಲಿಯೂ ಒಬ್ಬರು 'ಕಾಲಜ್ಞಾನಿ' ‘ಸಂಖ್ಯಾಜ್ಞಾನಿ’ ಇದ್ದಾರೆನ್ನುವ ಸೋಜಿಗ ನನಗೆ ಬೆಕ್ಕಸ ಬೆರಗುಂಟು ಮಾಡಿದೆ. ಚುನಾವಣೆ ನಂತರ ತಮ್ಮ ದುಡಿಮೆಗೆ ದೋಖಾ ಇಲ್ಲ ಎನ್ನುವ ಆತ್ಮವಿಶ್ವಾಸ ಅಶೋಕ್‌(R ashok) ಅವರಲ್ಲಿದೆ. ಸಂತೋಷ. 

ಸಿದ್ದರಾಮಯ್ಯಗೆ ಗೆಲುವಿನ ಗ್ಯಾರಂಟಿ ಇಲ್ಲ, ಇತರರನ್ನು ಹೇಗೆ ಗೆಲ್ಲಿಸುತ್ತಾರೆ: ಎಚ್‌.ಡಿ.ಕುಮಾರಸ್ವಾಮಿ

ಜೆಡಿಎಸ್‌ಗೆ 20 ಸ್ಥಾನಗಳು ಬರುತ್ತವೆ ಎಂದು ಚಿಕ್ಕಬಳ್ಳಾಪುರ(Chikkaballapur)ದಲ್ಲಿ ಗಿಣಿ ಭವಿಷ್ಯ ಹೇಳಿರುವ ಅವರು, ತಮ್ಮ ಬಿಜೆಪಿ ಅದೆಷ್ಟುಸೀಟು ಗೆಲ್ಲುತ್ತದೆ ಎನ್ನುವುದನ್ನು ಹೇಳಲು ಮರೆತಿದ್ದಾರೋ ಅಥವಾ ಬೇಕೆಂದೇ ಹೇಳಲಿಲ್ಲವೋ ಅವರೇ ಹೇಳಬೇಕು ಎಂದು ಕಾಲೆಳೆದರು.

ಎಷ್ಟೇ ಆಗಲಿ, ಅವರ ಜಾಣತನ ಜಗಜ್ಜಾಹೀರು ಎಂದು ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ.

ಅಶೋಕ್‌ ಸಾಹೇಬರು ವಿಜಯ ಸಂಕಲ್ಪ(Vijaya sankalpa) ಕ್ಕೆ ಬದಲಾಗಿ 'ಸುಳ್ಳು ಸಂಕಲ್ಪ ಯಾತ್ರೆ ಗೆ ನನ್ನ ಶುಭಾಶಯಗಳು ಮತ್ತು ಗಾಢ ಸಾಂತ್ವನಗಳು. ಆದರೆ, ಅವರ ಕಾಮಾಲೆ ಮನಸ್ಸಿನ, ಅದರ ಅರೆಬೆಂದ ಲೆಕ್ಕದ ಬಗ್ಗೆ ನನ್ನ ಅನುಕಂಪ ಇದೆ. 

ದೇವೇಗೌಡರ ಕುಟುಂಬ ತೆರಿಗೆ ಹಣ ಲೂಟಿ ಮಾಡಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ತಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ನೊಣ ಹುಡುಕುವುದು ಬಿಜೆಪಿಗೆ ಅಂಟಿದ ಜಾಡ್ಯ ಮತ್ತು ಆಜನ್ಮಪರ್ಯಂತ ಬಂದಿರುವ ಚಾಳಿ. ನಮ್ಮ ಪಕ್ಷ ಬಿಡುವವರ ಮಾತು ಹಾಗಿರಲಿ, ನಿಮ್ಮ ಪಕ್ಷದಲ್ಲಿ ವಾರದೊಪ್ಪತ್ತಿನಿಂದ ನಿರಂತರವಾಗಿ ಕೇಳಿಬರುತ್ತಿರುವ ಅರುಣರಾಗ, ವಿಜಯನಾದ ಕಥನಗಳ ಕಥೆ ಏನು ಅಶೋಕ್‌ ಅವರೇ ಎಂದು ವ್ಯಂಗ್ಯವಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!