ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇನೆ: ಶಾಸಕ ಬಸನಗೌಡ ಯತ್ನಾಳ

By Kannadaprabha NewsFirst Published Jun 22, 2024, 10:14 PM IST
Highlights

ನನ್ನ ಮನವೊಲಿಕೆ ಪ್ರಯತ್ನಗಳು ನಡೆಯುತ್ತಲೇ ಇದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡೋದಾಗಿ ಈಚೆಗೆ ನಗರಕ್ಕೆ ಬಂದ ನಾಯಕರು ಭರವಸೆ ನೀಡಿದ್ದರು. ಆದರೆ, ನಾನು ವಿಜಯೇಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ, ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. 
 

ವಿಜಯಪುರ (ಜೂ.22): ನನ್ನ ಮನವೊಲಿಕೆ ಪ್ರಯತ್ನಗಳು ನಡೆಯುತ್ತಲೇ ಇದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡೋದಾಗಿ ಈಚೆಗೆ ನಗರಕ್ಕೆ ಬಂದ ನಾಯಕರು ಭರವಸೆ ನೀಡಿದ್ದರು. ಆದರೆ, ನಾನು ವಿಜಯೇಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ, ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಜೊತೆ ಹೊಂದಾಣಿಕೆ ಆಗುವಂತೆ ಯತ್ನಾಳ ಮನವೊಲಿಕೆಗೆ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ನಾನು ಅವರಿಗೆ ಕಾಂಪಿಟೇಟರ್ ಇದ್ದೇನೆ ಎಂದು ತಿಳಿಸಿದರು.

ಕಾಯ್ದೆ ಬದಲಾಗಲಿ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಶಿವಕುಮಾರ ಅಥವಾ ಡಿ.ಕೆ.ಸುರೇಶ ಸ್ಪರ್ಧೆ ಮಾಡುವ ಚರ್ಚೆ ನಡೆದಿರುವ ಕುರಿತು ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು. ಆದರೆ ಚುನಾವಣೆ ಸ್ಪರ್ಧೆಯ ವಿಚಾರದಲ್ಲಿ ಚುನಾವಣಾ ಆಯೋಗ ಕೆಲ ಕಾಯ್ದೆಗಳನ್ನು ಮಾರ್ಪಾಡು ಮಾಡಬೇಕು. ಒಂದು ಕ್ಷೇತ್ರದಲ್ಲಿ ಸಂಸದ, ಶಾಸಕರು ಆಗಿರುವವರು ಮತ್ತೊಂದು ಕ್ಷೇತ್ರಕ್ಕೆ ಸ್ಪರ್ಧೆ ಮಾಡಲು ಅವಕಾಶ ನೀಡಬಾರದು. ಈ ಕುರಿತು ಹೊಸ ಕಾನೂನು ಜಾರಿ ಮಾಡಬೇಕೆಂದು ಯತ್ನಾಳ ಒತ್ತಾಯಿಸಿದರು.

