ನನ್ನ ಕ್ಷೇತ್ರದಲ್ಲಿ ಜೆಡಿಎಸ್ ಮತಗಳು 4 ಸಾವಿರ ಇತ್ತು. ನಾನು ಅವರಿಗೆ 8 ಸಾವಿರ ಮತಗಳ ಲೀಡ್ ಕೊಡಿಸಿದೆ. ಅದಾದ ಬಳಿಕ ಜೆಡಿಎಸ್ ಸೇರಿಕೊಂಡೆ. ನಾನು ಸಿಎಂ ಆಗಲು ಬಾಲಕೃಷ್ಣ ಕಾರಣ ಅಂತ ಕುಮಾರಸ್ವಾಮಿ ಅವರೇ ಸದನದಲ್ಲೂ ಹೇಳಿದ್ದಾರೆ: ಶಾಸಕ ಬಾಲಕೃಷ್ಣ
ರಾಮನಗರ(ಮಾ.21): ಕುಮಾರಸ್ವಾಮಿಯವರು ಚುನಾವಣೆಗೆ ಬರುವ ಮುಂಚೆಯೇ ನಾನು ಶಾಸಕನಾಗಿದ್ದೆ. ಬಿಜೆಪಿ ಶಾಸಕನಾಗಿದ್ದರೂ ಬಿಜೆಪಿಗೆ ಅನ್ಯಾಯ ಮಾಡಿ, ಅವರ ಸಂಸತ್ ಚುನಾವಣೆಯಲ್ಲಿ ಸಾಥ್ ಕೊಟ್ಟಿದ್ದೆ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ.
ನಾನೇ ಸಾಕಿದ ಗಿಣಿ, ನನ್ನನ್ನೇ ಹದ್ದಾಗಿ ಕುಕ್ಕಿದೆ ಎಂಬ ಕುಮಾರಸ್ವಾಮಿಯ ಹೇಳಿಕೆಗೆ ಪ್ರತಿಕ್ರಿಯಿಸಿ, ನನ್ನ ಕ್ಷೇತ್ರದಲ್ಲಿ ಜೆಡಿಎಸ್ ಮತಗಳು 4 ಸಾವಿರ ಇತ್ತು. ನಾನು ಅವರಿಗೆ 8 ಸಾವಿರ ಮತಗಳ ಲೀಡ್ ಕೊಡಿಸಿದೆ. ಅದಾದ ಬಳಿಕ ಜೆಡಿಎಸ್ ಸೇರಿಕೊಂಡೆ. ನಾನು ಸಿಎಂ ಆಗಲು ಬಾಲಕೃಷ್ಣ ಕಾರಣ ಅಂತ ಅವರೇ ಸದನದಲ್ಲೂ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಡಾ.ಮಂಜುನಾಥ್ ಹರಕೆಯ ಕುರಿಯಾಗುತ್ತಿದ್ದಾರೆ: ಬಾಲಕೃಷ್ಣ
ಅವರು ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಆದಾಗ ಬಿಡಿಎ ಚೇರ್ಮನ್ ಮಾಡುತ್ತೇನೆ ಅಂದಿದ್ದರು, ಮಾಡಲಿಲ್ಲ. ಇದ್ದಕ್ಕಾಗಿ ನಾನು ಬೇಸರ ಮಾಡಿಕೊಂಡಿಲ್ಲ ಎಂದು ಕಿಡಿಕಾರಿದರು.