ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿರುವ ಲಕ್ಷ್ಮಣ ಸವದಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡುತ್ತೇನೆ. ಸ್ವೀಕರ್ ಭೇಟಿ ಮಾಡಿ ಎಂಎಲ್ ಸಿ ಸ್ಥಾನಕ್ಕೂ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.
ಬೆಂಗಳೂರು (ಏ.14): ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆ ಅಸಮಾಧಾನ ಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ರಾಜಕೀಯ ಮುಖಂಡರ ಮಾತುಕತೆಗೆ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್ ಎಎಲ್ ವಿಮಾನ ನಿಲ್ಧಾಣಕ್ಕೆ ಬಂದಿಳಿದ ಎಂಎಲ್ ಸಿ ಲಕ್ಷಣ್ ಸವದಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾನು ಬಿಜೆಪಿ ಬಿಟ್ಟಿದ್ದೇನೆ. ಮೂರು ದಿನಗಳ ಹಿಂದೆಯೇ ಬಿಜೆಪಿ ಬಿಟ್ಟು ಆಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡುತ್ತೇನೆ. ಸ್ವೀಕರ್ ಭೇಟಿ ಮಾಡಿ ಎಂಎಲ್ ಸಿ ಸ್ಥಾನಕ್ಕೂ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.
ಅಥಣಿ ಟಿಕೆಟ್ ಕೈ ತಪ್ಪಿದ್ದು ಬೇಸರ ತರಿಸಿದೆ. ನಾನು ನನ್ನ ಕ್ಷೇತ್ರದ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿದ್ದೇನೆ. ಕಾರ್ಯಕರ್ತರು ನಿಮ್ಮ ತೀರ್ಮಾನ ನಮ್ಮ ತೀರ್ಮಾನ ಅಂತ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಒತ್ತಡಕ್ಕೆ ಹೈಕಮಾಂಡ್ ಮಣಿದ್ರು. ಒತ್ತಡಕ್ಕೆ ಮಣಿದ್ರೂ ಅಥ್ವಾ ಪಾರ್ಟಿನೇ ಹ್ಯಾಂಡ್ ಓವರ್ ಮಾಡಿದರೋ ಗೊತ್ತಿಲ್ಲ. 15 ಸೀಟ್ ಗೆಲ್ಲಿಸಿಕೊಡುತ್ತೇನೆ ಅಂತ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅದಕ್ಕೆ ಬಿಜೆಪಿ ಪಕ್ಷವನ್ನೇ ರಮೇಶ್ ಜಾರಕಿಹೊಳಿ ಕೈಗೆ ನೀಡಿದ್ದಾರೆ ಎಂದರು.
ಟಿಕೆಟ್ ಸಿಗದ ಹಿನ್ನೆಲೆ: ಗೂಳಿಹಟ್ಟಿ, ಸವದಿ, ಎಂಪಿಕೆ ಸೇರಿ ಐವರು ಬಿಜೆಪಿಗೆ ಗುಡ್‌ಬೈ
ಕಾಂಗ್ರೆಸ್ ನಾಯಕರ ಜೊತೆ ಮಾತಕತೆ ಮಾಡಿದ್ದೇನೆ. ರಾಜೀನಾಮೆ ಕೊಟ್ಟ ಬಳಿಕ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ಕೆಲವು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಅದಕ್ಕೆ ಒಪ್ಪಿದ್ರೆ ನಾನು ಇವತ್ತು ನಾಳೆ ತೀರ್ಮಾನ ತೆಗೆದುಕೊಳ್ಳುತ್ತೇನೆ. ನನ್ನ ಉಪಮುಖ್ಯಮಂತ್ರಿ ಮಾಡಿದ್ರು. ಯಾಕೆ ನನ್ನನ್ನು ಸಂಪುಟದಿಂದ ಕೈಬಿಟ್ಟರೋ ಗೊತ್ತಿಲ್ಲ. ನಾನು ಏನು ಅನಾಚಾರ ಮಾಡಿದ್ದೇನೆ? ಆತ್ಯಾಚಾರ ಮಾಡಿದ್ದೇನಾ. ಯಾಕೆ ತೆಗೆದಿದ್ದಾರೆ ಗೊತ್ತಿಲ್ಲ. ರಾಜ್ಯ ನಾಯಕರು ಹೈಕಮಾಂಡ್ ಗೆ ಮಿಸ್ ಗೈಡ್ ಮಾಡಿದ್ದಾರೆ. ಮುಂದಿನ ತೀರ್ಮಾನ ಚರ್ಚಿಸಿ ತಿಳಿಸುತ್ತೇನೆ ಎಂದು ಬೇಸರದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.
ಮುಖಂಡರ ಜತೆ ಮಾತುಕತೆಗೆ ಬೆಂಗಳೂರಿಗೆ ಬಂದ ಲಕ್ಷ್ಮಣ್ ಸವದಿ, ರಹಸ್ಯ ಸ್ಥಳದಲ್ಲಿ ಡಿಕೆಶಿ
ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.