
ಬೆಳಗಾವಿ(ಡಿ.16): ಬೆಳಗಾವಿ ಕಾಂಗ್ರೆಸ್ ಕಚೇರಿ ನಿರ್ಮಾಣದಲ್ಲಿ ನನ್ನ ಪಾತ್ರ ದೊಡ್ಡದಿತ್ತು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿರುವುದು ನಿಜ. ಜಾಗ ಮತ್ತು ಕಟ್ಟಡ ನಿರ್ಮಾಣಕ್ಕೆ ಒಟ್ಟು 1.27 ಕೋಟಿ ರು. ಕೊಟ್ಟಿದ್ದೇನೆ ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಬುಧವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಜಾಗ ಕೇಂದ್ರ ಮಾಜಿ ಸಚಿವ ಬಿ.ಶಂಕರಾನಂದ ಹೆಸರಲ್ಲಿತ್ತು. ಮಕ್ಕಳ ಮನವೊಲಿಸಿ ಕೊಡಿಸಿದೆ. ಜಾಗಕ್ಕೆ ₹54 ಲಕ್ಷ ನಿಗದಿ ಮಾಡಿದರು. ಅಂದಿನ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹಣ ತುಂಬಲು ಮನವಿ ಮಾಡಿದರು. ಮೊದಲ ಕಂತು 27 ಲಕ್ಷ ನಾನೇ ತುಂಬಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರುಪಾಯಿ ಕೊಟ್ಟೆ. ಹೀಗೆ ಒಟ್ಟು 1.27 ಕೋಟಿ ಹಣ ಕೊಟ್ಟಿದ್ದೇನೆ. ಆದರೆ ಕಟ್ಟಡ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿದೆ. ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಆಗ ಲಕ್ಷ್ಮೀ ಹೆಬ್ಬಾಳಕರ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿದ್ದರು. ಈಗಿನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ಯಾರ್ಯಾರು ಗೋಲ್ ಮಾಲ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಬಗ್ಗೆ ಮಾತಾಡೋ ಹಕ್ಕು ರಮೇಶ್‌ಗಿಲ್ಲ: ವಿಜಯೇಂದ್ರ
ಆ ಹಣದಲ್ಲಿ ಯಾರು ಕಾರು ಖರೀದಿಸಿದ್ದಾರೆ ಎನ್ನುವುದು ಗೊತ್ತಿದೆ ಎಂದು ಹೇಳಿದರು. ಬೆಳಗಾವಿ ಕಾಂಗ್ರೆಸ್ ಕಚೇರಿ ನಾನೇ ನಿರ್ಮಾಣ ಮಾಡಿದ್ದು ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳುತ್ತಿರುವುದು ತಪ್ಪು. ಆಗಿನ ಶಾಸಕರು ₹20 ರಿಂದ 25 ಲಕ್ಷ ಹಣ ನೀಡಿದ್ದಾರೆ. ಹೆಬ್ಬಾಳರ್ ಎಷ್ಟು ಹಣ ಕೊಟ್ಟಿದ್ದಾರೆ ಗೊತ್ತಿಲ್ಲ. ಡಿ.ಕೆ.ಶಿವಕುಮಾರ್ ಸುಳ್ಳು ಹೇಳಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದರು.
ಸತೀಶ ಜಾರಕಿಹೊಳಿ ಕೊಡುಗೆ ಬಗ್ಗೆ ಪ್ರತಿಕ್ರಿಯಿಸಿ, ಸತೀಶ್ ಅರ್ಧ ಕಾಮಗಾರಿ ಆಗಿದ್ದ ಕಟ್ಟಡ ಪೂರ್ಣಗೊಳಿಸಿದ್ದಾರೆ. ಇಂದಿಗೂ ಕಚೇರಿ ನಿರ್ವಹಣೆಗೆ ದುಡ್ಡು ನೀಡುತ್ತಿದ್ದಾರೆ ಎಂದು ಹೇಳಿದರು. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ವೇಳೆ ಬೆಳಗಾವಿ ರಾಜಕಾರಣಕ್ಕೆ ಡಿ.ಕೆ.ಶಿವಕುಮಾರ ಎಂಟ್ರಿ ಆಗಲು ಕೊಟ್ಟಿಲ್ಲ. ಅಲ್ಲೇ ಬ್ಲಾಕ್ ಮಾಡಿದ್ದೆ. ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ಮಟ್ಟದಲ್ಲಿ ಅಂದು “ಡಿ.ಕೆ.ಶಿವಕುಮಾರ ಅವರ ಸಲಹೆ ಸ್ವೀಕಾರ ಮಾಡಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.