ಈಗಾಗಲೇ ಕಳೆದ ಐದು ವರ್ಷಗಳಿಂದ ಬಳ್ಳಾರಿ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದೇನೆ. ಪಕ್ಷದ ಹಿರಿಯ ನಾಯಕರು ಸ್ಪರ್ಧಿಸಲು ತಿಳಿಸಿದ್ದು, ಅಂತಿಮವಾಗಿ ಕಾಂಗ್ರೆಸ್ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ವಿಶ್ವಾಸವಿದೆ ಎಂದ ವಿ.ಎಸ್.ಉಗ್ರಪ್ಪ
ಹಿರಿಯೂರು(ಸೆ.23): ಸಂಸತ್‌ನಲ್ಲಿ ಬಳ್ಳಾರಿ ಜನತೆಯ ಹಿತ ಕಾಪಾಡುವ ಉದ್ದೇಶದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆಯಲ್ಲಿದ್ದೇನೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಳೆದ ಐದು ವರ್ಷಗಳಿಂದ ಬಳ್ಳಾರಿ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದೇನೆ. ಪಕ್ಷದ ಹಿರಿಯ ನಾಯಕರು ಸ್ಪರ್ಧಿಸಲು ತಿಳಿಸಿದ್ದು, ಅಂತಿಮವಾಗಿ ಕಾಂಗ್ರೆಸ್ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ವಿಶ್ವಾಸವಿದೆ ಎಂದರು.
undefined
ಮಹಿಳೆಯರ ಗಮನ ಬೇರೆಡೆ ಸೆಳೆಯಲು ಪ್ರಧಾನಿ ಮೋದಿ ಮೀಸಲಾತಿ ನಾಟಕ: ವಿ.ಎಸ್.ಉಗ್ರಪ್ಪ
ರಾಜ್ಯದ ನೆಲ, ಜಲ ಭಾಷೆ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು. ಭಾರತ ಒಂದು ಒಕ್ಕೂಟ ವ್ಯವಸ್ಥೆಯಲ್ಲಿದೆ. ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಸಭೆ ನಡೆಸಬೇಕು. ಜೊತೆಗೆ ಕಾವೇರಿ ನದಿಯಲ್ಲಿ ಎಷ್ಟು ನೀರು ಇದೆ ಎಂಬ ವಾಸ್ತವ ಸ್ಥಿತಿ ತಿಳಿದು ಸಮಸ್ಯೆಗೆ ನಾಂದಿ ಹಾಡಬೇಕು ಎಂದರು.
ನಮ್ಮ ರಾಜ್ಯದ ಜನತೆ ಹಾಗೂ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಭಾಷೆ, ನೆಲ, ಜಲದ ವಿಷಯ ಬಂದಾಗ ನಾವು ರಾಜಕೀಯ ಮಾಡಬಾರದು. ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರು ನಡೆಸುವ ಹೋರಾಟ ಶಾಂತಿಯುತವಾಗಿ ನಡೆಯಲಿ. ನಮಗೆ ಅನ್ಯಾಯ ಆದಾಗ ಹೋರಾಟದ ಅನಿವಾರ್ಯ. ಹಾಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ನಮ್ಮ ಹಕ್ಕನ್ನು ಪಡೆಯುವ ಹೋರಾಟ ನ್ಯಾಯಯುತವಾಗಿ, ಶಾಂತಿಯುತವಾಗಿ ಇರಬೇಕು ಎಂದರು. ಈ ಸಂದರ್ಭದಲ್ಲಿ ಕೆಪಿಸಿಸಿ ಒಬಿಸಿ ಪ್ರಧಾನ ಕಾರ್ಯದರ್ಶಿ ಗುಯಿಲಾಳು ನಾಗರಾಜಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.