ಸ್ಪರ್ಧೆ ಬಗ್ಗೆ ನಾನೇನೂ ಹೇಳಲ್ಲ, ಕಾಲ ಕೂಡಿಬರಲಿ: ಡಿವಿಎಸ್‌

Published : Jan 02, 2024, 07:58 AM IST
ಸ್ಪರ್ಧೆ ಬಗ್ಗೆ ನಾನೇನೂ ಹೇಳಲ್ಲ, ಕಾಲ ಕೂಡಿಬರಲಿ: ಡಿವಿಎಸ್‌

ಸಾರಾಂಶ

‘ಈ ಹಂತದಲ್ಲಿ ನಾನು ಏನೂ ಹೇಳುವುದಿಲ್ಲ. ಕಾಲ ಕೂಡಿ ಬರಲಿ. ಏನಾಗುತ್ತದೆ ನೋಡೋಣ’ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಡಿ.ವಿ.ಸದಾನಂದಗೌಡ ಮಾರ್ಮಿಕವಾಗಿ ಹೇಳಿದ್ದಾರೆ.

ಬೆಂಗಳೂರು (ಜ.2) :  ‘ಈ ಹಂತದಲ್ಲಿ ನಾನು ಏನೂ ಹೇಳುವುದಿಲ್ಲ. ಕಾಲ ಕೂಡಿ ಬರಲಿ. ಏನಾಗುತ್ತದೆ ನೋಡೋಣ’ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಡಿ.ವಿ.ಸದಾನಂದಗೌಡ ಮಾರ್ಮಿಕವಾಗಿ ಹೇಳಿದ್ದಾರೆ.

ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ ಬಳಿಕ ಮತ್ತೆ ಸ್ಪರ್ಧಿಸುವಂತೆ ಪಕ್ಷದ ಹಲವು ಮುಖಂಡರು ಒತ್ತಾಯ ಮಾಡುತ್ತಿರುವ ಬಗ್ಗೆ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ರಾಜಕಾರಣದಲ್ಲಿ ಹೊಸಬರು ಬರಬೇಕು ಎಂಬ ಉದ್ದೇಶದಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಹೇಳಿದ್ದೆ. ಆದರೆ, ಪಕ್ಷದ ಎಲ್ಲ ನಾಯಕರು, ಕ್ಷೇತ್ರದ ಶಾಸಕರು ಮತ್ತೊಮ್ಮೆ ಸ್ಪರ್ಧಿಸಬೇಕು, ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ಒತ್ತಾಯ ಮಾಡಿದ್ದಾರೆ. ಆದರೆ, ಈ ಒತ್ತಡಗಳನ್ನು ಮೀರಿ ನಿಲ್ಲುವುದರಲ್ಲಿ ನಾನು ಯಶಸ್ವಿಯಾಗುತ್ತೇನೆಯೋ ಅಥವಾ ಇಲ್ಲವೋ ಎಂಬುದನ್ನು ಈಗ ಹೇಳಲು ಆಗುವುದಿಲ್ಲ ಎಂದರು. 

ಸರ್ಕಾರವನ್ನೇ ನಡುಗಿಸುತ್ತಿದ್ದ ಚಳವಳಿಗಳು ಇಂದು ಮಂಕು; ಕೇಸ್‌ ಮೇಲೆ ಕೇಸ್‌: ಹೋರಾಟಗಳ ಕಾವೇ ಇಳಿಕೆ!

ಕ್ಷೇತ್ರದ ವ್ಯಾಪ್ತಿಯ ಒಬ್ಬ ಕಾರ್ಯಕರ್ತನ ವಿರೋಧ ಇಲ್ಲದಂತೆ ನಡೆಸಿಕೊಂಡಿದ್ದೇನೆ. ನಾನು ಪ್ರಚಾರ ಪ್ರಿಯ ಅಲ್ಲ. ಒಂದು ಸಣ್ಣ ಕೆಲಸ ಮಾಡಿ ಅದನ್ನು ಮಾಧ್ಯಮಗಳಲ್ಲಿ ಪ್ರಚಾರ ಪಡೆಯುವಂಥ ವ್ಯಕ್ತಿ ನಾನಲ್ಲ. ಇದರಿಂದ ನಾನು ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದೇನೆ ಎಂದು ತಿಳಿದುಕೊಳ್ಳುವುದು ಬೇಡ. ನಾನೇನೋ ಬಹಳ ಹಿಂದೆಯೇ ತೀರ್ಮಾನ ತೆಗೆದುಕೊಂಡಿದ್ದೇನೆ. ಆದರೆ, ಪಕ್ಷದ ಹಿತದೃಷ್ಟಿ ಮತ್ತು ಕ್ಷೇತ್ರದ ಎಲ್ಲ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಬಗ್ಗೆ ಪಕ್ಷ ಸೂಕ್ತ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳುತ್ತದೆಯೇ ಹೊರತು ನಾನಲ್ಲ ಎಂದು ಹೇಳಿದರು.

ಕಾಂಗ್ರೆಸ್‌ನಿಂದ ಸ್ಪರ್ಧೆ ಸುಳ್ಳು; ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡೋಲ್ಲ: ಸೋಮಣ್ಣ ಸ್ಪಷ್ಟನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