ಕಳೆದ 10 ವರ್ಷಗಳಿಂದ ರೈತರ ಖಾತೆಗೆ ಮೋದಿ ಸರ್ಕಾರ 2000 ರು. ಜಮೆ ಮಾಡುತ್ತಾ ಬರುತ್ತಿದೆ. ಆದರೆ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಸ್ಥಗಿತಗೊಳಿಸಿದೆ. ಈಗ 5 ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಅವರಲ್ಲಿಯೇ ಗ್ಯಾರಂಟಿಗಳ ಕುರಿತು ಅಪಸ್ವರ ಎದ್ದಿದೆ ಎಂದು ಟೀಕಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಚನ್ನಪಟ್ಟಣ(ನ.07): ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ರೈತರ 28 ಸಾವಿರ ಕೋಟಿ ರು. ಸಾಲಮನ್ನಾ ಮಾಡಿದ್ದರು. ಇದನ್ನು ಸಹಿಸಲಾಗದೇ ಕಾಂಗ್ರೆಸ್‌ನವರೇ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಕೆಡವಿದರು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಾಗ್ದಾಳಿ ನಡೆಸಿದರು.
ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆ ಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರೇ ಹಠ ಮಾಡಿ ನನ್ನ ಮಗ ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿಯ ನ್ನಾಗಿ ಮಾಡಿದರು. ಕೊನೆಗೆ ಅವರೇ ಮೈತ್ರಿ ಸರ್ಕಾರ ತೆಗೆದರು ಎಂದು ಕಿಡಿಕಾರಿದರು.
undefined
ದೇವೇಗೌಡರು ಈಗ ಮೊಮ್ಮಗ ನಿಖಿಲ್‌ಗೂ ಅಳೋದು ಕಲಿಸಿದ್ದಾರೆ: ಸಿಎಂ ಸಿದ್ದರಾಮಯ್ಯ
ಕಳೆದ 10 ವರ್ಷಗಳಿಂದ ರೈತರ ಖಾತೆಗೆ ಮೋದಿ ಸರ್ಕಾರ 2000 ರು. ಜಮೆ ಮಾಡುತ್ತಾ ಬರುತ್ತಿದೆ. ಆದರೆ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಸ್ಥಗಿತಗೊಳಿಸಿದೆ. ಈಗ 5 ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಅವರಲ್ಲಿಯೇ ಗ್ಯಾರಂಟಿಗಳ ಕುರಿತು ಅಪಸ್ವರ ಎದ್ದಿದೆ ಎಂದು ಟೀಕಿಸಿದರು.
ನನಗೆ ನಿಂತು ಮಾತಾಡೋದಕ್ಕೆ ಕಾಲಲ್ಲಿ ನೋವಿದೆ. ಅದಕ್ಕೆ ಕುಳಿತು ಮಾತನಾಡುತ್ತಾ ಇದ್ದೀನಿ. ನಾನು ರೈತನ ಮಗ, 90 ವರ್ಷ ವಯಸ್ಸಾಗಿದೆ. ನನಗೆ ಸರಿಸಮನಾಗಿ ಎಸ್. ಎಂ. ಕೃಷ್ಣ ಒಬ್ಬರೇ ಇರೋದು. ಅವರು ಎಲ್ಲೂ ಬರಲ್ಲ, ದೇವೇಗೌಡರು ಯಾಕೆ ಬರುತ್ತಾರೆ? ಮೊಮ್ಮಗನ ಗೆಲ್ಲಿಸಲು ಬರುತ್ತಾರೆ. 90 ವರ್ಷ ವಯಸ್ಸಾದರೂ ಬರ್ತಾನಲ್ಲ, ಹುಚ್ಚು ಹಿಡಿದಿದ್ಯಾ ಅಂತಾ ಎದುರಾಳಿಗಳು ಮಾತನಾಡುತ್ತಿದ್ದಾರೆ. 50 ವರ್ಷಗಳ ಹಿಂದೆ ಚನ್ನಪಟ್ಟಣಕ್ಕೆ ಬಂದು ಕಾಂಗ್ರೆಸ್ ಸೋಲಿಸಿದ ವ್ಯಕ್ತಿ ನಾನು. ನಿಖಿಲ್ ಮಂಡ್ಯ ಮತ್ತು ರಾಮನಗರದಲ್ಲಿ ಸೋತಿದ್ದಾನೆ. ಹಾಗಂತ ನಾನು ಮೊಮ್ಮಗನನ್ನು ಗೆಲ್ಲಿಸಲು ಇಲ್ಲಿಗೆ ಬಂದಿಲ್ಲ. ಪ್ರಾದೇಶಿಕ ಪಕ್ಷ ಉಳಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಬಂದಿದ್ದೇನೆ. ಟಿಕೆ ಹಳ್ಳಿ ಬಳಿ ಪಂಪ್ ಮಾಡಿ ರಾಮನಗರ, ಚನ್ನಪಟ್ಟಣಕ್ಕೆ ಕುಡಿಯುವ ನೀರು ಕೊಟ್ಟಿದೇನೆ. ಈಗ ವಿರೋಧಿಗಳು ಮೊಮ್ಮಗನನ್ನು ಗೆಲ್ಲಿಸಲು ಬಂದಿದ್ದಾರೆ ಎಂದು ಅಪ್ರಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಾಲಕಿಯಿಂದ ದೇವೇಗೌಡರಿಗೆ ಬೆಲ್ಲದಾರತಿ:
ತಿಟ್ಟಮಾರನಹಳ್ಳಿ ಗ್ರಾಮಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಪಕ್ಷದ ಕಾರ್ಯಕ ರ್ತರು ಮಂಗಳವಾದ್ಯದೊಂದಿಗೆ ಪೂರ್ಣ ಕುಂಭಸ್ವಾಗತನೀಡಿಬರಮಾಡಿಕೊಂಡರು. ವೇದಿಕೆ ಏರಿದ ದೇವೇಗೌಡ ಅವರಿಗೆ ಬಾಲಕಿಯೊಬ್ಬಳು ಬೆಲ್ಲದ ಆರತಿ ಬೆಳಗಿ ಆಶೀರ್ವಾದ ಪಡೆದಳು.