ನಾನು ಒಕ್ಕಲಿಗ ನಾಯಕ ಎಂದು ಯಾವತ್ತು ಹೇಳಿದ್ದೇನೆ ಅಶೋಕಣ್ಣ? ನೀನು ಕನಕಪುರಕ್ಕೆ ಬಂದು ಎಷ್ಟು ಡೆಪಾಸಿಟ್ ತೆಗೆದುಕೊಂಡೆ? ನನ್ನ ತಮ್ಮ ಸೋತಿರುವುದು ನಿಜ. ಅದಕ್ಕೆ ಕಾರಣವಾದ ಒಂದೊಂದೇ ಕೊಂಡಿಗಳು ಕಳಚಿಕೊಳ್ಳುತ್ತಿವೆಯಲ್ಲವೇ? ಎಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು(ನ.26): 'ನಾನು ಒಕ್ಕಲಿಗ ನಾಯಕ ಎಂದು ಎಲ್ಲೂ ಹೇಳಿಲ್ಲ. ನನಗೆ ನನ್ನ ತಮ್ಮನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂಬುದು ಸತ್ಯ. ಆದರೆ ನನ್ನ ತಮ್ಮನ ಸೋಲಿಗೆ ಕಾರಣವಾದ ಕೊಂಡಿಗಳು ಒಂದೊಂದಾಗಿ ಕಳಚಿಕೊಳ್ಳುತ್ತಿಲ್ಲವೇ? ಆರ್. ಆರ್‌ನಗರ, ಚನ್ನಪಟ್ಟಣ ಏನೇನಾಗಿದೆ' ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ತಮ್ಮನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಚನ್ನಪಟ್ಟಣ ಗೆದ್ದ ಮಾತ್ರಕ್ಕೆ ಡಿ.ಕೆ. ಶಿವಕುಮಾರ್ ಒಕ್ಕಲಿಗ ನಾಯಕರೇ?' ಎಂಬ ಆರ್. ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದರು. 'ನಾನು ಒಕ್ಕಲಿಗ ನಾಯಕ ಎಂದು ಯಾವತ್ತು ಹೇಳಿದ್ದೇನೆ ಅಶೋಕಣ್ಣ? ನೀನು ಕನಕಪುರಕ್ಕೆ ಬಂದು ಎಷ್ಟು ಡೆಪಾಸಿಟ್ ತೆಗೆದುಕೊಂಡೆ? ನನ್ನ ತಮ್ಮ ಸೋತಿರುವುದು ನಿಜ. ಅದಕ್ಕೆ ಕಾರಣವಾದ ಒಂದೊಂದೇ ಕೊಂಡಿಗಳು ಕಳಚಿಕೊಳ್ಳುತ್ತಿವೆಯಲ್ಲವೇ?' ಎಂದರು.
ನಾನು ಸಿಎಂ ಆಗಬೇಕೆಂಬ ಕೂಗು ಎದ್ದಿರಬಹುದು, ಅದಿಲ್ಲಿ ಗೌಣ: ಡಿಕೆಶಿ
ಕಾಲುವೆಗಳಿಂದ ಅಕ್ರಮ ನೀರು ಎತ್ತುವಳಿಗೆ ತಡೆ: ಡಿ.ಕೆ. ಶಿವಕುಮಾರ್
ಬೆಂಗಳೂರು: 'ರೈತರು ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಕರ್ನಾಟಕ ನೀರಾವರಿ (ತಿದ್ದುಪಡಿ) ನಿಯಮ-2024 ಮಾಡಿದ್ದೇವೆ. ಇದನ್ನು ಜಾರಿಗೊಳಿಸಲು ಕಾರ್ಯಪಡೆ ರಚನೆ ಮಾಡುತ್ತಿದ್ದು, ರೈತರಲ್ಲಿ ಅರಿವು ಮೂಡಿಸಿ ಹಂತ-ಹಂತವಾಗಿ ನೂತನ ಕಾನೂನು ಜಾರಿಗೊಳಿಸಿ. ಏಕಾಏಕಿ ನುಗ್ಗಬೇಡಿ, ಜಾಣೆಯಿಂದ ತಿದ್ದುಪಡಿ ಜಾರಿಗೆ ತನ್ನಿ' ಎಂದು ನೀರಾವರಿ ಇಲಾಖೆ ಎಂಜಿನಿಯರ್‌ಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದ್ದಾರೆ.
