ಉತ್ತರ ಕರ್ನಾಟಕದವರು ಮುಖ್ಯಮಂತ್ರಿ ಆಗ್ಬೇಕು, ಜಾರಕಿಹೊಳಿ ಸಿಎಂ ಆದ್ರೆ ಸ್ವಾಗತ, ಜೆಡಿಎಸ್‌ ಶಾಸಕ ಕಂದಕೂರ

By Kannadaprabha News  |  First Published Jan 7, 2025, 12:38 PM IST

ಜೆಡಿಎಸ್ ರಾಜ್ಯ ಯುವ ಮುಖಂಡ ಹಾಗೂ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ, ಈಗ ಕಾಂಗ್ರೆಸ್ ಸರ್ಕಾರದ ಸಚಿವರೊಬ್ಬರ ಪರ ಬಹಿರಂಗವಾಗಿ ಬ್ಯಾಟ್ ಬೀಸಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 


ಯಾದಗಿರಿ(ಜ.07):  ಉತ್ತರ ಕರ್ನಾಟಕದವರು ಸಿಎಂ ಆಗಬೇಕು. ಅದರಲ್ಲೂ, ಸರಳ ಸಜ್ಜನಿಕೆಯ ಸತೀಶಣ್ಣ (ಜಾರಕಿಹೊಳಿ) ಸಿಎಂ ಆದರೆ ಸ್ವಾಗತಿಸುತ್ತೇನೆ ಎಂದು ಜೆಡಿಎಸ್ ರಾಜ್ಯ ಯುವ ಮುಖಂಡ ಹಾಗೂ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಈ ಹಿಂದೆ ಚುನಾವಣೆಗೂ ಮುನ್ನ, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ 'ಭಿನ್ನ' ನಿಲುವು ವ್ಯಕ್ತಪಡಿಸಿದ್ದ ಹಾಗೂ ಮೈತ್ರಿಯಿಂದ ಜೆಡಿಎಸ್‌ಗೆ ನಷ್ಟವೇ ಹೆಚ್ಚು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಶಾಸಕ ಶರಣಗೌಡ ಕಂದಕೂರ, ಈಗ ಕಾಂಗ್ರೆಸ್ ಸರ್ಕಾರದ ಸಚಿವರೊಬ್ಬರ ಪರ ಬಹಿರಂಗವಾಗಿ ಬ್ಯಾಟ್ ಬೀಸಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

Tap to resize

Latest Videos

ಡಿನ್ನರ್‌ಗೆ ಎಲ್ಲರನ್ನೂ ಏಕೆ ಕರೀಲಿಲ್ಲ ಅಂತ ಜಾರಕಿಹೊಳಿ ಕೇಳಿ: ಸಿದ್ದರಾಮಯ್ಯ

ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಕ್ರಾಸ್ ಬಳಿ ಸೋಮವಾರ ಭಗವಾನ್ ಮಹರ್ಷಿ ವಾಲ್ಮೀಕಿ ವೃತ್ತ ಅನಾವರಣಕ್ಕೆ ಆಗಮಿಸಿದ್ದ ಸಚಿವ ಸತೀಶ ಜಾರಕಿಹೊಳಿ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಶಾಸಕ, ಜೆಡಿಎಸ್‌ನ ಕಂದಕೂರ, ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಿಸಿದಾಗ ಕರತಾಡನಗಳು ಮುಗಿಲು ಮುಟ್ಟಿದ್ದವು. ಸಿಎಂ ಬದಲಾವಣೆ ವಿಚಾರ ಚರ್ಚೆಗಳ ಮಧ್ಯೆಯೇ, ಪ್ರಭಾವಿ ಜೆಡಿಎಸ್ ಶಾಸಕರೊಬ್ಬರು ಕಾಂಗ್ರೆಸ್ ನಾಯಕರೊಬ್ಬರ ಪರ ಮೆಚ್ಚುಗೆ ಸೂಸಿ, ಸತೀಶಣ್ಣ ಮುಂದಿನ ಸಿಎಂ ಆಗಬೇಕು, 2028 - 29ನೇ ಸಾಲಿನ ಒಳಗೆ, ಅಂದರೆ ಮುಂದಿನ ವಿಧಾನಸಭೆ ಚುನಾವಣೆಯೊಳಗೆ ಸಿಎಂ ಆಗಬೇಕು. ಅವರು (ಸತೀಶ ಜಾರಕಿಹೊಳಿ) ಆದರೆ ನಾನು ಸ್ವಾಗತಿಸುತ್ತೇನೆ ಎಂದರು. 

ಸತೀಶ್ ಅಣ್ಣ ಸರಣ ವ್ಯಕ್ತಿತ್ವ ಹೊಂದಿದ್ದಾರೆ. ಅವರು ಮುಖ್ಯಮಂತ್ರಿ ಆದರೆ ಸ್ವಾಗತ ಮಾಡುತ್ತೇನೆ ಎಂದರು. ಶಾಸಕ ಕಂದಕೂರ ಹೀಗೆ ಹೇಳುತ್ತಿದ್ದಂತೆಯೇ, ಜಾರಕಿಹೊಳಿ ಅಭಿಮಾನಿಗಳು ಸಂತಸದಿಂದ ಘೋಷಣೆ ಕೂಗತೊಡಗಿದರು. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಅಣ್ಣನವರಿಗೆ ಜೈ ಎಂದು ಜೈಕಾರ ಘೋಷಣೆ ಕೂಗತೊಡಗಿದರು. ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎನ್ನುತ್ತಿದ್ದಂತೆಯೇ ಇದು ಮತ್ತೊಂದು ವಿವಾದಕ್ಕೆ ಕಾರಣವಾಗಬಾರದೆಂದು ಮನಗಂಡ ಜಾರಕಿಹೊಳಿ, ಘೋಷಣೆ ಕೂಗದಂತೆ ಅಭಿಮಾನಿಗಳಿಗೆ ಕೈಸನ್ನೆ ಮಾಡಿ ಸುಮ್ಮನಾಗಿಸಿದರು.

