
ಮದ್ದೂರು(ಡಿ.24): ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದೆ ಸುಮಲತಾ ಅಂಬರೀಷ್ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ನನ್ನ ಕರ್ಮಭೂಮಿ, ಈ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುವುದು ನನ್ನ ಬಯಕೆ ಎಂದರು.
ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಬೆಂಬಲಿಗರೂ ಸೇರಿ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಈ ಬಗ್ಗೆ ಮಾರ್ಚ್ ನಂತರ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
ಹಿಜಾಬ್ ನಿಷೇಧ ವಾಪಸ್ ; ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಮಂಡ್ಯದ 'ಹಿಜಾಬ್ ಲೇಡಿ' ಖ್ಯಾತಿಯ ಮಸ್ಕಾನ್
ಮಂಡ್ಯದಲ್ಲಿ ನನ್ನ ಪತಿ ಅಂಬರೀಷ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಾಕಷ್ಟು ಜನಪ್ರಿಯ ಕೆಲಸಗಳನ್ನು ಮಾಡಿ ಜನಮೆಚ್ಚುಗೆ ಪಡೆದುಕೊಂಡಿದ್ದಾರೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆಯೇ ಹೊರತು ಪಕ್ಷದ ತೀರ್ಮಾನಗಳಲ್ಲಿ ಭಾಗಿಯಾಗಿಲ್ಲ. ನಾನಿನ್ನೂ ಸ್ವತಂತ್ರ ಲೋಕಸಭಾ ಸದಸ್ಯೆ. ನಂತರದ ದಿನಗಳಲ್ಲಿ ನನ್ನ ಸ್ಪಷ್ಟ ನಿರ್ಧಾರ ಪ್ರಕಟಿಸುತ್ತೇನೆ ಎಂದರು.
ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ನನ್ನ ಆಸೆ
ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆಯೇ ಹೊರತು ಪಕ್ಷದ ತೀರ್ಮಾನಗಳಲ್ಲಿ ಭಾಗಿಯಾಗಿಲ್ಲ. ನಾನಿನ್ನೂ ಸ್ವತಂತ್ರ ಲೋಕಸಭಾ ಸದಸ್ಯೆ ಎಂದು ಮಂಡ್ಯ ಸಂಸದೆ ಸುಮಲತಾ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.