ಮುಖ್ಯಮಂತ್ರಿ ಸ್ಥಾನದ ರೇಸ್‌ನಿಂದ ಹೊರ ಬಂದಿದ್ದೇನೆ: ಸಚಿವ ಸತೀಶ್‌ ಜಾರಕಿಹೊಳಿ

Published : Oct 16, 2025, 05:35 AM IST
Satish Jarkiholi

ಸಾರಾಂಶ

ನಾನು ಕಳೆದ ಒಂದು ವರ್ಷದ ಹಿಂದೆಯೇ ಮುಖ್ಯಮಂತ್ರಿ ಸ್ಥಾನದ ರೇಸ್‌ನಿಂದ ಹೊರ ಬಂದಿದ್ದೇನೆ. ನವೆಂಬರ್‌ನಲ್ಲಿ ನಮ್ಮ ಪಕ್ಷದಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಮೈಸೂರು (ಅ.16): ನಾನು ಕಳೆದ ಒಂದು ವರ್ಷದ ಹಿಂದೆಯೇ ಮುಖ್ಯಮಂತ್ರಿ ಸ್ಥಾನದ ರೇಸ್‌ನಿಂದ ಹೊರ ಬಂದಿದ್ದೇನೆ. ನವೆಂಬರ್‌ನಲ್ಲಿ ನಮ್ಮ ಪಕ್ಷದಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾಕೆ ಸಿಎಂ ರೇಸ್‌ನಿಂದ ಹಿಂದೆ ಸರಿದೆ ಎನ್ನುವುದು ಈಗ ಅಪ್ರಸ್ತುತ. ನಮ್ಮಲ್ಲಿ ಯಾವ ಕ್ರಾಂತಿಗಳು

ಸಿಎಂ ಬದಲಾವಣೆ ವಿಚಾರ ಸೇರಿದಂತೆ ಎಲ್ಲವನ್ನೂ ನಿರ್ಧರಿಸುವುದು ನಾನಲ್ಲ ಎಂದರು. ಬೆಳಗಾವಿಯಲ್ಲಿ ಯಾವ ರಾಜಕೀಯ ಭೂಕಂಪವೂ ಆಗುವುದಿಲ್ಲ. ಏನಾದರೂ ಆದರೆ ಅದು ಬೆಂಗಳೂರಿನಲ್ಲೇ ಆಗಬೇಕು ಅಷ್ಟೇ. ನಾವು ಈಗ ಎಲ್ಲದರಿಂದಲೂ ದೂರ ಇದ್ದೇವೆ. ಸಿಎಂ ಬದಲಾವಣೆ ವಿಚಾರವನ್ನು ಸೂಕ್ತ ವ್ಯಕ್ತಿಯಲ್ಲಿ ನೀವು ಕೇಳಬೇಕು. ಕೆಲವರು ಅವರವರ ಅಭಿಮಾನಿಗಳು ಅವರವರ ನಾಯಕ ಸಿಎಂ ಆಗಬೇಕೆಂದು ಹೇಳಿಕೊಳ್ಳುತ್ತಾರೆ ಅದು ಸಹಜ ಎಂದು ತಿಳಿಸಿದರು.

ಬೆಳಗಾವಿ ಬ್ಯಾಂಕ್‌ಗೆ ಜಾರಕಿಹೊಳಿ ಬಣದ 9 ಮಂದಿ ಅವಿರೋಧ ಆಯ್ಕೆ

ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳ ಚುನಾವಣೆಯಲ್ಲಿ 16 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ಜಾರಕಿಹೊಳಿ ಪೆನಲ್‌ನಲ್ಲಿ ಗುರುತಿಸಿಕೊಂಡಿರುವ 9 ಜನರು ಸಹ ಅವಿರೋಧ ಆಯ್ಕೆಯಾಗಿದ್ದಾರೆ. ಈ ಮೂಲಕ ಜಾರಕಿಹೊಳಿ ಪೆನಲ್‌ ಬಿಡಿಸಿಸಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಯಿದೆ.

ಬಿಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದ ಅಚ್ಚರಿಯ ಬೆಳವಣಿಗೆಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಜೊತೆ ಗುರುತಿಸಿಕೊಂಡಿದ್ದ ಕಾಗವಾಡ ಶಾಸಕ ಭರಮಗೌಡ (ರಾಜು) ಕಾಗೆ ಅವರು ಜಾರಕಿಹೊಳಿ ಪೆನಲ್‌ಗೆ ಹಾರಿದ್ದಾರೆ. ಶಾಸಕ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಮಧ್ಯಸ್ಥಿಕೆ ವಹಿಸಿ, ರಾಜು ಕಾಗೆ ಅವರನ್ನು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡುವಲ್ಲಿ ಶ್ರಮಿಸಿದರು. ಶ್ರೀನಿವಾಸ ಪಾಟೀಲ ತಮ್ಮ ನಾಮಪತ್ರ ವಾಪಸ್‌ ಪಡೆದ ಹಿನ್ನೆಲೆಯಲ್ಲಿ ಕಾಗೆ ಅವರ ಆಯ್ಕೆ ಸುಗಮವಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜಾತಿ ವ್ಯವಸ್ಥೆಗೆ ಪರಿಹಾರ ರೂಪದ ವಿದ್ಯೆ ಅಗತ್ಯ: ಸಿಎಂ ಸಿದ್ದರಾಮಯ್ಯ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!