ನಾನಾಗಲಿ ಅಥವಾ ನನ್ನ ಮಗನಾಗಲಿ ಸ್ಪರ್ಧಿಸುವುದಿಲ್ಲ

By Kannadaprabha NewsFirst Published Sep 29, 2021, 8:11 AM IST
Highlights
  • ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಉಪಚುನಾವಣೆಯಲ್ಲಿ ನಾನಾಗಲಿ ಅಥವಾ ನನ್ನ ಮಗನಾಗಲಿ ಸ್ಪರ್ಧಿಸುವುದಿಲ್ಲ. 
  • ಸ್ಪರ್ಧೆ ಮಾಡುತ್ತಾರೆಂಬುದು ಸತ್ಯಕ್ಕೆ ದೂರವಾದ ಮಾತು. ಆ ಕ್ಷೇತ್ರದ ಚುನಾವಣೆ ಉಸ್ತುವಾರಿಯನ್ನು ನನಗೆ ವಹಿಸಲಾಗಿದೆ

ಅಥಣಿ (ಸೆ.29):  ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ವಿಧಾನ ಸಭೆ ಉಪಚುನಾವಣೆಯಲ್ಲಿ (Assembly Election) ನಾನಾಗಲಿ ಅಥವಾ ನನ್ನ ಮಗನಾಗಲಿ ಸ್ಪರ್ಧಿಸುವುದಿಲ್ಲ. ಸ್ಪರ್ಧೆ ಮಾಡುತ್ತಾರೆಂಬುದು ಸತ್ಯಕ್ಕೆ ದೂರವಾದ ಮಾತು. ಆ ಕ್ಷೇತ್ರದ ಚುನಾವಣೆ ಉಸ್ತುವಾರಿಯನ್ನು ನನಗೆ ವಹಿಸಲಾಗಿದ್ದು, ಅಲ್ಲಿ ಸ್ಪರ್ಧಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನನ್ನ ಗುರಿ ಎಂದು ಮಾಜಿ ಡಿಸಿಎಂ, ವಿಧಾನ ಪರಿಷತ ಸದಸ್ಯ ಲಕ್ಷ್ಮಣ ಸಂಗಪ್ಪ ಸವದಿ (Laxman Savadi) ಹೇಳಿದರು.

ತಾಲೂಕಿನ ಝಂಜುರವಾಡ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಬ್ಯಾಂಕಿನ ಸಾಲ ವಿತರಣೆ ಸಮಾರಂಭದ ನಂತರ  ಮಾತನಾಡಿದರು.

ಬಿಜೆಪಿಗೆ ಬರಲು ಹಣದ ಆಮಿಷ: ಶಾಸಕರ ಬಳಿಯೇ ಕೇಳ್ತೇನೆ ಎಂದ ಲಕ್ಷ್ಮಣ ಸವದಿ

ಸಿಂದಗಿ ಕ್ಷೇತ್ರಕ್ಕೆ ತೆರಳಿ ಅಲ್ಲಿರುವ ಮುಖಂಡರು, ಸ್ಥಳೀಯ ನಾಯಕರು, ಸಮುದಾಯದ ಮುಖಂಡರನ್ನು ಜತೆ ಸಭೆ ನಡೆಸುತ್ತೇನೆ. ಅಭ್ಯರ್ಥಿ ಯಾರೆಂಬುವುದನ್ನು ಇನ್ನೂ ಘೋಷಣೆ ಮಾಡಿಲ್ಲ. ಸ್ಥಳೀಯರ ಭಾವನೆ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.

ಉಸ್ತುವಾರಿ ನೇಮಕ 

ಹಾನಗಲ್​​ ಹಾಗೂ ಸಿಂದಗಿ (Sindagi) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ (By Election) ದಿನಾಂಕ ಘೋಷಣೆಯಾಗಿದ್ದು, ಇದೇ ಅಕ್ಟೋಬರ್​ 30ರಂದು ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆಯೇ ಬಿಜೆಪಿ(BJP), ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ಉಸ್ತುವಾರಿಯನ್ನ ನೇಮಿಸಿದೆ. ಪರಿಷತ್ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ (Laxman Savadi) ಅವರನ್ನ ಉಸ್ತುವಾರಿಯಾಗಿ ಮಾಡಿದೆ.

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಗೆ ಬಿಜೆಪಿ ಇಂದು (ಸೆ.28) ಸಂಜೆಯೊಳಗೆ ಉಸ್ತುವಾರಿಯನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಲಕ್ಷ್ಮಣ ಸವದಿ, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಗೆ ನಾನು ಬಿಜೆಪಿಯ ಉಸ್ತುವಾರಿ. ನಾನು ಬಿಜೆಪಿಯಿಂದ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ. ಉಪ-ಚುನಾವಣೆಯನ್ನು ಎದುರಿಸುತ್ತೇನೆ. ಆದ್ರೆ, ನಾನು ಅಭ್ಯರ್ಥಿಯಾಗುವುದಿಲ್ಲ ಎಂದರು.

ಈ ಮೂಲಕ ಸಿಂದಗಿ ಉಪಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎನ್ನುವ ಊಹಾಪೋಹಗಳಿಗೆ ಸವದಿ ತೆರೆ ಎಳೆದಿದ್ದು, ಎಲ್ಲಾ ಗೊಂದಲಗಳಿಗೆ ಫುಲ್ ಸ್ಟಾಪ್ ಬಿದ್ದಿದೆ.

click me!