
ಸಂಡೂರು(ಬಳ್ಳಾರಿ) (ಫೆ.24): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಾಲಿಗೆ ತಲೆನೋವಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಅವರ ಪಕ್ಷವನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖಂಡರಿಗೆ ಧೈರ್ಯ ತುಂಬಿದ್ದಾರೆ. ಬಿಜೆಪಿ ಸಮಾವೇಶದ ಬಳಿಕ ಸಂಡೂರಿನ ಶಿವಲೀಲಾ ಪ್ಯಾಲೇಸ್‌ನಲ್ಲಿ ಗುರುವಾರ ಅಮಿತ್ ಶಾ ನೇತೃತ್ವದಲ್ಲಿ ನಡೆದ ನಾಲ್ಕು ಜಿಲ್ಲೆಗಳ ಕೋರ್ ಕಮಿಟಿ ಸಭೆಯಲ್ಲಿ ರೆಡ್ಡಿ ವಿಚಾರ ಪ್ರಸ್ತಾಪವಾದಾಗ ಈ ಭರವಸೆ ನೀಡಿದರು. ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದು, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಸೇರಿ ಉತ್ತರ ಕರ್ನಾಟಕ ಭಾಗವನ್ನು ಮುಖ್ಯವಾಗಿಟ್ಟುಕೊಂಡು ಈಗಾಗಲೇ ಪ್ರಚಾರವನ್ನೂ ಆರಂಭಿಸಿದ್ದಾರೆ.
ಜತೆಗೆ ಸ್ವತಃ ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಸಚಿವರೂ ಆಗಿದ್ದ ಜನಾರ್ದನ ರೆಡ್ಡಿಯ ಈ ನಡೆ ಬಳ್ಳಾರಿ ಸೇರಿ ಸುತ್ತಮುತ್ತಲ ಜಿಲ್ಲೆಗಳ ಬಿಜೆಪಿ ನಾಯಕರಲ್ಲಿ ಆತಂಕ ಮೂಡಿಸಿದೆ. ಇದೇ ಕಾರಣಕ್ಕೆ ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಅಮಿತ್ ಶಾ ಅವರು ಸಲಹೆ ನೀಡುತ್ತಿದ್ದಾಗ ಶಾಸಕರಾದ ಸೋಮಶೇಖರ ರೆಡ್ಡಿ ಹಾಗೂ ಪರಣ್ಣ ಮುನವಳ್ಳಿ ಅವರು ಜನಾರ್ದನ ರೆಡ್ಡಿ ಪಕ್ಷದ ಬಗ್ಗೆ ವಿಷಯ ಪ್ರಸ್ತಾಪಿಸಿದ್ದಾರೆ.
ರೋಹಿಣಿ ವರ್ಸಸ್ ರೂಪಾಗೆ ಕೋರ್ಟ್ ಬ್ರೇಕ್: ಆಕ್ಷೇಪಾರ್ಹ, ಮಾನಹಾನಿ ಹೇಳಿಕೆ ನೀಡದಂತೆ ಇಬ್ಬರಿಗೂ ತಾಕೀತು
ಗಂಗಾವತಿಯಲ್ಲಿ ನನಗೆ ಸಮಸ್ಯೆಯಾಗುತ್ತಿದೆ ಎಂದು ಪರಣ್ಣ ಹೇಳಿದರೆ, ‘ನನ್ನ ಸೊಸೆ(ತಮ್ಮನ ಹೆಂಡತಿ) ಅರುಣಾ ಲಕ್ಷ್ಮಿ ನನ್ನ ವಿರುದ್ಧವೇ ಸ್ಪರ್ಧಿಸುತ್ತಿದ್ದಾರೆ’ ಎಂದು ಸೋಮಶೇಖರ ರೆಡ್ಡಿ ಅವರು ಅಮಿತ್ ಶಾ ಗಮನಕ್ಕೆ ತಂದರು. ಆದರೆ, ರೆಡ್ಡಿ ಮತ್ತು ಪಕ್ಷದ ಕುರಿತು ಹೆಚ್ಚು ತಲೆಕೆಡಿಸಿಕೊಂಡಂತೆ ಕಾಣದ ಶಾ ಅವರು, ನಾನಿದ್ದೇನೆ ಅಲ್ವಾ? ಆ ಸಮಸ್ಯೆ ನಾನು ನೋಡಿಕೊಳ್ಳುತ್ತೇನೆ. ನೀವು ಕ್ಷೇತ್ರದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕಾರ್ಯ ಮಾಡಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಮೈ ಹೂಂ ನಾ, ದೇಖ್ ಲೂಂಗಾ: ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಕೆಆರ್‌ಪಿ ಪಾರ್ಟಿ ಕುರಿತು ಸಂಡೂರಿನ ಶಿವಲೀಲಾ ಪ್ಯಾಲೇಸ್‌ನಲ್ಲಿ ಗುರುವಾರ ಅಮಿತ್ ಶಾ ನೇತೃತ್ವದಲ್ಲಿ ನಡೆದ ನಾಲ್ಕು ಜಿಲ್ಲೆಗಳ ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪವಾಗಿದೆ. ಈ ಬಗ್ಗೆ ಸಭೆಯಲ್ಲಿ ಪ್ರತಿಕ್ರಿಯಿಸಿದ ಅಮಿತ್ ಶಾ ಅವರು, ಮೈ ಹೂಂ ನಾ, ದೇಖ್ ಲೂಂಗಾ ಎಂದು ಉತ್ತರಿಸಿದ್ದಾರೆ.
45 ಹೊಸ ವಾರ್ಡ್ ಅಭಿವೃದ್ಧಿಗೆ ತಲಾ 1 ಕೋಟಿ ಅನುದಾನ: ಬಿಬಿಎಂಪಿ ನಿರ್ಧಾರ
ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಅಮಿತ್ ಶಾ ಅವರು ಸಲಹೆ ನೀಡುತ್ತಿದ್ದಾಗ ಶಾಸಕರಾದ ಸೋಮಶೇಖರ ರೆಡ್ಡಿ ಹಾಗೂ ಪರಣ್ಣ ಮುನವಳ್ಳಿ ಅವರು ಜನಾರ್ದನ ರೆಡ್ಡಿಯ ಪಕ್ಷ ಕೆಆರ್‌ಪಿ ಬಗ್ಗೆ ಪ್ರಸ್ತಾಪಿಸಿದರು. ಗಂಗಾವತಿಯಲ್ಲಿ ನನಗೆ ಸಮಸ್ಯೆಯಾಗುತ್ತಿದೆ ಎಂದು ಪರಣ್ಣ ಹೇಳಿದರೆ, ನನ್ನ ಸೊಸೆ ಅರುಣಾ ಲಕ್ಷ್ಮಿ ನನ್ನ ವಿರುದ್ಧ ಸ್ಪರ್ಧಿಸುತ್ತಿದ್ದಾರೆ ಎಂದು ಸೋಮಶೇಖರ ರೆಡ್ಡಿ, ಅಮಿತ್ ಶಾ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ನಾನಿರುವೆ. ನಿಮ್ಮ ಸಮಸ್ಯೆ ಬಗೆಹರಿಸುವೆ. ನೀವು ಕ್ಷೇತ್ರದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕಾರ್ಯ ಮಾಡಬೇಕು ಎಂದು ಸಂದೇಶ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.