
ಬೆಂಗಳೂರು (ಮೇ.21): ಮುಖ್ಯಮಂತ್ರಿ ಬದಲಾಗಬೇಕು ಎಂದು ನಾನು ಎಲ್ಲೂ ಹೇಳಿಲ್ಲ. ಇನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಮಾಜಿ ಸಚಿವ ರಾಜಣ್ಣ ಹೇಳುವುದರಲ್ಲಿ ತಪ್ಪೇನಿಲ್ಲ. ಆದರೆ, ಡಾ। ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಕುಮಾರಪಾರ್ಕ್‌ನ ಸರ್ಕಾರಿ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜಣ್ಣ ಅವರು ಮುಖ್ಯಮಂತ್ರಿ ಅವರನ್ನು ಬದಲಾವಣೆ ಮಾಡಲು ಏತಕ್ಕೆ ಮುಂದಾಗಿದ್ದಾರೆ? ಮುಖ್ಯಮಂತ್ರಿ ಮುಂದುವರಿಯಲಿ ಎಂದು ಹೇಳುವುದರಲ್ಲಿ ತಪ್ಪಿಲ್ಲ. ಆದರೆ, ಡಾ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಹಾಗಾದರೆ, ಮುಖ್ಯಮಂತ್ರಿ ಅವರು ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ? ಮುಖ್ಯಮಂತ್ರಿ ಬದಲಾಗಬೇಕು ಎಂದು ನಾನು ಎಂದಾದರೂ ಹೇಳಿದ್ದೀನಾ? ನಾನು ಎಲ್ಲೂ ಹೇಳಿಲ್ಲ. ರಾಜಣ್ಣ ಅವರೇ ಬದಲಾವಣೆ ಮಾಡಲು ಮುಂದಾಗಿದ್ದಾರೆ. ಅವರನ್ನೇ ಕೇಳಬೇಕು ಎಂದರು.
ಶಾಸಕರ ಸಚಿವ ಸ್ಥಾನದ ಬೇಡಿಕೆ ಕುರಿತು ಪ್ರತಿಕ್ರಿಯಿಸಿ, ಅದನ್ನು ಮುಖ್ಯಮಂತ್ರಿ ಅವರನ್ನೇ ಕೇಳಬೇಕು. ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಹೀಗಾಗಿ ಅವರನ್ನೇ ಕೇಳಿ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.