ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಪಕ್ಷದ ರಾಜ್ಯ ನಾಯಕರು ಬ್ಯಾರಿಕೇಡ್‌ನ ಹೊರಗೆ ನಿಲ್ಲುವಂತಹ ಶೋಚನೀಯ ಪರಿಸ್ಥಿತಿಯಲ್ಲಿದೆ ರಾಜ್ಯ ಬಿಜೆಪಿ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಉಡುಪಿ (ಆ.27): ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಪಕ್ಷದ ರಾಜ್ಯ ನಾಯಕರು ಬ್ಯಾರಿಕೇಡ್‌ನ ಹೊರಗೆ ನಿಲ್ಲುವಂತಹ ಶೋಚನೀಯ ಪರಿಸ್ಥಿತಿಯಲ್ಲಿದೆ ರಾಜ್ಯ ಬಿಜೆಪಿ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಶನಿವಾರ ಉಡುಪಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಒಳಗೆ ಏನಾಗುತ್ತಿದೆ ಎಂದು ನಾನು ಹೆಚ್ಚು ಕಮೆಂಟ್ ಮಾಡುವುದಿಲ್ಲ, ಆದರೆ ಒಂದು ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಇನ್ನು ಸಾಧ್ಯ ಆಗಿಲ್ಲ, ಎಂದರೆ ರಾಜ್ಯದಲ್ಲಿ ಬಿಜೆಪಿ ಬಹಳ ದಯನೀಯ ಸ್ಥಿತಿಯಲ್ಲಿದೆ.
ಪ್ರಧಾನಿ ಅವರು ರಾಜ್ಯಕ್ಕೆ ಬಂದಾಗಲೂ ಅವರು ತಮ್ಮ ಪಕ್ಷದ ನಾಯಕರನ್ನು ಭೇಟಿ ಆಗದೆ ಇರುವುದು, ರಾಜ್ಯದಲ್ಲಿ ಪಕ್ಷದ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ ಎಂದರು. 120 ಸ್ಥಾನ ಗೆದ್ದಿದ್ದ ಬಿಜೆಪಿ ಇಂದು ದಯಾನೀಯ ಸ್ಥಿತಿಗೆ ಬಂದು ನಿಂತಿದೆ, ಬಿಜೆಪಿಯಲ್ಲಿ ಮಿಸ್ ಹ್ಯಾಂಡಲಿಂಗ್ ಮತ್ತು ಮಿಸ್ ಮ್ಯಾನೇಜ್ಮೆಂಟ್ ಇದೆ, ನಮ್ಮಂತಹ ನಾಯಕರನ್ನೇ ಪಕ್ಷದಿಂದ ಹೊರಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
undefined
ಇಸ್ರೋ ವಿಜ್ಞಾನಿಗಳು ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದು ವಿಪರ್ಯಾಸ: ನಟ ಚೇತನ್
ಲೀಡರ್ ಲೆಸ್ ಪಾರ್ಟಿ: ಕರ್ನಾಟಕ ಬಿಜೆಪಿ ಲೀಡರ್ ಲೆಸ್ ಆಗಿದೆ, ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಲು ಇನ್ನೂ ಸಾಧ್ಯವಾಗಿಲ್ಲ, ಬಿಜೆಪಿಗೆ ಒಬ್ಬ ನಾಯಕ ಎಂಬುದು ಇಲ್ಲ ಎಂದು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ ಶೆಟ್ಟರ್, ಬೇರೆ ಬೇರೆ ಕಡೆ ಕಾಂಗ್ರೆಸ್ ನಾಯಕರನ್ನು ಬಿಜೆಪಿಯವರು ಭೇಟಿಯಾಗುತ್ತಿದ್ದಾರೆ. ಬಿಜೆಪಿ ಒಳಗೆ ಸಾಕಷ್ಟು ಜನ ನೊಂದಿದ್ದಾರೆ, ಸಂಕಟಪಡುತ್ತಿದ್ದಾರೆ, ಬಿಜೆಪಿಯನ್ನು ಬಿಟ್ಟು ಹೊರಗೆ ಬರಲು ಬಹಳಷ್ಟು ಜನ ತಯಾರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತದೆ ಎಂದರು.
ಲೋಕಸಭಾ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಕಾಂಗ್ರೆಸ್ ಜಯಭೇರಿ ಬಾರಿಸಲಿದೆ, ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ, ಸದ್ಯದ ಪರಿಸ್ಥಿತಿ ನೋಡಿದ್ರೆ ೧೫ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ. ಕಾಂಗ್ರೆಸ್ ಸೇರಲು ರಾಜ್ಯದ ಎಲ್ಲ ತಾಲೂಕು ಜಿಯ ಜನ ಉತ್ಸುಕರಾಗಿದ್ದಾರೆ ಎಂದರು.
ನಾನು ಒಬ್ಬ ಬಡಪಾಯಿ, ಬೆನ್ನು ಹಿಂದೆ ಏಕೆ ಬಿದ್ದಿದ್ದೀರಿ?: ಜಗದೀಶ್ ಶೆಟ್ಟರ್
ನನಗೆ ಅಮಿತ್ ಶಾ ಅಥವಾ ಯಾರೂ ಕರೆ ಮಾಡಿಲ್ಲ: ಜಗದೀಶ್ ಶೆಟ್ಟರ್ ಅವರಿಗೆ ಅಮಿತ್ ಶಾ ನನಗೆ ಕರೆ ಮಾಡಿದ್ದಾರೆ ಎಂಬ ಚರ್ಚೆಗೆ ಪ್ರತಿಕ್ರಿಯಿದ ಅವರು, ನನಗೆ ಈವರೆಗೆ ಅಮಿತ್ ಶಾ, ಮತ್ತೊಬ್ಬರು ಯಾರು ಈವರೆಗೆ ಕರೆ ಮಾಡಿಲ್ಲ, ಕರೆ ಬಾರದೆ ಈ ಎಲ್ಲ ಚರ್ಚೆಗಳು ಯಾಕೆ, ಕರೆ ಮಾಡಿದರೆ ನಾನು ಮಾಧ್ಯಮಗಳಿಗೆ ತಿಳಿಸುತ್ತೇನೆ ಎಂದರು.