ನಾಲ್ಕು ಬಾರಿ ನಾನು ಶಾಸಕನಾಗಿ ಗೆದ್ದು ಬಂದಿದ್ದೇನೆ. ಹಿರಿತನ ನೋಡಿ ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಒತ್ತಾಯಿಸಿದ್ದಾರೆ. ಭದ್ರಾವತಿಯಲ್ಲಿ ನಾಲ್ಕನೇ ಬಾರಿ ಜಯಗಳಿಸಿದ್ದೇನೆ.
ಶಿವಮೊಗ್ಗ (ಮೇ.22): ನಾಲ್ಕು ಬಾರಿ ನಾನು ಶಾಸಕನಾಗಿ ಗೆದ್ದು ಬಂದಿದ್ದೇನೆ. ಹಿರಿತನ ನೋಡಿ ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಒತ್ತಾಯಿಸಿದ್ದಾರೆ. ಭದ್ರಾವತಿಯಲ್ಲಿ ನಾಲ್ಕನೇ ಬಾರಿ ಜಯಗಳಿಸಿದ್ದೇನೆ. ಕಾಗೋಡು ತಿಮ್ಮಪ್ಪ ನಂತರ ನಾನೇ ಜಯ ಗಳಿಸಿರೋದು. ನನಗೆ ಸಚಿವ ಸ್ಥಾನ ಕೊಡಬೇಕು ಎಂದು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಭದ್ರಾವತಿಯ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಬಿಜೆಪಿಯಿಂದ ಸಾಕಷ್ಟುಆಫರ್ ಬಂದರೂ ನಾನು ಪಕ್ಷ ಬಿಟ್ಟು ಹೋಗಲಿಲ್ಲ.
ಡಿ.ಕೆ.ಶಿವಕುಮಾರ್ ಅವರು ಸಂಗಮೇಶ್ವರ್ ಅವರನ್ನು ಗೆಲ್ಲಿಸಿ, ಮಂತ್ರಿ ಮಾಡುತ್ತೇವೆ ಎಂದಿದ್ದರು. ಜನ ಮತ ಹಾಕಿ ಗೆಲ್ಲಿಸಿಕೊಟ್ಟಿದ್ದಾರೆ. ಈಗ ಸಚಿವ ಸ್ಥಾನ ಸಿಗಲಿಲ್ಲ ಎಂದರೆ ಜನರಿಗೆ ಅನ್ಯಾಯ ಮಾಡಿದಂಗೆ ಆಗುತ್ತದೆ. ಜಿಲ್ಲೆಯಲ್ಲಿ ಈಗ ಗೆದ್ದಿರುವ ಕಾಂಗ್ರೆಸ್ ಶಾಸಕರಲ್ಲಿ ನಾನೇ ಹಿರಿಯ. ನಾಲ್ಕು ಬಾರಿ ಗೆದ್ದು ಬಂದಿದ್ದೇನೆ. ಇದರಿಂದ ಸಚಿವ ಸ್ಥಾನ ನೀಡುವ ಜೊತೆಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನಾನು ನನ್ನ ಹಿರಿತನ ಆಧಾರದ ಮೇಲೆ ಸಚಿವ ಸ್ಥಾನವನ್ನು ಕೇಳುತ್ತಿದ್ದೇನೆ. ನನಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರು ಸಚಿವ ಸ್ಥಾನ ಕೊಡುವ ಬಗ್ಗೆ ಭರವಸೆ ದೆ. ಪಕ್ಷ ನನಗೆ ಮಂತ್ರಿ ಸ್ಥಾನ ನೀಡದಿದ್ದರೂ ನಾನು ಪಕ್ಷದಲ್ಲೇ ಇರುತ್ತೇನೆ ಎಂದು ಹೇಳಿದ್ದಾರೆ.
undefined
ಬಿಜೆಪಿಯ ದುರಾಡಳಿತದಿಂದ ಕಾಂಗ್ರೆಸ್‌ಗೆ ಲಾಭ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
ಶಿವಮೊಗ್ಗ ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡಿದರೆ ಮುಂಬರುವ ಚುನಾವಣೆಯಲ್ಲಿ ಅನುಕೂಲ ಆಗುತ್ತದೆ. ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಸಚಿವ ಸ್ಥಾನ ಕೇಳುತ್ತಿರುವುದು ಅದು ಅವರಿಗೆ ಬಿಟ್ಟವಿಚಾರ. ಅವರು ಕೂಡ ಜೆಡಿಎಸ್‌ನಿಂದ ಒಂದು ಬಾರಿ, ಈಗ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಆದರೆ, ಪಕ್ಷದ ತೀರ್ಮಾನ ಮಾಡುತ್ತದೆ. ಹಿರಿತನದ ಆಧಾರದ ಮೇಲೆ ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸುತ್ತೇನೆ. ಮಂತ್ರಿ ಸ್ಥಾನ ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು, ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದೂ ಸಂಗಮೇಶ್ ಹೇಳಿದರು.
ಸಾಗರ ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿದ ಕಾರ್ಯಕರ್ತರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ನಗರಸಭೆ ವಿಪಕ್ಷ ನಾಯಕ ಮಂಡಗಳಲೆ ಗಣಪತಿ ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಹಾಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದು ಕಾರ್ಯಕರ್ತರಿಗೆ ಸಂತೋಷ ಉಂಟುಮಾಡಿದೆ. ಇಡೀ ರಾಜ್ಯದಲ್ಲಿ ಸಂಭ್ರಮ ಮನೆಮಾಡಿದೆ.
ಜೆಡಿಎಸ್ ಪಕ್ಷ ನಮಗೆ ತಾಯಿ, ದೇವೇಗೌಡರು ತಂದೆ ಇದ್ದಂತೆ: ಸಿ.ಎಸ್.ಪುಟ್ಟರಾಜು
ಸಂಘಟನಾಚತುರ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಆಗಿದ್ದು ನಮಗೆಲ್ಲ ಸಂತಸ ತಂದಿದೆ. ಸಿದ್ದರಾಯಮಯ್ಯ ಹಾಗೂ ಶಿವಕುಮಾರ್ ಇಬ್ಬರೂ ರಾಜ್ಯದಲ್ಲಿ ಪಕ್ಷವನ್ನು ಸದೃಢಗೊಳಿಸುವ, ಮುಖ್ಯವಾಗಿ ಜನಪರವಾದ ಆಡಳಿತ ನೀಡುತ್ತಾರೆ ಎಂಬ ವಿಶ್ವಾಸ ಜನರಿಗಿದೆ ಎಂದು ಹೇಳಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಕೋವಿ ಮಾತನಾಡಿ, ರಾಜ್ಯದಲ್ಲಿ ಬಡವರ, ಅಲ್ಪಸಂಖ್ಯಾತರ, ದೀನದಲಿತರ, ಹಿಂದುಳಿದವರ ಪರವಾದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಕಾರ್ಡ್‌ನಲ್ಲಿ ಮಹಿಳೆಯರಿಗೆ ವಿಶೇಷ ಸೌಲಭ್ಯಗಳನ್ನು ಘೋಷಣೆ ಮಾಡಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯವು ಸರ್ವಾಂಗೀಣ ಪ್ರಗತಿ ಸಾಧಿಸಲಿದೆ ಎಂದು ಹೇಳಿದರು.