Latest Videos

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಚಿವ ಮಹದೇವಪ್ಪ ಸ್ಪಷ್ಟನೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೂ ಬಾಗಲಕೋಟೆ ಅಥವಾ ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಹೇಳಲಾಗಿತ್ತು. ನಾನು ಸ್ಪರ್ಧೆ ಮಾಡಲಿಲ್ಲ. ಒಂದು ಕ್ಷೇತ್ರದಲ್ಲಿ ಶಾಸಕರಾಗಿದ್ದವರು, ಸಚಿವರಾಗಿದ್ದರೂ ಉಪಚುನಾವಣೆಗಳಲ್ಲಿ ಸ್ಪರ್ಧೆ ಮಾಡುವಂತಾಗಬಾರದು. ಈ ನಿಟ್ಟಿನಲ್ಲಿಯೂ ಕಾನೂನು ಜಾರಿಯಾಗಬೇಕು. ಉಪ ಚುನಾವಣೆ ನಡೆಯುವುದರಿಂದ ನೀತಿ ಸಂಹಿತೆ ಎರಡು ತಿಂಗಳು ಜಾರಿಯಲ್ಲಿರುತ್ತದೆ. ಇದರಿಂದ ಅಭಿವೃದ್ಧಿ ಕಾಮಗಾರಿಗಳು ಆಗಲ್ಲ. ಈ ಮೂಲಕ ಚುನಾವಣಾ ವಿಚಾರದಲ್ಲಿ ಹೊಸ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಗ್ಯಾರಂಟಿಗಾಗಿ ಬೆಲೆ ಏರಿಕೆ: ರಾಜ್ಯ ಸರ್ಕಾರದಿಂದ ಬೆಲೆ ಏರಿಕೆ ವಿಚಾರಕ್ಕೆ ಗರಂ ಆದ ಅವರು, ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಈಗ ಬಸ್ ದರವನ್ನು ಏರಿಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳು ಜೀವಂತವಾಗಿರಲು ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ. ಬೆಲೆ ಏರಿಕೆ ಮಾಡದಿದ್ದರೆ ಸರ್ಕಾರಿ ನೌಕರರ ಸಂಬಳ‌ ನೀಡಲು ಸರ್ಕಾರದ ಬಳಿ ಹಣ ಇಲ್ಲದಂತಾಗಿದೆ. ಕಾಂಗ್ರೆಸ್ ಶಾಸಕರು, ಸಚಿವರು‌ ಅಭಿವೃದ್ಧಿಗೆ ಅನುದಾನ‌ ನೀಡುತ್ತಿಲ್ಲ ಎನ್ನುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಬೇಡವೆಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿದರೆ ಮತ್ತಷ್ಟು ಕಾಂಗ್ರೆಸ್‌ಗೆ ಪರಿಣಾಮ ಬೀರಲಿದೆ ಎಂದು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ. ಮದ್ಯದ ದರವನ್ನು ಏರಿಕೆ‌ ಮಾಡುತ್ತಿದ್ದಾರೆ, ಮದ್ಯದ ದರ ಏರಿಕೆ‌ ಮಾಡಿದರೆ ಮಾಡಲಿ ಎಂದು ಹೇಳಿದರು.

ಶಾಸಕ ಎ.ಎಸ್.ಪೊನ್ನಣ್ಣ ಪ್ರತಿಕೃತಿ ದಹನ: ಕೊಡವರ ಸಂಪ್ರದಾಯಕ್ಕೆ ಅಪಮಾನ ಎಂದು ಕಾಂಗ್ರೆಸ್ ಆಕ್ರೋಶ

ಸಚಿವರ ಕ್ಷೇತ್ರದಲ್ಲೇ ಜಮೀನು ಕಬಳಿಕೆ ಹುನ್ನಾರ: ಸರ್ಕಾರ ವ್ಯಾಪಕ‌ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಎಲ್ಲ ಮಂತ್ರಿಗಳು‌ ಲೂಟಿ ಮಾಡುತ್ತಿದ್ದಾರೆ. ಕಂದಾಯ ಸಚಿವರ ಕ್ಷೇತ್ರದಲ್ಲಿಯೇ ಇಬ್ಬರು ಸಚಿವರು ಜಮೀನು ನುಂಗೋ ಹುನ್ನಾರ ನಡೆಸಿದ್ದಾರೆ ಎಂದು ಯತ್ನಾಳ ಬಾಂಬ್ ಸಿಡಿಸಿದರು. ಬೆಂಗಳೂರಿನ ಹೃದಯ ಭಾಗದಲ್ಲಿನ ಸಾವಿರಾರು ಕೋಟಿ ರುಪಾಯಿ ಮೌಲ್ಯದ ಜಮೀನು ನುಂಗೋ ಹುನ್ನಾರ ನಡೆದಿದೆ. 20 ಎಕರೆ ಜಮೀನನ್ನು ನಕಲಿ ಕಾಗದ ಪತ್ರ ಮಾಡಿ ಬೇನಾಮಿಯಾಗಿ ಕಬಳಿಸಲು ಮುಂದಾಗಿದ್ದಾರೆ ಎಂದು ಶಾಸಕ ಯತ್ನಾಳ ಸ್ಪೋಟಕ ಹೇಳಿಕೆ ನೀಡಿದರು.

click me!