ಅವಧಿ ಮುಗಿದ ಬಳಿಕ ಬಿಜೆಪಿ ಸೇರುವೆ: ಸುಮಲತಾ

By Kannadaprabha NewsFirst Published Mar 7, 2024, 7:32 AM IST
Highlights

ಬಿಜೆಪಿ ಪಕ್ಷ ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಯಾವುದೂ ಫೈನಲ್ ಆಗುವುದಿಲ್ಲ. ಟಿಕೆಟ್ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ಅದು ನನ್ನ ವೈಯಕ್ತಿಕ. ಆದರೆ, ಪಕ್ಷದಿಂದ ಬರುವುದೇ ಅಧಿಕೃತ ಘೋಷಣೆ. ಕಳೆದ ಎಂಪಿಗಳು ಮಾಡಿರುವ ಕೆಲಸಕ್ಕೂ ನನ್ನ ಕೆಲಸಕ್ಕೂ ವ್ಯತ್ಯಾಸವಿದೆ. ಬಿಜೆಪಿ ಸಿದ್ಧಾಂತ, ನರೇಂದ್ರ ಮೋದಿ ಕೆಲಸದ ರೀತಿ ನೋಡಿ ನಾನು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ ಎಂದ ಸಂಸದೆ ಸುಮಲತಾ ಅಂಬರೀಶ್

ಮಂಡ್ಯ(ಮಾ.07):  ಲೋಕಸಭಾ ಅವಧಿ ಮುಗಿದ ಬಳಿಕ ನಾನು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತೇನೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳಿರುವುದರಿಂದ ಬಿಜೆಪಿ ಪಕ್ವನ್ನು ಸೇರುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಪಕ್ಷ ಸೇರ್ಪಡೆಯಾಗಿಲ್ಲವೆಂಬ ವಿಚಾರವನ್ನು ದೊಡ್ಡದು ಮಾಡುವುದರಲ್ಲಿ ಅರ್ಥವಿಲ್ಲ. ರೆಕಾರ್ಡ್ ಪಟ್ಟಿ, ಕೆಲಸ ನೋಡಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅದಕ್ಕೆ ನನಗೆ ಮೈತ್ರಿ ಟಿಕೆಟ್ ಸಿಗುವ ಬಗ್ಗೆ ಪೂರ್ಣ ವಿಶ್ವಾಸವಿದೆ ಎಂದಿದ್ದಾರೆ.

ಬಿಜೆಪಿ ಪಕ್ಷ ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಯಾವುದೂ ಫೈನಲ್ ಆಗುವುದಿಲ್ಲ. ಟಿಕೆಟ್ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ಅದು ನನ್ನ ವೈಯಕ್ತಿಕ. ಆದರೆ, ಪಕ್ಷದಿಂದ ಬರುವುದೇ ಅಧಿಕೃತ ಘೋಷಣೆ. ಕಳೆದ ಎಂಪಿಗಳು ಮಾಡಿರುವ ಕೆಲಸಕ್ಕೂ ನನ್ನ ಕೆಲಸಕ್ಕೂ ವ್ಯತ್ಯಾಸವಿದೆ. ಬಿಜೆಪಿ ಸಿದ್ಧಾಂತ, ನರೇಂದ್ರ ಮೋದಿ ಕೆಲಸದ ರೀತಿ ನೋಡಿ ನಾನು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ ಎಂದರು.

ದೇವರ ಆಶೀರ್ವಾದವಿದ್ದರೆ ಮಂಡ್ಯದಲ್ಲಿ ಮನೆ ಕಟ್ಟುವೆ: ಸುಮಲತಾ ಅಂಬರೀಶ್

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ದುಡ್ಡು ಪಡೆಯುವ ಸಂಸ್ಕೃತಿ ಇದೆ. ಪಕ್ಷದೊಂದಿಗೆ ಸಂಪರ್ಕವೇ ಇಲ್ಲದವರನ್ನು ಕರೆತಂದು ಅಭ್ಯರ್ಥಿ ಮಾಡಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಅಭ್ಯರ್ಥಿ ಎಂದು ಪರಿಚಯ ಮಾಡುತ್ತಾರೆ. ದುಡ್ಡಿನಿಂದ ಮಂಡ್ಯ ಜನರನ್ನ ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂದು ನುಡಿದರು.

click me!