ಅಲ್ಪಸಂಖ್ಯಾತ ಮುಖಂಡರ ಹೊರಹಾಕಿದ್ದುಸರಿಯಲ್ಲ ಡಿಕೆಶಿಗೆ ಹೇಳಿರುವೆ: ಸತೀಶ್

Kannadaprabha News   | Kannada Prabha
Published : Apr 21, 2026, 08:46 AM IST
dk shivakumar satish jarkiholi

ಸಾರಾಂಶ

ಸಚಿವ ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗಿನ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದಲ್ಲಿ ಅಲ್ಪಸಂಖ್ಯಾತ ಮುಖಂಡರನ್ನು ಕಡೆಗಣಿಸಿರುವ ಬಗ್ಗೆ ಚರ್ಚಿಸಿದ್ದು, ಇದನ್ನು ಸರಿಪಡಿಸುವ ಭರವಸೆ ಡಿಕೆಶಿ ನೀಡಿದ್ದಾರೆ ಎಂದರು. 

ಬೆಳಗಾವಿ (ಏ.21) ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಯಾವುದೇ ರಾಜಕೀಯ ವಿಶೇಷತೆ ಇಲ್ಲ. ಅದು ಕೇವಲ ಸೌಜನ್ಯದ ಭೇಟಿ. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿಯಾಗುವುದು ಸಹಜ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಅಥವಾ ಪಕ್ಷದ ಸಂಘಟನೆ ದೃಷ್ಟಿಯಿಂದ ಅಲ್ಪಸಂಖ್ಯಾತ ಮುಖಂಡರನ್ನು ಪಕ್ಷದಿಂದ ದೂರವಿಟ್ಟಿದ್ದು ಅಥವಾ ಹೊರಹಾಕಿದ್ದು ಸರಿಯಲ್ಲ ಎಂಬ ತಮ್ಮ ಅಭಿಪ್ರಾಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ತಿಳಿಸಿದ್ದೇನೆ. ಈ ವಿಷಯದ ಕುರಿತು ಸುದೀರ್ಘವಾಗಿ ಚರ್ಚಿಸಿದ್ದು, ನಡೆದಿರುವ ಲೋಪದೋಷಗಳನ್ನು ಗಮನಿಸಿದ್ದೇನೆ. ಮುಂದಿನ ದಿನಗಳಲ್ಲಿ ಇದನ್ನು ಖಂಡಿತವಾಗಿಯೂ ಸರಿಪಡಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾಗಿ ತಿಳಿಸಿದರು.

ಪಕ್ಷವು ಎಲ್ಲ ಸಮುದಾಯಗಳನ್ನು ಒಳಗೊಂಡು ಹೋಗಬೇಕಾದ ಅಗತ್ಯವಿದೆ. ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಯಾಗಿದ್ದು, ಅವರಿಗೆ ಸೂಕ್ತ ಪ್ರಾತಿನಿಧ್ಯ ಮತ್ತು ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವಾಗಿದೆ ಎಂದರು.

ಶಾಸಕ ಎನ್.ಎ.ಹ್ಯಾರಿಸ್ ಮತ್ತು ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಇಂತಹ ಘಟನೆಗಳು ಸಹಜವಾಗಿ ನಡೆಯುತ್ತಿರುತ್ತವೆ. ಆದರೆ, ಈ ನಿರ್ದಿಷ್ಟ ದಾಳಿಯ ಬಗ್ಗೆ ತಮಗೆ ತಿಳಿದಿಲ್ಲ. ದಾಳಿ ನಡೆದರೆ ಕಾನೂನು ಹೋರಾಟ ಮಾಡಬೇಕಷ್ಟೇ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮಹಿಳಾ ಮೀಸಲಾತಿ ಬಿಲ್ ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಾಡಿರುವ ಭಾಷಣದ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಮೀಸಲಾತಿ ನೀಡುವ ಪ್ರಾಮಾಣಿಕ ಉದ್ದೇಶ ಸರ್ಕಾರಕ್ಕೆ ಇದ್ದಿದ್ದರೆ, ಕ್ಷೇತ್ರ ಪುನರ್ವಿಂಗಡಣೆ ಮತ್ತು ಜನಗಣತಿ ಕಡ್ಡಾಯಗೊಳಿಸಿರುವುದನ್ನು ಕೈ ಬಿಡಬೇಕಿತ್ತು. ಯಾವುದೇ ಷರತ್ತುಗಳಿಲ್ಲದೆ ತಕ್ಷಣವೇ ಜಾರಿಗೆ ತರಬಹುದಿತ್ತು. ಆದರೆ, ಇವೆರಡನ್ನೂ ಲಿಂಕ್ ಮಾಡಿದ್ದೇ ಬಿಲ್ ಸೋಲಲು ಕಾರಣವಾಗಿದೆ. ಪ್ರಧಾನಿ ಮೋದಿ ಅವರು ಏನು ಭಾಷಣ ಮಾಡಿದರೂ ಈಗ ಜನರಿಗೆ ಅದರ ಹಿಂದಿನ ಸಂಚು ಅರ್ಥವಾಗುತ್ತಿದೆ. ಇದು ಕೇವಲ ಚುನಾವಣೆಗಾಗಿ ಮಾಡಿದ ಗಿಮಿಕ್ ಎಂಬ ನಿಜ ಸಂದೇಶ ಜನರಿಗೆ ತಲುಪಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೇ 9ಕ್ಕೆ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ? ಕೇಂದ್ರ ಸಚಿವ ಅಮಿತ್‌ ಶಾ ಭಾಗಿ ಸಾಧ್ಯತೆ
Karnataka News Live: ಅಲ್ಪಸಂಖ್ಯಾತ ಮುಖಂಡರ ಹೊರಹಾಕಿದ್ದುಸರಿಯಲ್ಲ ಡಿಕೆಶಿಗೆ ಹೇಳಿರುವೆ - ಸತೀಶ್