
ಮೈಸೂರು (ಅ.29): ಮೈಸೂರು ಅರಮನೆ ಸರ್ಕಾರದ ಆಸ್ತಿ. ನಾನು ನನ್ನ ಈ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ನಾನು ಸ್ಪಷ್ಟಪಡಿಸಿದ್ದೇನೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ನಾನು ಯಾವುದೇ ತಪ್ಪೆಸಗಿಲ್ಲ. ರಾಜಮನೆತನದವರ ಜೊತೆ ಮುಖ್ಯಮಂತ್ರಿಗಳೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹಾಗಾಗಿ ನಾನು ಹೋಗಿ ಮಾತನಾಡುವ ಅಗತ್ಯತೆ ಇಲ್ಲ ಎಂದರು.
ಅಂಬಾರಿ, ಅರಮನೆ ವಿಚಾರದಲ್ಲಿ ನಾನು ತಪ್ಪಾಗಿ ಮಾತನಾಡಿಲ್ಲ. ಅರಮನೆ ಸ್ವಾಧೀನ ಕಾಯ್ದೆ ಪ್ರಕಾರವೇ ನಾನು ಮಾತನಾಡಿದ್ದೇನೆ. ಈ ವಿಚಾರವನ್ನು ತಪ್ಪಾಗಿ ಅರ್ಥೈಸಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ನಾನು ಪ್ರಜ್ಞಾಪೂರ್ವಕವಾಗಿ ಮಾತನಾಡಿದ್ದೇನೆ. ತಪ್ಪಾಗಿದ್ದರೇ ಕ್ಷಮೆ ಕೇಳಬಹುದಿತ್ತು. ನಾನು ಯಾವುದೇ ತಪ್ಪು ಎಸಗಿಲ್ಲ, ಕ್ಷಮೆ ಕೇಳಲ್ಲ ಎಂದು ಅವರು ಹೇಳಿದರು.
ಸರ್ಕಾರಿ ಕಾರ್ಯಕ್ರಮ 7 ದಿನ ಮಾಡಿ. ಅಂಬಾರಿ ಕೊಡಲ್ಲ ಎಂದು ಪತ್ರ ಬರೆದಿದ್ದರು. ಆ ಪತ್ರಕ್ಕೆ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಅಂಬಾರಿ ಇಲ್ಲದೇ ಜಂಬೂಸವಾರಿ ಮಾಡಲಾಗಲ್ಲ. ಇದು ಪ್ರಜಾಪ್ರಭುತ್ವ. ಈಗಿರುವುದು ಜನರ ಸರ್ಕಾರ. ಜನರಿಗಾಗಿ ನಾವು ದಸರಾ ಮಾಡುತ್ತೇವೆ. ಆದ್ದರಿಂದ ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸಮರ್ಥಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.