ನಾನು ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ವಿ.ಶ್ರೀನಿವಾಸಪ್ರಸಾದ್‌

Published : Jul 24, 2023, 01:30 AM IST
ನಾನು ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ವಿ.ಶ್ರೀನಿವಾಸಪ್ರಸಾದ್‌

ಸಾರಾಂಶ

2024ಕ್ಕೆ ನಾನು ರಾಜಕಾರಣಕ್ಕೆ ಬಂದು 50 ವರ್ಷವಾಗಲಿದೆ. ಅದರೊಂದಿಗೆ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಪುನರುಚ್ಚರಿಸಿದ ಸಂಸದ ವಿ.ಶ್ರೀನಿವಾಸಪ್ರಸಾದ್‌ 

ಮೈಸೂರು(ಜು.24): ನನ್ನ 50 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಎಂದೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದು ಮುತ್ಸದ್ದಿ, ಸಂಸದ ವಿ.ಶ್ರೀನಿವಾಸಪ್ರಸಾದ್‌ ಪ್ರತಿಪಾದಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ಕ್ಕೆ ನಾನು ರಾಜಕಾರಣಕ್ಕೆ ಬಂದು 50 ವರ್ಷವಾಗಲಿದೆ. ಅದರೊಂದಿಗೆ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಪುನರುಚ್ಚರಿಸಿದರು.
ಈವರೆಗೂ 14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ. 9 ಬಾರಿ ಲೋಕಸಭೆ, 5 ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, 6 ಬಾರಿ ಸಂಸದನಾಗಿ, 2 ಬಾರಿ ಶಾಸಕನಾಗಿ ಆಯ್ಕೆಯಾ ಗಿದ್ದೇನೆ. ಕೇಂದ್ರ ಮತ್ತು ರಾಜ್ಯದಲ್ಲಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಡಾ.ಅಂಬೇಡ್ಕರ್‌ ಹೇಳಿದಂತೆ ಎಲ್ಲೂ ಕಪ್ಪು ಚುಕ್ಕೆ ಇಲ್ಲದೇ ರಾಜಕಾರಣ ಮಾಡಿದ್ದೇನೆ. ಯಾವುದೇ ಸಂದರ್ಭದಲ್ಲೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದು ಅವರು ಹೇಳಿದರು.

ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವಂತೆ ನಾನು ಹೇಳಿಲ್ಲ: ಸುನಿಲ್‌ ಬೋಸ್‌

ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೆ. ಆದರೆ, ಚುನಾವಣಾ ರಾಜಕೀಯ ಜೀವನವು ಸೋಲಿನಿಂದ ಅಂತ್ಯ ಆಗಬಾರದೆಂಬ ಕಾರಣಕ್ಕೆ ಮತ್ತೆ ಸ್ಪರ್ಧಿಸ ಬೇಕಾಯಿತು. ನನ್ನ ಹಠ, ಛಲ ಈಡೇರಿಸಲು ಶ್ರಮ ಹಾಕಿ ಗೆದ್ದಿದ್ದೇನೆ. ನನ್ನ ರಾಜಕೀಯ ಜೀವನ ತೃಪ್ತಿಕರವಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯತೀಂದ್ರ ಹೇಳಿಕೆಯಿಂದ ರಾಜ್ಯದಲ್ಲಿ ಮತ್ತೆ ಸಿಎಂ ಕುರ್ಚಿ ಕಿಚ್ಚು
ಡೀಮ್ಡ್‌ ಅರಣ್ಯ ಪ್ರದೇಶದ ಪುನರ್‌ ಪರಿಶೀಲನೆಗಾಗಿ ಸಮಿತಿ: ಸಚಿವ ಈಶ್ವರ್‌ ಖಂಡ್ರೆ