
ಬೆಂಗಳೂರು(ಜ.19): ನನ್ನ ಒಂದು ವರ್ಷದ ಪರಿಶ್ರಮದ ಪರಿಣಾಮವಾಗಿ ವರಿಷ್ಠರು ನನ್ನನ್ನೇ ರಾಜ್ಯಾಧ್ಯಕ್ಷನನ್ನಾಗಿ ಮುಂದುವರೆಸುತ್ತಾರೆ ಎನ್ನುವ ದೃಢ ವಿಶ್ವಾಸ ಇದೆ ಎಂದು ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕರನ್ನಾಗಿ ಯಾರನ್ನು ಮಾಡಬೇಕೆಂಬುದರ ಕುರಿತು ರಾಜ್ಯಾಧ್ಯಕ್ಷ ಚುನಾವಣೆಯ ಉಸ್ತುವಾರಿ ಆಗಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಎಲ್ಲ ಹಿರಿಯರ ಜತೆ ಚರ್ಚಿಸಲಿದ್ದಾರೆ. ಅತಿ ಶೀಘ್ರದಲ್ಲೇ ಉತ್ತಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ನಾವು ರೆಡಿ: ಯತ್ನಾಳ್
ನಮ್ಮದು ಆಂತರಿಕ ಪ್ರಜಾಪ್ರಭುತ್ತ ವ್ಯವಸ್ಥೆಯಿರುವ ಪಕ್ಷ. ನನ್ನನ್ನು ಪಕ್ಷದ ಹಿರಿಯರು, ವರಿಷ್ಠರು ರಾಜ್ಯಾಧ್ಯಕ್ಷರಾಗಿ ಮಾಡಿದ್ದರು. ನಾನು ಆಗಿನಿಂದಲೂ ಸರ್ಕಾರದ ವಿರುದ್ಧ ಸತತ ಹೋರಾಟ ಮಾಡುತ್ತಿದ್ದೇನೆ. ನನ್ನ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ಬಗ್ಗೆ ಕಾರ್ಯಕರ್ತರಲ್ಲಿ ಸಮಾಧಾನ ಇದೆ ಎಂದರು.
ಇನ್ನು ತಮ್ಮ ಬಗ್ಗೆ ಅಪಸ್ವರ ಎತ್ತುತ್ತಿರುವವರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಕೆಲ ಹಿರಿಯ ಮುಖಂಡರು ಅಲ್ಲೊಂದು. ಇಲ್ಲೊಂದು ಹೇಳಿಕೆ ಕೊಡುತ್ತಿದ್ದಾರೆ. ಇದನ್ನು ನಾನು ಇಲ್ಲ ಅಂತ ಹೇಳುವುದಿಲ್ಲ ಎಂದು ತಿಳಿಸಿದರು.
ಅಧ್ಯಕ್ಷ ಚುನಾವಣೆ ಪ್ರಕ್ರಿಯೆ ಶೀಘ್ರ ಶುರು: ಚೌಹಾಣ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ನಾನ ಚುನಾವಣಾ ಪ್ರಕ್ರಿಯೆಗಳು ಶೀಘ್ರದಲ್ಲೇ ಆರಂಭವಾಗಲಿವೆ ಎಂದು ಕೇಂದ್ರ ಕೃಷಿ ಸಚಿವ ಹಾಗೂ ಚುನಾವಣೆ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವುದೇ ಗೊಂದಲ ಇಲ್ಲ ಎಲ್ಲರೂ ಚರ್ಚಿಸಿಯೇ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಬೂತ್ ಸಮಿತಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸಾನದವರೆಗೂ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.