Latest Videos

ನಾನು ಸೇಡಿನ ರಾಜಕಾರಣ ಮಾಡಲ್ಲ, ಅದೇನಿದ್ದರೂ ಬಿಜೆಪಿ ಕೆಲಸ: ಸಿಎಂ ಸಿದ್ದರಾಮಯ್ಯ

By Kannadaprabha NewsFirst Published Jun 16, 2024, 6:25 AM IST
Highlights

ಬಿಎಸ್‌ವೈ ಕುಟುಂಬವನ್ನು ಗುರಿ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಆದರೆ, ಈ ಹಿಂದೆ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ 

ಮೈಸೂರು(ಜೂ.16):  ನಾನು ಯಾವತ್ತೂ ದ್ವೇಷದ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ. ದ್ವೇಷದ ರಾಜಕಾರಣ ಬಿಜೆಪಿ ಕೆಲಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು. ‘ಬಿಎಸ್‌ವೈ ಕುಟುಂಬವನ್ನು ಗುರಿ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಆದರೆ, ಈ ಹಿಂದೆ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ; ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿ

‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ಇವುಗಳನ್ನು ದ್ವೇಷದ ರಾಜಕಾರಣ ಎನ್ನಬೇಕೋ, ಇಲ್ಲ ಪ್ರೀತಿಯ ರಾಜಕಾರಣ ಎಂದು ಕರೆಯಬೇಕೋ ನೀವೇ ಹೇಳಿ’ ಎಂದರು. ‘ಸೇಡಿನ ರಾಜಕಾರಣ ಮಾಡುವುದು ಅವರು, ನಾವಲ್ಲ, ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ನಾನು ನಿನ್ನೆ, ಮೊನ್ನೆ ರಾಜಕೀಯಕ್ಕೆ ಬಂದವನಲ್ಲ’ ಎಂದು ಸಿಎಂ ಕಿಡಿಕಾಡಿದರು.

click me!