ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಶಾಸಕ ಬಸನಗೌಡ ದದ್ದಲ್‌

Published : Jun 09, 2024, 07:49 AM IST
ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಶಾಸಕ ಬಸನಗೌಡ ದದ್ದಲ್‌

ಸಾರಾಂಶ

ಪ್ರಕರಣದ ಆರೋಪಿ ನಂ.8 ಅವರೊಂದಿಗೆ ಶಾಸಕ ದದ್ದಲ್‌ ವಾಟ್ಸ್‌ ಆಪ್‌ ಚಾಟಿಂಗ್‌ ಮಾಡಿದ್ದಾರೆ ಎಂದು ಮೂರು ಪುಟಗಳ ಹೇಳಿಕೆಯನ್ನು ಆರೋಪಿ ಪರ ವಕೀಲ ಪರಶುರಾಮ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಹೇಳಿಕೆಯಲ್ಲಿ ತಿಳಿಸಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ರಾಯಚೂರು (ಜೂ.09): ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರು. ಹಗರಣದಲ್ಲಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರ ಹೆಸರು ತಳಕು ಹಾಕಿಕೊಂಡಿದ್ದು, ಶಾಸಕರು ಇದನ್ನು ಸಂಪೂರ್ಣವಾಗಿ ಅಲ್ಲಗೆಳೆದಿದ್ದಾರೆ. 

ಪ್ರಕರಣದ ಆರೋಪಿ ನಂ.8 ಅವರೊಂದಿಗೆ ಶಾಸಕ ದದ್ದಲ್‌ ವಾಟ್ಸ್‌ ಆಪ್‌ ಚಾಟಿಂಗ್‌ ಮಾಡಿದ್ದಾರೆ ಎಂದು ಮೂರು ಪುಟಗಳ ಹೇಳಿಕೆಯನ್ನು ಆರೋಪಿ ಪರ ವಕೀಲ ಪರಶುರಾಮ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಹೇಳಿಕೆಯಲ್ಲಿ ತಿಳಿಸಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಅಂಶವನ್ನಿಟ್ಟುಕೊಂಡು ಪ್ರತಿಪಕ್ಷದವರು ನಿಗಮದ ಅಧ್ಯಕ್ಷರಾಗಿರುವ ಬಸನಗೌಡ ದದ್ದಲ್ ಅವರ ಅನುಮತಿ ಇಲ್ಲದೇ ಇಷ್ಟೊಂದು ಹಣ ಹೇಗೆ ವರ್ಗಾವಣೆಯಾಗಲು ಸಾಧ್ಯ? ಸಚಿವ ನಾಗೇಂದ್ರ ಅವರೊಂದಿಗೆ ದದ್ದಲ್‌ ಅವರು ಸಹ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ನಿಗಮಗಳಿಂದ ಪ್ರಸ್ತಾವನೆ ಬಂದರೆ ಬಸ್‌ ಟಿಕೆಟ್‌ ದರ ಏರಿಕೆ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ

ದಾಖಲೆಯಿದ್ದರೆ ತನಿಖಾ ಸಂಸ್ಥೆಗೆ ನೀಡಿ: ಹಗರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಇದಕ್ಕೆ ಸ್ಪಂದಿಸಿರುವ ಶಾಸಕ ಹಾಗೂ ನಿಗದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರು, ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ನನ್ನ ಪಾತ್ರ ಇರುವ ದಾಖಲೆಗಳಿದ್ದರೆ ತನಿಖಾ ಸಂಸ್ಥೆಗೆ ಒದಗಿಸುವಂತೆ ಪ್ರತಿಪಕ್ಷಗಳಿಗೆ ತಾಕೀತು ಮಾಡಿದ್ದಾರೆ. ನಾನು ಅಧ್ಯಕ್ಷನಾದ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಹೀಗಾಗಿ ಈವರೆಗೂ ಯಾವುದೇ ಹಣದ ವಹಿವಾಟು ನಡೆದಿಲ್ಲ. ಈ ಅಕ್ರಮಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. 

ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ದುರುದ್ದೇಶದಿಂದ ನನ್ನ ಹೆಸರು ತಳಕು ಹಾಕುವ ಮೂಲಕ ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ.  ಪರಿಶಿಷ್ಟ ಪಂಗಡ ಮೀಸಲಾತಿಯಡಿ ಗೆಲುವು ಸಾಧಿಸಿರುವ ನಾನು ಯಾವುದೇ ಕಾರಣಕ್ಕೂ ಎಸ್‌ಟಿ ಸಮುದಾಯಕ್ಕೆ ಎರಡು ಬಗೆಯುವುದಿಲ್ಲ. ವಾಲ್ಮೀಕಿ ಸಮಾಜ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಎಂದು ದ್ರೋಹ ಬಗೆಯುವ ಚಿಂತನೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಮೇರೆಗೆ ಸಿಬಿಐ ಈಗಾಗಲೇ ಅಕ್ರಮ ಹಣ ವರ್ಗಾವಣೆ ತನಿಖೆ ಶುರುವಾಗಿದೆ. ಎಸ್‌ಐಟಿ, ಸಿಬಿಐ ತನಿಖಾ ತಂಡಗಳು ಐದು ಜನರನ್ನು ಬಂಧಿಸಿವೆ. 

ವಾಲ್ಮೀಕಿ ನಿಗಮ ಕೇಸ್‌ ತನಿಖೆಗೆ ಸಿಬಿಐನಿಂದ ಪತ್ರ ಬಂದಿಲ್ಲ: ಸಚಿವ ಪರಮೇಶ್ವರ್‌

ನಿಗಮದ ಹಣ ಯಾರೇ ಕಬಳಿಸಲು ಯತ್ನಿಸಿದರೂ ತನಿಖೆಯಲ್ಲಿ ಸತ್ಯ ಬಯಲಾಗಲಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಲಿದೆ. ಇಲ್ಲಿ ಯಾರನ್ನು ರಕ್ಷಿಸುವ ಮಾತೇ ಇಲ್ಲ. ನನ್ನ ವಿರುದ್ಧ ಆರೋಪ ಮಾಡುವವರ ಬಳಿ ನಾನು ತಪ್ಪು ಮಾಡಿರುವ ದಾಖಲೆಗಳಿದ್ದರೆ ತನಿಖಾ ತಂಡಕ್ಕೆ ಕೊಡಲಿ. ಇದರಿಂದ ತನಿಖೆಗೆ ಅನುಕೂಲವಾಗಲಿದೆ. ಇದರಿಂದ ಸತ್ಯಾಂಶ ಹೊರಬರಲು ನೆರವಾಗಲಿದೆ. ಈ ಪ್ರಕರಣದಲ್ಲಿ ನಿಗಮದ ಅಧ್ಯಕ್ಷನಾಗಿ ನನ್ನ ಯಾವುದೇ ಪಾತ್ರ ಇಲ್ಲ ಎಂದು ಶಾಸಕ, ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರು ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