ಕೊಡಗಿನಲ್ಲಿ 1,800 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಮಾಡಿದ್ದೇನೆ: ಅಪ್ಪಚ್ಚು ರಂಜನ್

By Girish Goudar  |  First Published Apr 21, 2023, 11:30 PM IST

ಮನೆ ಮನೆ ಪ್ರಚಾರದಲ್ಲಿ ಮತ್ತೊಮ್ಮೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅಪ್ಪಚ್ಚು ರಂಜನ್


ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಡಗು(ಏ.21):  ಕೊಡಗಿನ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದ್ದು ಶಾಸಕ, ಬಿಜೆಪಿ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಅವರು ಶುಕ್ರವಾರದಿಂದ ಮನೆ, ಮನೆ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮಡಿಕೇರಿ ನಗರದ ಚೌಡೇಶ್ವರಿ ದೇವಾಲಯದಲ್ಲಿ ಅಪ್ಪಚ್ಚು ರಂಜನ್ ಮತ್ತು ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ, ನಂತರ ಚುನಾವಣಾ ಪ್ರಚಾರ ಆರಂಭಿಸಿದರು. ಪೂಜೆ ಸಲ್ಲಿಸಿದ ಬಳಿಕ ನಗರದ ಮಾರುಕಟ್ಟೆ ರಸ್ತೆಯಲ್ಲಿ ಮನೆ ಮನೆ ಪ್ರಚಾರ ನಡೆಸಿದರು. 

Latest Videos

undefined

ಚೌಡೇಶ್ವರಿ ದೇವಸ್ಥಾನದ ಬಳಿಯಿಂದ ಬನ್ನಿಮಂಟಪದವರೆ ತೆರಳಿದ ಅಪ್ಪಚ್ಚು ರಂಜನ್ ಹಾಗೂ ಕಾರ್ಯಕರ್ತರು ರಸ್ತೆಯ ಮತ್ತೊಂದು ಬದಿಯಲ್ಲಿ ಇಂದಿರಾಗಾಂಧಿ ವೃತ್ತದವರೆಗೆ ಮನೆ ಮನೆ ಪ್ರಚಾರ ನಡೆಸಿದರು. ಈ ಸಂದರ್ಭ ಮಾತನಾಡಿದ ಅಪ್ಪಚ್ಚು ರಂಜನ್ ಕಳೆದ ಐದು ಬಾರಿಯಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಕಳೆದ ಐದು ವರ್ಷದಲ್ಲೇ 1800 ಕೋಟಿಗೂ ಹೆಚ್ಚು ಅನುದಾನ ತಂದು ಕ್ಷೇತ್ರ ಅಭಿವೃದ್ಧಿ ಮಾಡಿದ್ದೇನೆ. ಇನ್ನೂ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಅದಕ್ಕಾಗಿ ಮತ್ತೊಮ್ಮೆ ತಮಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕೋರಿದ್ದೇನೆ. ಯಾರ ಮನೆಗೆ ಹೋದರೂ ತಮಗೆ ಮತ ನೀಡುವುದಾಗಿ ಹೇಳುತ್ತಿದ್ದಾರೆ. ಹೀಗಾಗಿ ನಾನು ಗೆಲ್ಲುವ ವಿಶ್ವಾಸವಿದೆ ಅಂತ ತಿಳಿಸಿದ್ದಾರೆ.

ಕೊಡಗು: ಕಾಂಗ್ರೆಸ್ ಅಭ್ಯರ್ಥಿ ಮಂತರ್‌ಗೆ ಜಿವಿಜಯ ಮುನಿಸಿನ ಬಿಸಿ, ಮತಗಳ ವಿಭಜನೆ ಆಗುವ ಆತಂಕ..!

