ಸಿಎಂ ಸ್ಥಾನದ ಕುರಿತಂತೆ ಯಾರೂ ಹೇಳಿಕೆ ನೀಡುತ್ತಿಲ್ಲ. ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. ಎಲ್ಲರೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳುತ್ತಿದ್ದಾರೆ. ಸಿಎಂ ಸ್ಥಾನ ಖಾಲಿಯಾದಾಗ ಮಾತ್ರ ಅದರ ಬಗ್ಗೆ ಚರ್ಚಿಸಲಾಗುವುದು. ನಾನೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು(ಸೆ.12): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ, ಹೀಗಾಗಿ ಯಾರೂ ಸಿಎಂ ಸ್ಥಾನಕ್ಕಾಗಿ ಮಾತನಾಡುತ್ತಿಲ್ಲ. ಯಾವುದೇ ಗೊಂದಲವಿಲ್ಲದೆ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ತನ್ಮೂಲಕ ಮುಂದಿನ ಸಿಎಂ ಕುರಿತ ಚರ್ಚೆಗೆ ತೆರೆ ಎಳೆಯಲು ಯತ್ನಿಸಿದ್ದಾರೆ.
ಅರಣ್ಯ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತಂತೆ ಯಾರೂ ಹೇಳಿಕೆ ನೀಡುತ್ತಿಲ್ಲ. ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. ಎಲ್ಲರೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳುತ್ತಿದ್ದಾರೆ. ಸಿಎಂ ಸ್ಥಾನ ಖಾಲಿಯಾದಾಗ ಮಾತ್ರ ಅದರ ಬಗ್ಗೆ ಚರ್ಚಿಸಲಾಗುವುದು. ನಾನೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ತೆರಿಗೆ ಅನ್ಯಾಯ ತಡೆಗೆ ಪ್ಲಾನ್: 8 ಸಿಎಂಗಳ ತಂಡ ಕಟ್ಟಲು ಸಿದ್ದರಾಮಯ್ಯ ಯತ್ನ..!
ಮುಂದೆಯೂ ಸಿದ್ದರಾಮಯ್ಯ ಸಿಎಂ: ಖಂಡ್ರೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಿ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಮುಂದಿನ ಮೂರುವರೆ ವರ್ಷ ಸರ್ಕಾರ ಸದೃಢವಾಗಿರಲಿದೆ ಹಾಗೂ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಾರೆ. ಅದರಲ್ಲ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.