
ಬೆಂಗಳೂರು : ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮಾಧ್ಯಮಗಳು ಪದೇ ಪದೆ ಅದನ್ನೇ ಕೇಳುವುದು ಸರಿಯಲ್ಲ. ಈ ವಿಚಾರದಲ್ಲಿ ಹೈಕಮಾಂಡ್ ಹೇಳಿದ್ದೇ ಅಂತಿಮ ಎಂದು ಈಗಾಗಲೇ ಹೇಳಿದ್ದೇನೆ. ಹೈಕಮಾಂಡ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಪಾಲಿಸುತ್ತೇನೆ. ಇನ್ನು, ನನಗೆ ದೆಹಲಿಗೆ ಬರುವಂತೆ ತಿಳಿಸಿಲ್ಲ. ಅವರು ಕರೆಯದೆ ನಾನು ಏಕೆ ಹೋಗಲಿ? ನಾನು ದೆಹಲಿಗೆ ಹೋಗುವುದಿಲ್ಲ. ನನಗೆ ಇಲ್ಲೇ ಬಹಳಷ್ಟು ಕೆಲಸವಿದ್ದು, ಬಜೆಟ್ ಸಿದ್ಧತಾ ಕಾರ್ಯಗಳಿವೆ ಎಂದು ಸ್ಪಷ್ಟಪಡಿಸಿದರು.
ಬಜೆಟ್ ಸಿದ್ಧತಾ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೈರಾಗುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಅವರು ನನಗೆ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣಾ ಸಭೆಯಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು.
ಅಧಿಕಾರದಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪ್ರತಾಪ್ ಸಿಂಹಗೆ ಟಿಕೆಟೇ ಕೊಡಲಿಲ್ವಪ್ಪ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.