ಕರ್ನಾಟಕ ನೀರಾವರಿ (ತಿದ್ದುಪಡಿ) ಅಧಿನಿಯಮ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೀರಿನ ಕಾಲುವೆಗಳ ಪಕ್ಕದಲ್ಲಿ ಅನುಮತಿ ಇಲ್ಲದೆ ಬೋರ್‌ವೆಲ್ ಕೊರೆಯುವಂತಿಲ್ಲ ಎಂಬುದು ಸೇರಿ ಹಲವು ನಿಯಮ ಜಾರಿ ಮಾಡಿದ್ದೇವೆ. ಕಾನೂನು ವಿರುದ್ದ ಜನರನ್ನು ಎತ್ತಿಕಟ್ಟುವ ಪ್ರಯತ್ನ ನಡೆಯಲಿದೆ. ನಿಮ್ಮ ಮೇಲೆ ರಾಜಕೀಯಒತ್ತಡಹೆಚ್ಚಾಗಲಿದೆ. ಯಾವುದಕ್ಕೂ ಬಗ್ಗದೆ ತಾಳ್ಮೆಯಿಂದ ಕೆಲಸ ಮಾಡಿ ಎಂದು ಸಲಹೆ ನೀಡಿದರು.
ಟಾಸ್ಕ್ ಫೋರ್ಸ್ ರಚನೆ: ಕಾಲುವೆಗಳಿಂದ ಅಕ್ರಮವಾಗಿ ನೀರನ್ನು ಎತ್ತುವುದನ್ನು ತಡೆಯಲುನೀರಾವರಿ ಇಲಾಖೆ ಅಧಿಕಾರಿಗಳ ಜತೆಗೆ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಇಂಧನ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದರು.
ಬಿಜೆಪಿ-ಜೆಡಿಎಸ್ ಸಹಕಾರದಿಂದಲೇ ನಮಗೆ ಜಯ ಸಿಕ್ಕಿದೆ: ಡಿಕೆಶಿ
ಕನಕಪುರ: ಚನ್ನಪಟ್ಟಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಕೇವಲ ಹದಿನಾರು ಸಾವಿರ ಮತಗಳು ಬಂದಿದ್ದವು. ಲೋಕಸಭಾ ಚುನಾವಣೆಯಲ್ಲಿ ಮತ ಗಳಿಕೆ ಹೆಚ್ಚಾಗಿದ್ದು, ಈ ಉಪ ಚುನಾವಣೆಯಲ್ಲಿ ಬಿಜೆಪಿ, ಜನತಾದಳದ ನಾಯಕರಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲ ದೊರೆತ ಕಾರಣ ನಮಗೆ ಇಷ್ಟೊಂದು ಮತಗಳು ಬಂದಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಚನ್ನಪಟ್ಟಣ ಬೈಎಲೆಕ್ಷನ್: ಡಿಕೆಶಿಗೆ ಹೆಚ್ಚಿದ ಪ್ರಾಬಲ್ಯ, ಕುಮಾರಸ್ವಾಮಿಗೆ ಭಾರೀ ಹಿನ್ನಡೆ!
ನಗರದ ಆರ್‌ಇಎಸ್ ಮೈದಾನದಲ್ಲಿ ಕನಕಾಂಬರಿ ಮಹಿಳಾ ಒಕ್ಕೂಟ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರಾಮನಗರ ಜಿಲ್ಲೆಯನ್ನು ಜೆಡಿಎಸ್ ಮುಕ್ತ ಮಾಡುವುದು ನಮಗೆ ಮುಖ್ಯವಲ್ಲ. 19 ಇದ್ದ ಆ ಪಕ್ಷದ ಶಾಸಕರ ಸಂಖ್ಯೆ 18ಕ್ಕೆ ಇಳಿದಿರುವುದು ಸಮಾಧಾನ ತಂದಿದೆ ಎಂದು ಹೇಳಿದರು.
ಅಶ್ವತ್ಥ ನಾರಾಯಣ್ ದಡ್ಡರೇ:
ಕಾಂಗ್ರೆಸ್ ಗೆಲುವಿಗೆ ರಾಜ್ಯ ಬಿಜೆಪಿ ನಾಯಕರು ಬೆಂಬಲ ನೀಡಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಳೆದ ಶನಿವಾರದಂದು ಬಿಜೆಪಿ ನಾಯಕ ಅಶ್ವತ್ಥ ನಾರಾಯಣ ಅವರು ‘ನನಗೆ ಮೊದಲೇ ತಿಳಿದಿತ್ತು, ಯೋಗೇಶ್ವರ್ ಗೆಲ್ಲುತ್ತಾರೆ’ ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವರು ಈ ರೀತಿ ಹೇಳಲು ದಡ್ಡರೇ? ಅವರಿಗೆ ಈ ಕ್ಷೇತ್ರದ ಜನರ ನಾಡಿಮಿಡಿತ ಗೊತ್ತಿರುವುದರಿಂದ ಹೇಳಿದ್ದು ಸತ್ಯವಲ್ಲವೇ ಎಂದು ಕೇಳಿದರು.