ರಾಜಕಾರಣ ಬೇಕೋ ಬೇಡ್ವೋ ಅನಿಸಿದೆ: ಸಂಸದ ಡಿ.ಕೆ.ಸುರೇಶ್‌

By Kannadaprabha News  |  First Published Jun 9, 2023, 9:03 AM IST

ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್‌ ಮನದ ಮಾತು ಹೊರಕಾಕಿದ್ದಾರೆ. ಕುಣಿಗಲ್‌ ತಾಲೂಕು ಗಿರಿಗೌಡನ ಪಾಳ್ಯದಲ್ಲಿ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. 


ತುಮಕೂರು (ಜೂ.09): ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್‌ ಮನದ ಮಾತು ಹೊರಕಾಕಿದ್ದಾರೆ. ಕುಣಿಗಲ್‌ ತಾಲೂಕು ಗಿರಿಗೌಡನ ಪಾಳ್ಯದಲ್ಲಿ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಕೆಲವರು ನನ್ನ ಲೋಕಸಭಾ ಚುನಾವಣೆ ಸರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಮುಂದಿನ ಚುನಾವಣೆಗೆ ನಿಂತುಕೊಳ್ಳುತ್ತೇನೋ ಇಲ್ಲವೋ ಎಂಬುದರ ಬಗ್ಗೆ ತೀರ್ಮಾನ ಮಾಡಿಲ್ಲ. ಇನ್ನೂ ಗೊಂದಲದಲ್ಲಿದ್ದೇನೆ. ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆಯುತ್ತೇನೆ ಎಂದ ಸುರೇಶ್‌ ನನ್ನ ಗುರಿ ಇರುವುದು ನಿಮ್ಮಗಳ ಸೇವೆ ಮಾಡುವುದಕ್ಕೆ ಎಂದರು.

ಶಿವಮೊಗ್ಗ ಕೇಸ್‌ ರದ್ದು: ಕಳೆದ ಲೋಕಸಭೆ ಚುನಾವಣೆ ವೇಳೆ ಚುನಾವಣಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೆ ಶಿವಮೊಗ್ಗದಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಮತ್ತು ಮೆರವಣಿಗೆ ನಡೆಸಿದ ಆರೋಪ ಸಂಬಂಧ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌ ವಿರುದ್ಧದ ದೂರು ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ. ಈ ಕುರಿತಂತೆ ತಮ್ಮ ವಿರುದ್ಧದ ದೂರು ಮತ್ತು ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಿ.ಕೆ. ಸುರೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

Tap to resize

Latest Videos

ಶಿವರಾಮ ಕಾರಂತ ಲೇಔಟ್‌ಗೆ ಜಾಗ ಕೊಟ್ಟವರು, ಬಿಡಿಎಗೂ ಲಾಭ ಆಗುವಂತೆ ಕ್ರಮ: ಡಿಕೆಶಿ

ಪ್ರಕರಣವೇನು?: 2019ರ ಏ.20ರಂದು ಸಂಜೆ 5 ಗಂಟೆ ಸಮಯದಲ್ಲಿ ಹಿರಿಯೂರು ಬಯಲು ರಂಗಮಂದಿರ ಎದುರು ಡಿ.ಕೆ. ಸುರೇಶ್‌ ಅವರು ತೆರೆದ ವಾಹನದ ಮೂಲಕ ಚುನಾವಣಾ ಪ್ರಚಾರ ಮತ್ತು ಮೆರವಣಿಗೆ ನಡೆಸುತ್ತಿದ್ದರು. ಅದಕ್ಕಾಗಿ ಚುನಾವಣಾಧಿಕಾರಿಯಿಂದ ಪೂರ್ವಾನುಮತಿ ಪಡೆದಿರಲಿಲ್ಲ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಚಕ್ಷಣಾ ದಳದ ಅಧಿಕಾರಿಯಾಗಿದ್ದ ಎಂ. ಈಶ್ವರಪ್ಪ ಅವರು ಭದ್ರಾವತಿ ಪೇಪರ್‌ ಟೌನ್‌ ಠಾಣೆಗೆ ದೂರು ನೀಡಿದ್ದರು.

ಮಗಳನ್ನು ಗಂಡನಿಗೆ ಒಪ್ಪಿಸದೆ ಕೋರ್ಟ್‌ನಲ್ಲಿ ಪತ್ನಿಯ ಹೈಡ್ರಾಮಾ: ಯಾಕೆ ಗೊತ್ತಾ?

ಈ ಮಾಹಿತಿಯನ್ನು ಪೊಲೀಸರು ಮ್ಯಾಜಿಸ್ಪ್ರೇಟ್‌ ಕೋರ್ಟ್‌ಗೆ ರವಾನಿಸಿದ್ದರು. ನಂತರ ಕೋರ್ಟ್‌ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಅದರಂತೆ ಗಂಭೀರ ಸ್ವರೂಪವಲ್ಲದ ಅಪರಾಧ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಿದ್ದ ಪೊಲೀಸರು, ತನಿಖೆ ಪೂರ್ಣಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2020ರ ಸೆ.1ರಂದು ದೋಷಾರೋಪಟ್ಟಿಸಲ್ಲಿಸಿದ್ದರು. ಅದನ್ನು ಪರಿಗಣಿಸಿದ್ದ ವಿಶೇಷ ನ್ಯಾಯಾಲಯ, 2021ರ ಸೆ.21ರಂದು ಡಿ.ಕೆ.ಸುರೇಶ್‌ಗೆ ಸಮನ್ಸ್‌ ಜಾರಿಗೊಳಿಸಿತ್ತು. ಆ ಆದೇಶ ರದ್ದುಕೋರಿ ಡಿ.ಕೆ.ಸುರೇಶ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

click me!