ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ, ಜನರ ಆಶೀರ್ವಾದದಲ್ಲಿ ನಂಬಿಕೆ: ಸಿದ್ದರಾಮಯ್ಯ

By Kannadaprabha News  |  First Published Nov 3, 2023, 6:03 AM IST

ಮೂಢನಂಬಿಕೆ, ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಜನರ ಹಾಗೂ ದೇವರ ಆಶೀರ್ವಾದದಲ್ಲಿ ನಂಬಿಕೆ ಇಟ್ಟಿರುವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೇವರಲ್ಲಿ ನಂಬಿಕೆ ಇಟ್ಟಿರುವೆ. ಸಮಾಜಕ್ಕೆ ಒಳ್ಳೆಯದಾಗುವುದನ್ನು ನಂಬುವೆ ಎಂದರು.
 


ಹೊಸಪೇಟೆ (ನ.03): ಮೂಢನಂಬಿಕೆ, ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಜನರ ಹಾಗೂ ದೇವರ ಆಶೀರ್ವಾದದಲ್ಲಿ ನಂಬಿಕೆ ಇಟ್ಟಿರುವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೇವರಲ್ಲಿ ನಂಬಿಕೆ ಇಟ್ಟಿರುವೆ. ಸಮಾಜಕ್ಕೆ ಒಳ್ಳೆಯದಾಗುವುದನ್ನು ನಂಬುವೆ ಎಂದರು.

ಕನ್ನಡದ ಜ್ಯೋತಿ ಬೆಳಗಿದ ಸಿಎಂ ಸಿದ್ದರಾಮಯ್ಯ: ಹಂಪಿಯ ಎದುರು ಬಸವಣ್ಣ ಮಂಟಪದ ಮುಂದಿನ ದೀಪಸ್ತಂಬದಲ್ಲಿ ಸಿಎಂ ಸಿದ್ದರಾಮಯ್ಯನವರು ಕನ್ನಡದ ಜ್ಯೋತಿ ಬೆಳಗಿದರು. 1973ರ ನವೆಂಬರ್ 2ರಂದು ಆಗಿನ ಸಿಎಂ ದೇವರಾಜ ಅರಸು ಈ ದೀಪಸ್ತಂಬದಲ್ಲಿ ಜ್ಯೋತಿ ಬೆಳಗಿದ್ದರು. ಈಗ ಮೈಸೂರಿನವರೇ ಆದ ಸಿದ್ದರಾಮಯ್ಯನವರು ಜ್ಯೋತಿ ಬೆಳಗಿದರು.

Tap to resize

Latest Videos

undefined

ಸರ್ಕಾರಿ ಶಾಲೆಗಳಿಗಿನ್ನು ಉಚಿತ ವಿದ್ಯುತ್‌, ನೀರು: ಸಿದ್ದರಾಮಯ್ಯ ಘೋಷಣೆ

ಹಂಪಿಯ ಶ್ರೀ ವಿರೂಪಾಕ್ಷನಿಗೆ ವಿಶೇಷ ಪೂಜೆ: ಸಿಎಂ ಸಿದ್ದರಾಮಯ್ಯನವರು ಶ್ರೀವಿರೂಪಾಕ್ಷೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಅರ್ಚಕರು ಮುಖ್ಯಮಂತ್ರಿ ಅವರಿಗೆ ರುದ್ರಾಕ್ಷಿ ಮಾಲೆ ಧಾರಣೆ ಮಾಡಿದರು. ವಿಶೇಷ ಪೂಜೆ ಸಲ್ಲಿಕೆಯ ಬಳಿಕ ಸಿದ್ದರಾಮಯ್ಯ ಹೆಸರಿನಲ್ಲಿ ದೇವಾಲಯದಲ್ಲಿ ಅರ್ಚನೆ ಮಾಡಲಾಯಿತು.

ಕನ್ನಡಾಂಬೆ ಭುವನೇಶ್ವರಿ ದೇವಿಗೆ ವಿಶೇಷ ಪೂಜೆ: ಸಿಎಂ ಸಿದ್ದರಾಮಯ್ಯನವರು ಕನ್ನಡಾಂಬೆ ಭುವನೇಶ್ವರಿ ದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕನ್ನಡಾಂಬೆ ದೇವಾಲಯದಿಂದ ಜ್ಯೋತಿ ತಂದು, ಎದುರು ಬಸವಣ್ಣ ಮಂಟಪದ ಬಳಿಯ ದೀಪಸ್ತಂಭದಲ್ಲಿ ದೀಪ ಬೆಳಗಿದರು.

ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆಗೆ ಚಾಲನೆ: ಕರ್ನಾಟಕ ಸಂಭ್ರಮ ೫೦ರ ಜ್ಯೋತಿ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು. ಕರ್ನಾಟಕ ಎಂದು ನಾಮಕರಣಗೊಂಡು ನ. 1ಕ್ಕೆ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತದ ಸಹಯೋಗದಲ್ಲಿ ವಿಜಯನಗರ ಸಾಮ್ರಾಜ್ಯ ಹಂಪಿಯಲ್ಲಿ `ಕರ್ನಾಟಕ ಸಂಭ್ರಮ-50ರ’ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಾನೂ ರೈತನ ಮಗ, ಕಷ್ಟ ಏನೆಂದು ನನಗೂ ಗೊತ್ತಿದೆ: ಸಿದ್ದರಾಮಯ್ಯ

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್. ಜಮೀರ್ ಅಹಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕೆ.ಎಂ.ಎಫ್. ಅಧ್ಯಕ್ಷ ಭೀಮಾನಾಯ್ಕ್, ಶಾಸಕ ಎಚ್.ಆರ್. ಗವಿಯಪ್ಪ, ಡಾ. ಎನ್.ಟಿ. ಶ್ರೀನಿವಾಸ ಮೂರ್ತಿ, ಎಂ.ಪಿ. ಲತಾ ಮಲ್ಲಿಕಾರ್ಜುನ, ಈ. ತುಕಾರಾಂ, ಜಿ.ಎನ್. ಗಣೇಶ್ ಮತ್ತಿತರರಿದ್ದರು.

click me!