2028ಕ್ಕೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ: ಸಚಿವ ಸತೀಶ್ ಜಾರಕಿಹೊಳಿ

ರಾಯಚೂರು: ರಾಜ್ಯದಲ್ಲಿ ಶೇ.60 ಪರ್ಸೇಂಟ್ ಸರ್ಕಾರವಿದೆ ಎಂದು ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತುಪಡಿಸಬೇಕೆ ಹೊರತು ಸುಮ್ಮನೇ ಹೇಳಿಕೆಗಳನ್ನು ನೀಡಿದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದರು. 

ಸ್ಥಳೀಯ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್.ಎಸ್.ಬೋಸರಾಜು ಅವರ ನಿವಾ ಸದಲ್ಲಿ ಉಪಹಾರ ಸೇವಿಸಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ ಎಂದು ಅವರು ಹೇಳಿದರು. 
ಬೀದರ್‌ನ ಗುತ್ತಿಗೆದಾರರ ಡೆತ್ ನೋಟ್‌ನಲ್ಲಿ ಖರ್ಗೆ ಅವರ ಆಪ್ತರ ಹೆಸರಿದೆ. ಈಶ್ವರಪ್ಪನವರದ್ದು ನೇರವಾಗಿ ಪತ್ರದಲ್ಲಿ ಹೆಸರಿತ್ತು. ಆಪ್ತರ, ಪಿಎಂಗಳ ಹೆಸರು ಇದೆ ಎಂದ ಮಾತ್ರಕ್ಕೆ ಸಚಿವರು ನೇರವಾಗಿ ಹೊಣೆಗಾರರು ಆಗುವುದಿಲ್ಲ, ಪ್ರಕರಣದ ತನಿಖೆ ನಡೆಯುತ್ತಿದೆ ಎಂದರು. 

ಸಾರಿಗೆ ಬಸ್ ದರ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದ ಜಿಎಸ್‌ಟಿ ಹೇರಿಕೆ ಬಗ್ಗೆಯೂ ಮಾತನಾಡಬೇಕು, ಕೇಂದ್ರ ಹಣಕಾಸು ಸಚಿವ ಹಳೆಯ ಗಾಡಿಗಳಿಗೆ ಶೇ.18 ರಷ್ಟು ಜಿಎಸ್‌ಟಿ ಹಾಕಿದ್ದಾರೆ. ಸಕ್ಕರೆ, ಕಾರ್ ಸೇರಿ ಇತರೆ ವಸ್ತುಗಳಿಗೆ ಶೇ.12 ರಷ್ಟು ಜಿಎಸ್‌ಟಿ ಹೇರಿದ್ದಾರೆ. ಇದರ ವಿರುದ್ಧ ಬಿಜೆಪಿಗರು ಮಾತ ನಾಡುವುದಿಲ್ಲ. ಬರೀ ಬಸ್ ದರದ ಕುರಿತು ವಿರೋಧ ವ್ಯಕ್ತಪಡಿಸಿದರೆ ಹೇಗೆ ಎಂದು ಪ್ರಶ್ನಿಸಿದರು. 

ಊಟಕ್ಕೆ ಸೇರಿದರೆ ಅದರಲ್ಲಿ ರಾಜಕೀಯ ಯಾಕೆ ಬೆರೆಸುತ್ತೀರಿ: ಡಿ.ಕೆ. ಶಿವಕುಮಾರ್

ಡಿಸಿಎಂ ಡಿಕೆಶಿ ಅವರನ್ನು ಬಿಟ್ಟು ರಹಸ್ಯ ಸಭೆಯನ್ನು ಮಾಡಿಲ್ಲ. ಅದು ರಹಸ್ಯ ಸಭೆಯಲ್ಲ, ಎಲ್ಲರೂ ಕೂಡಿಯೇ ಸಭೆ ಮಾಡಿದ್ದು, ಅದು ಊಟದ ಸಭೆಯಾಗಿತ್ತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯಂತಹ ಚರ್ಚೆಗಳ್ಯಾವು ನಡೆಸಿಲ್ಲ, ಸಚಿವ ಸಂಪುಟದ ವಿಸ್ತರಣೆಯೂ ಇಲ್ಲ ಎಂದು ತಿಳಿಸಿದರು. 

ರಾಜ್ಯದಲ್ಲಿ ಮುಖ್ಯಮಂತ್ರಿಗಳು ಇದ್ದು ಅವರನ್ನು ಬದಲಾಯಿಸುವ ಅವಶ್ಯಕತೆ ಬರಲ್ಲ. ಈ ಅವಧಿಗೆ ನಾನು, ಸಿಎಂ ಆಗುವುದಿಲ್ಲ, ಮುಂದಿನ ಅವಧಿಗೆ ನಾನು ಸಿಎಂ ಅಂತ ಹೇಳಿದ್ದು, 2028 ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಹೇಳಿದರು. 

click me!