ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಜಿಲ್ಲೆಯ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಮಗೆ ವಹಿಸಿರುವ ನಿಗಮ ಮಂಡಳಿಯನ್ನು ಸ್ಪೀಕರಿಸುವುದಿಲ್ಲ ಎಂದು ಹೇಳುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ (ಜ.27): ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಜಿಲ್ಲೆಯ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಮಗೆ ವಹಿಸಿರುವ ನಿಗಮ ಮಂಡಳಿಯನ್ನು ಸ್ಪೀಕರಿಸುವುದಿಲ್ಲ ಎಂದು ಹೇಳುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ. ರಾಜ್ಯ ಸರ್ಕಾರ 34 ಹಿರಿಯ ಶಾಸಕರಿಗೆ ನಿಗಮ ಮಂಡಳಿಗೆ ನೇಮಕ ಮಾಡಿ ಪಟ್ಟಿ ಬಿಡುಗಡೆಗೊಳಿಸಿದೆ.
ಇದರ ಬೆನ್ನಲೇ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಮ್ಮ ಮೊಬೈಲ್ ಸ್ವಿಚ್‌ಆಪ್ ಮಾಡಿಕೊಂಡಿದ್ದಾರೆ. ತಮ್ಮ ಆಪ್ತ ಸಹಾಯಕರ ಮೂಲಕ ಮಾಹಿತಿ ನೀಡಿರುವ ಶಾಸಕ ಸುಬ್ಬಾರೆಡ್ಡಿ, ತಾನು ನಿಗಮ ಮಂಡಳಿಗೆ ಆಕಾಂಕ್ಷಿಯಲ್ಲದಿರುವ ಕಾರಣ ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷರ ಹುದ್ದೆಯನ್ನು ನಿರಾಕರಿಸಿದ್ದು, ಅಧಿಕಾರ ಸ್ವೀಕರಿಸುವುದಿಲ್ಲ ಎಂದು ತಮ್ಮ ಅಪ್ತ ಸಹಾಯಕ ಮೋಹನ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಚಿವ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿರುವ ಸುಬ್ಬಾರೆಡ್ಡಿ ಸರ್ಕಾರ ವಹಿಸಿರುವ ನಿಗಮ ಮಂಡಳಿಯನ್ನು ನಿರಾಕರಿಸುವ ಮೂಲಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ.
ಜನರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನಪರ ಕಾರ್ಯಕ್ರಮಗಳನ್ನು ಜಾರಿ ಮಾಡುವ ಮೂಲಕ ಎಲ್ಲರ ಏಳಿಗೆಗೆ ಶ್ರಮಿಸುತ್ತಿದೆ. ಮುಂದಿನ ದಿನಗಳಲ್ಲಿ ಮತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಶಾಸಕ ಸುಬ್ಬಾರೆಡ್ಡಿ ತಿಳಿಸಿದರು. ತಾಲೂಕಿನ ಸೋಮೇಶ್ವರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ, ಎಚ್. ಎನ್. ವ್ಯಾಲಿ ಯೋಜನೆಯ ಅಡಿಯಲ್ಲಿ ಸೋಮೇಶ್ವರ ಕೆರೆಯಿಂದ ಸೋಮೇನಹಳ್ಳಿ ಕೆರೆಗೆ ನೀರು ಹರಿಸುವ ಗಂಗಾಪೂಜೆ ಹಾಗೂ ಸಾಂಸ್ಕೃತಿಕ ಸೌರಭ, ರಂಗೋಲಿ ಸ್ಪರ್ಧೆ, ಕ್ಯೆವಾರ ತಾತಯ್ಯ ನವರ ಗಾಯನ ಗೀತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬ್ಯಾರೇಜ್ ನಿರ್ಮಾಣದಿಂದ ಶಿರಾದಲ್ಲಿ ಅಂತರ್ಜಲ ಹೆಚ್ಚಿದೆ: ಶಾಸಕ ಟಿ.ಬಿ.ಜಯಚಂದ್ರ
ಆಸ್ಪತ್ರೆ ನಿರ್ಮಿಸುವ ಭರವಸೆ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ತಾಲೂಕಿನಲ್ಲಿ ಎಲ್ಲಾ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದ್ದೇವೆ. ಮುಂದಿನ ದಿನಗಳಲ್ಲಿ ಸೋಮೇನಹಳ್ಳಿ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಪದವಿ ಪೂರ್ವ ಕಾಲೇಜನ್ನು ಪ್ರಾರಂಭ ಮಾಡಿಕೊಡುತ್ತೇನೆ ಎಂದು ತಿಳಿಸಿದರು. ಮಾಜಿ ಸಂಸದ ವೀರಪ್ಪ ಮೊಯ್ಲಿ ಮಾತನಾಡಿ, ಈ ಭಾಗದ ಜನತೆಯ ನೀರಿನ ಭವಣೆಯನ್ನು ದೂರಮಾಡಲು ಎತ್ತಿನಹೊಳೆ, ಕೆಸಿ ವ್ಯಾಲಿ, ಎಚ್ಎನ್ ವ್ಯಾಲಿ ಯಂತಹ ಯೋಜನೆಗಳನ್ನು ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರ. ತಾವು ಮತ್ತೊಮ್ಮೆ ಈ ಭಾಗದ ಸಂಸದನಾದರೆ ಉಳಿದ ಕಾಮಗಾರಿ ಮುಗಿಸುತ್ತೇನೆ ಎಂದರು.