ಕೊಡಗಿನಲ್ಲಿ ಪ್ರವಾಹ, ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಸಾಮಾಜಿಕ ಸೇವೆ ಮಾಡಿದ್ದೇನೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅರಕಲಗೂಡು ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದವರು. ಇಲ್ಲಿಗೆ ಯಾಕೆ ಬಂದಿದ್ದಾರೋ ಗೊತ್ತಿಲ್ಲ. ಅವರು ಕ್ಷೇತ್ರದ ಅಭಿವೃದ್ಧಿಗೆ ಬದಲಾಗಿ ತಮ್ಮ ಅಭಿವೃದ್ಧಿಗಾಗಿ ಬಂದಿದ್ದಾರೆ. ಪಿಕ್ ನಿಕ್ ಅಭ್ಯರ್ಥಿಯನ್ನು ಕ್ಷೇತ್ರ ಜನರು ಒಪ್ಪಿಕೊಳ್ಳುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ತಂದೆ ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದರೆ, ಮಗ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ತಂದೆ ರಾತ್ರಿ ಕಾಂಗ್ರೆಸ್ ಅದರೆ ಮಗ ಜೆಡಿಎಸ್ ಆಗುತ್ತಾರೆ ಎಂದು ಲೇವಡಿ ಮಾಡಿದರು. 

ಇನ್ನು ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಲವು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಆದರೂ ಅವರ ತಮ್ಮನೊಂದಿಗೂ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೆ ಕಾರಣ ಬಿಜೆಪಿ ನನ್ನ ನಾಮಪತ್ರ ತಿರಸ್ಕೃತವಾಗುವಂತೆ ಮಾಡುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಪ್ಪಚ್ಚು ರಂಜನ್ ಡಿ.ಕೆ. ಶಿವಕುಮಾರ್ ಅವರು ಅಕ್ರಮವಾಗಿ ಹಣ ಸಂಪಾದಿಸಿರುವ ಬಗ್ಗೆ ಇಡಿ ಮತ್ತು ಐಟಿಗಳು ತನಿಖೆ ನಡೆಸಿವೆ. ತನಿಖೆ ವೇಳೆ ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿದ್ದು ಪತ್ತೆಯಾಗಿತ್ತು. ಹೀಗಾಗಿ ಐಟಿ ಮತ್ತು ಇಡಿ ಸಂಸ್ಥೆಗಳು ಅದನ್ನು ವಿಚಾರಣೆ ನಡೆಸುತ್ತಿವೆ. ಆದರೆ ನಾಮಪತ್ರ ಪರಿಶೀಲನೆ ವಿಷಯ ಇರುವುದು ಚುನಾವಣಾ ಆಯೋಗದಲ್ಲಿ. ಚುನಾವಣಾ ಆಯೋಗಕ್ಕೆ, ಐಟಿ, ಇಡಿ ಸಂಸ್ಥೆಗಳಿಗೂ ಯಾವುದೇ ಸಂಬಂಧವಿಲ್ಲ. ಹೀಗಿರುವ ಡಿ.ಕೆ ಶಿವಕುಮಾರ್ ಮಾಡಿರುವ ಆರೋಪಗಳು ಸುಳ್ಳು ಎಂದಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ನಾಮಪತ್ರ ಸಲ್ಲಿಸುವ ವೇಳೆ ಅಫಿಡೆವಿಟ್ಗಳಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿರಬಹುದು. 

Kodagu: 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಒಗ್ಗೂಡಿಸಿ ಶಾಸಕ ಬೋಪಯ್ಯ ವಿರುದ್ಧ ಪೊನ್ನಣ್ಣ ಶಕ್ತಿ ಪ್ರದರ್ಶನ!

ಹೀಗಾಗಿ ತಮ್ಮನಿಂದ ನಾಮಪತ್ರ ಸಲ್ಲಿಸಿರುತ್ತಾರೆ. ಈ ಸತ್ಯವನ್ನು ಹೇಳುವ ಬದಲು ಪಕ್ಷದ ಮೇಲೆ ಇಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!