ನಾನು ಸಚಿವ ಸ್ಥಾನದ ಆಸೆ ಬಿಟ್ಟಾಗಿದೆ: ಕೆ.ಎಸ್‌.ಈಶ್ವರಪ್ಪ

By Kannadaprabha NewsFirst Published Feb 14, 2023, 5:20 AM IST
Highlights

ನಾನು ಸಚಿವ ಸ್ಥಾನದ ಆಸೆ ಬಿಟ್ಟಾಗಿದೆ. ಇನ್ನು ಮುಂದೆ ಪಕ್ಷ ಸಂಘಟನೆಗೆ ಒತ್ತು ಕೊಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರು (ಫೆ.14): ನಾನು ಸಚಿವ ಸ್ಥಾನದ ಆಸೆ ಬಿಟ್ಟಾಗಿದೆ. ಇನ್ನು ಮುಂದೆ ಪಕ್ಷ ಸಂಘಟನೆಗೆ ಒತ್ತು ಕೊಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಹಾಗೂ ಕೇಂದ್ರದ ನಾಯಕರು ಮುಂದೆ ಸಚಿವ ಸ್ಥಾನ ನೀಡುವುದಾಗಿ ಸ್ಪಷ್ಟವಾಗಿ ಹೇಳಿದ್ದರು. ಬಿಜೆಪಿ ಕಾರ್ಯಕರ್ತನಾಗಿ ನಾನು ನನ್ನ ಭಾವನೆಯನ್ನು ಅವರ ಬಳಿ ಹೇಳಿದ್ದೆ. 

ಇದೀಗ ಅವರ ಅಭಿಪ್ರಾಯ ಪಡೆದು ವಿಧಾನಸೌಧಕ್ಕೆ ಬಂದಿದ್ದೇನೆ. ಮಂತ್ರಿ ಸ್ಥಾನದ ಆಸೆ ಬಿಟ್ಟಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಎಲ್ಲಾ ಪ್ರಯತ್ನ ಮಾಡುತ್ತೇನೆ ಎಂದರು. ಪಕ್ಷ ಹಾಗೂ ಸರ್ಕಾರಕ್ಕೆ ಕಿರಿಕಿರಿ ಉಂಟು ಮಾಡಲು ಇಷ್ಟಪಡುವುದಿಲ್ಲ. ನಾನು 1989ರದಿಂದ ಇಲ್ಲಿಯವರೆಗೆ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ. ಮಂತ್ರಿ, ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈ ಸ್ಥಾನಗಳು ಕೇಳಿ ಪಡೆದಿದ್ದಲ್ಲ. ಪಕ್ಷ ನೀಡಿದ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ ಎಂದು ತಿಳಿಸಿದರು.

Latest Videos

ಅದಾನಿ ಆದಾಯ ಹೆಚ್ಚಳ ಸುಪ್ರೀಂ ಕೋರ್ಟ್‌ ಜಡ್ಜ್‌ ನೇತೃತ್ವದಲ್ಲಿ ತನಿಖೆ ಆಗಲಿ: ಬಿ.ಕೆ.ಹರಿಪ್ರಸಾದ್‌

ಸಿಡಿ ರಾಜಕಾರಣ ರಾಜ್ಯಕ್ಕೆ ದೊಡ್ಡ ಕಳಂಕ: ಸಿಡಿ ರಾಜಕಾರಣ ಕರ್ನಾಟಕ ರಾಜ್ಯಕ್ಕೆ ದೊಡ್ಡ ಕಳಂಕ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ರಮೇಶ್‌ ಜಾರಕಿಹೊಳಿ ಅವರು ತಮ್ಮ ವಿಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದ್ದು, ಇದಕ್ಕೆ ತಮ್ಮ ಸಹಮತ ಇದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಹಿಂದಿನಿಂದಲೂ ಇದೊಂದು ಕೆಟ್ಟಪದ್ಧತಿಯಾಗಿದೆ. ಜಾರಕಿಹೊಳಿ ಅವರ ಪ್ರಕರಣದ ಬಗ್ಗೆ ತನಿಖೆ ನಡೆಸಿ ದುಷ್ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ವಿಐಎಸ್‌ಎಲ್‌ ಕಾರ್ಖಾನೆ ಉಳಿವಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ನಿರಂತರವಾಗಿ ಪ್ರಯತ್ನಿಸಿದ್ದಾರೆ. ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಕಾರ್ಖಾನೆ ಕಾರ್ಮಿಕ ಮುಖಂಡರು ಅನೇಕ ಬಾರಿ ದೆಹಲಿಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದಾರೆ. ಕಾರ್ಖಾನೆ ಉಳಿಸಲು ಶಕ್ತಿಮೀರಿ ಪ್ರಯತ್ನಿಸಿದ್ದಾರೆ ಎಂದರು. ಆದರೆ, ದೇಶದ 80 ರೋಗಗ್ರಸ್ಥ ಕಾರ್ಖಾನೆಗಳನ್ನು ಮುಚ್ಚುವ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಅದರಲ್ಲಿ ವಿಐಎಸ್‌ಎಲ್‌ ಕೂಡ ಇದೆ. 

ನವ ಕರ್ನಾಟಕ ನಿರ್ಮಾಣಕ್ಕೆ ಬಿಜೆಪಿ ಪ್ರಣಾಳಿಕೆ: ಸಚಿವ ಸುಧಾಕರ್‌

ಇದು ಭದ್ರಾವತಿಗೆ ಮಾತ್ರ ಸೀಮಿತವಲ್ಲ ಎಂದರಲ್ಲದೇ, ಈಗಲೂ ಈ ಕಾರ್ಖಾನೆಯನ್ನು ಉಳಿಸಲು ಆದಷ್ಟುಪ್ರಯತ್ನ ಮುಂದುವರಿಸಿದ್ದೇವೆ ಎಂದು ಹೇಳಿದರು. ಭದ್ರಾವತಿಯಲ್ಲಿ ‘ವಿಐಎಸ್‌ಎಲ್‌ ಉಳಿಸಿ’ ಹೆಸರಿನಲ್ಲಿ ನಡೆದಿರುವ ಹೋರಾಟದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಈ ರೀತಿ ಭಾಗವಹಿಸುವುದು ತಪ್ಪಲ್ಲ. ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ ಎಂದು ಪ್ರತಿಕ್ರಿಯಿಸಿದರು.

click me!